ಸಣ್ಣ-ಅತೀ ಸಣ್ಣ ರೈತರು ಸಬ್ಸಿಡಿಯಿಂದ ವಂಚಿತ!

ಸೂಕ್ಷ್ಮ ನೀರಾವರಿ ಯೋಜನೆಯಡಿ ರೈತರಿಗೆ ಪೈಪ್‌-ಜೆಟ್‌ ವಿತರಣೆ

Team Udayavani, Apr 30, 2020, 1:27 PM IST

30-April-12

ಹೊಸನಗರ: ಸೂಕ್ಷ್ಮ ನೀರಾವರಿ ಯೋಜನೆಯಡಿ ಕೃಷಿ ಇಲಾಖೆಗೆ ಪೈಪ್‌ ವಿಲೇವಾರಿ ಮಾಡುತ್ತಿರುವುದು

ಹೊಸನಗರ: ಕೃಷಿ ಇಲಾಖೆ ಸೂಕ್ಷ್ಮ ನೀರಾವರಿ ಯೋಜನೆಯಡಿ ರೈತರಿಗೆ ಸಬ್ಸಿಡಿಯಲ್ಲಿ ಪೈಪ್‌ ಮತ್ತು ಜೆಟ್‌ಗಳನ್ನು ವಿತರಿಸುತ್ತಿದೆ. ಆದರೆ ಈ ಯೋಜನೆಯಿಂದ ಸಣ್ಣ ಮತ್ತು ಅತೀ ಸಣ್ಣ ರೈತರು ಮಾತ್ರ ನಿರ್ಲಕ್ಷಕ್ಕೆ ಒಳಗಾಗಿದ್ದಾರೆ. ಈಗಾಗಲೇ ಕೃಷಿ ಇಲಾಖೆಯಿಂದ ಭತ್ತದ ಕೃಷಿಗೆ ಬಳಸಿಕೊಳ್ಳಲು ರೈತರಿಗೆ 30 ಪೈಪ್‌ ಮತ್ತು 5 ಜೆಟ್‌ಗಳನ್ನು ರಿಯಾಯಿತಿ ದರದಲ್ಲಿ ರೂ.1900ಕ್ಕೆ ನೀಡಲಾಗುತ್ತಿದೆ. ಆದರೆ ಇದನ್ನು ಪಡೆಯಲು ರೈತ ಒಂದು ಎಕರೆ ಒಂದು ಗುಂಟೆ ಭತ್ತದ ಗದ್ದೆ ಹೊಂದಿರಬೇಕು. ಅಂತಹ ರೈತರನ್ನು ಗುರುತಿಸಿ ಸಹಾಯಧನದ ಅಡಿಯಲ್ಲಿ ಕೃಷಿ ಪರಿಕರವನ್ನು ವಿತರಿಸಲಾಗುತ್ತಿದೆ.

ಸಣ್ಣ ರೈತರಿಗೆ ಪ್ರಯೋಜನವಿಲ್ಲ: ಆದರೆ ಸರ್ಕಾರದ ಈ ಯೋಜನೆಯಿಂದ ಸಣ್ಣ ರೈತರಿಗೆ ಪ್ರಯೋಜನ ಇಲ್ಲದಂತಾಗಿದೆ. ಒಂದು ಎಕರೆಗಿಂತ ಕಡಿಮೆ ಭತ್ತದ ಜಮೀನು ಹೊಂದಿರುವ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಯೋಜನೆಯಡಿ ಸೌಲಭ್ಯ ಸಿಗುತ್ತಿಲ್ಲ. ಮಲೆನಾಡು ಭಾಗದಲ್ಲಿ ಹಿಂದೆ ಕಂಡು ಬಂದ ಅತಿವೃಷ್ಟಿಯಿಂದಾಗಿ ಸಣ್ಣ ರೈತರು ಜರ್ಜರಿತರಾಗಿದ್ದು, ಈಗ ಯೋಜನೆಯ ಲಾಭವೂ ಇಲ್ಲದಂತಾಗಿದೆ.

ಭತ್ತದ ಬೆಳೆ ನಮೂದಾಗಿದ್ದರಷ್ಟೇ ಸೌಲಭ್ಯ: ಆರ್‌ಟಿಸಿಯಲ್ಲಿ ಭತ್ತದ ಬೆಳೆ ನಮೂದಾಗಿದ್ದರೆ ಮಾತ್ರ ಸಹಾಯಧನದಡಿ ಪೈಪ್‌ ಹಾಗೂ ಜೆಟ್‌ಗಳನ್ನು ವಿತರಿಸಲಾಗುತ್ತಿದೆ. ಆದರೆ ಬಹುತೇಕ ರೈತರ ಪಹಣಿಯಲ್ಲಿ ಕಂಪ್ಯೂಟರ್‌ ದೋಷದಿಂದ ಬೆಳೆ ಕಾಲಂ ನಮೂದಾಗಿಲ್ಲ. ಈ ಕಾರಣದಿಂದಲೂ ರೈತರು ಈ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಮಲೆನಾಡು ಭಾಗದಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರು ಹೆಚ್ಚಿದ್ದು, ಸರ್ಕಾರದ ಸಹಾಯಧನ ಯೋಜನೆಯಿಂದ ವಂಚಿತರಾಗುವಂತೆ ಮಾಡಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಯೋಜನೆಯನ್ನು ಸಣ್ಣ ರೈತರಿಗೂ ವಿಸ್ತರಿಸುವಂತೆ ರೈತರು ಒತ್ತಾಯಿಸಿದ್ದಾರೆ. ಅಲ್ಲದೆ ಪಹಣಿಯಲ್ಲಿ ಬೆಳೆ ನಮೂದಾಗಿರದಿದ್ದರೆ ಅದು ರೈತರ ತಪ್ಪಲ್ಲ. ಬೆಳೆ ಕಾಲಂನ್ನು ತುಂಬಿಕೊಂಡು ಯೋಜನೆ ವ್ಯಾಪ್ತಿಗೆ ಸೇರಿಸುವಂತೆ ಕೂಡ ಒತ್ತಾಯ ಕೇಳಿ ಬಂದಿದೆ.

ಸಣ್ಣ ರೈತರೇ ಹೆಚ್ಚು
ಮಲೆನಾಡು ಭಾಗದಲ್ಲಿ ಸಣ್ಣ ರೈತರೇ ಹೆಚ್ಚಾಗಿದ್ದಾರೆ. ಒಂದು ಎಕರೆಗಿಂತ ಕಡಿಮೆ ಭತ್ತದ ಭೂಮಿ ಹೊಂದಿದ್ದರೆ ಅವರಿಗೆ ಇರುವ ಯೋಜನೆಯನ್ನು ಅರ್ಧದಷ್ಟು ಕಡಿಮೆ ಮಾಡಿ ಒದಗಿಸಲಿ. ಸಣ್ಣರೈತರಿಗೂ ನೀರಿನ ಸರಬರಾಜಿಗೆ ಪೈಪ್‌ಲೈನ್‌ ಅಗತ್ಯವಿದೆ.
ಚಂದ್ರಪ್ಪ ಕೊಡಸೆ,
ರೈತ ಹೆಬ್ಬುರುಳಿ.

ಸಡಿಲಿಕೆಗೆ ಪ್ರಸ್ತಾಪ
ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಈ ಸಮಸ್ಯೆಯಿದ್ದು, ಸಡಿಲಿಕೆ ನೀಡುವಂತೆ ಇಲಾಖೆ ಹಿರಿಯ ಅಧಿಕಾರಿಗಳಿಗೆ ಪ್ರಸ್ತಾಪ ಸಲ್ಲಿಸಲಾಗಿದೆ. ಈಗಾಗಲೇ ನಡೆದಿರುವ ಸಭೆಗಳಲ್ಲೂ ಕೂಡ ಈ ಬಗ್ಗೆ ಚರ್ಚಿಸಲಾಗಿದೆ. ಆದರೆ ಸದ್ಯ ಇರುವ ಗೈಡ್‌ಲೈನ್‌ ಆಧಾರದ ಮೇಲೆ ಪೈಪ್‌ ಮತ್ತು ಜೆಟ್‌ ವಿತರಿಸಲಾಗುತ್ತಿದೆ.
ಡಾ.ಎಂ.ಕಿರಣಕುಮಾರ್‌, ಜಂಟಿ ಕೃಷಿ
ನಿರ್ದೇಶಕರು, ಶಿವಮೊಗ್ಗ

ಕುಮುದ ನಗರ

ಟಾಪ್ ನ್ಯೂಸ್

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.