Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ

Team Udayavani, Nov 19, 2024, 2:29 PM IST

10-hosanagara

ಹೊಸನಗರ: ನಗರದ ಹೋಬಳಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲ. ಸಿಬ್ಬಂದಿಗಳ ಕೊರತೆ. ಸಕಾಲದಲ್ಲಿ ಚಿಕಿತ್ಸೆ ಸಿಗುತ್ತಿಲ್ಲ. ತುರ್ತು ಸೇವೆಯೂ ಇಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನ.19ರ ಮಂಗಳವಾರ ಬೆಳಿಗ್ಗೆ ಆಸ್ಪತ್ರೆ ಮುಂದೆ ದೌಡಾಯಿಸಿದ ಕಾರ್ಯಕರ್ತರು ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಗಮನಹರಿಸದ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಬಿಜೆಪಿ ಸರ್ಕಾರವಿದ್ದಾಗ ನಗರದ ಹೋಬಳಿಯ 24×7 ಆಸ್ಪತ್ರೆಗೆ ಮೂವರು ವೈದ್ಯರನ್ನು ನೇಮಿಸಲಾಗಿತ್ತು. ಇಲ್ಲಿರುವ ಆಂಬ್ಯುಲೆನ್ಸ್ ಪಂಚರ್ ಆಗಿ 4 ದಿನಗಳಿಂದ ನಿಂತಿದ್ದರೂ ಪಂಚರ್ ಹಾಕುವ ಗೋಜಿಗೆ ಹೋಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ತಾಲೂಕು ಬಿಜೆಪಿ ಯುವ ಮೋರ್ಚಾದ ಮಾಜಿ ಅಧ್ಯಕ್ಷ ನಿತಿನ್ ಮಾತನಾಡಿ, ನೋವಿನಿಂದ ಪ್ರತಿಭಟಿಸಲಾಗುತ್ತಿದೆ. ನಗರ ಪ್ರವಾಸೋದ್ಯಮವಾಗಿ ಬೆಳೆದಿದೆ. ಇಲ್ಲಿರುವುದು ಹೋಬಳಿ ಕೇಂದ್ರದ ಆಸ್ಪತ್ರೆಯಾಗಿದೆ. ಒಬ್ಬ ವೈದ್ಯರು ಕೂಡ ಇಲ್ಲ. ವೈದ್ಯಾಧಿಕಾರಿಗಳು ಅಸಡ್ಡೆ ಉತ್ತರಗಳನ್ನು ನೀಡುತ್ತಾರೆ ಎಂದು ಆರೋಪಿಸಿದರು.

ಇಲ್ಲಿನ ಲ್ಯಾಬ್ ಟೆಕ್ನಿಷಿಯನ್ ಗಳನ್ನು ಕಾರಣವಿಲ್ಲದೆ ಹುಂಚಾ ಹೋಬಳಿಗೆ ವರ್ಗಾಯಿಸಲಾಗಿದೆ.‌ ಹಾಗಾದರೆ ನಗರ ಹೋಬಳಿ ಜನ ಏನು ಮಾಡಬೇಕು ಎಂದು ಪ್ರಶ್ನಿಸಿದ ಅವರು, ಈ ಆಸ್ಪತ್ರೆಗೆ ಕೂಡಲೇ ಇಬ್ಬರು ವೈದ್ಯರನ್ನು ನೇಮಿಸಬೇಕು. ಲ್ಯಾಬ್ ಟೆಕ್ನಿಷಿಯನ್ ಅವರನ್ನು ನೇಮಿಸಬೇಕು. ಅಂಬ್ಯುಲೆನ್ಸ್ ಸುವ್ಯವಸ್ಥೆಯಲ್ಲಿರಬೇಕು ಎಂದು ಆಗ್ರಹಿಸಿದರು.

ತಾಲೂಕು ಬಿಜೆಪಿ ಅಧ್ಯಕ್ಷ ಕೆ.ವಿ.ಸುಬ್ರಹ್ಮಣ್ಯ ಮತ್ತಿಮನೆ, ನಗರ ಹೋಬಳಿ ಬಡ ರೈತರು ಕೂಲಿಕಾರ್ಮಿಕರನ್ನು ಹೊಂದಿದೆ. ನಗರ ಹೋಬಳಿ ಕೇಂದ್ರದ ಆಸ್ಪತ್ರೆಯಿರುವ ಏಕೈಕ ಆಶಾಕಿರಣ. ಸಣ್ಣಪುಟ್ಟ ಚಿಕಿತ್ಸೆಗೂ ದೂರದ ಊರಿಗೆ ಹೋಗಬೇಕಾಗಿದೆ. ಈ ಸಂಬಂಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನಗರ ಹೋಬಳಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹೆಚ್.ಜಿ. ರಮಾಕಾಂತ್ ಹೆಬ್ಬುರುಳಿ, ಗ್ರಾಪಂ ಸದಸ್ಯರಾದ ಕುಮಾರ್ ಕೆ ಬಿ, ಅರುಣ ಬೈಸೆ, ಪ್ರಮುಖರಾದ ಕೆ ವಿ ಕೃಷ್ಣಮೂರ್ತಿ,  ಮಧುಕರ್ ಶೆಟ್ಟಿ, ಸುರೇಶ್, ಉಮೇಶ ಕಾಡಿಗ್ಗೇರಿ ಇತರರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.