ಹೊಸನಗರ ತಾಲೂಕಿನಲ್ಲಿ 1611 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು
Team Udayavani, Jun 20, 2020, 5:51 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸನಗರ: ತಾಲೂಕಿನಲ್ಲಿ ಒಟ್ಟು 1611 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ತಾಲೂಕಿನಲ್ಲಿ ಒಟ್ಟು ಐದು ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಹಶೀಲ್ದಾರ್ ಎಸ್.ವಿ. ರಾಜೀವ್ ತಿಳಿಸಿದರು.
ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ರಿಪ್ಪನ್ಪೇಟೆಯ ಮೇರಿ ಮಾತಾ, ಸರ್ಕಾರಿ ಪಪೂ ಕಾಲೇಜು, ಹೊಸನಗರದಲ್ಲಿ ಸರ್ಕಾರಿ ಪಪೂ ಕಾಲೇಜು, ಹೋಲಿ ರಿಡೀಮರ್ ಶಾಲೆ, ಅಮೃತದಲ್ಲಿನ ಸರ್ಕಾರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರಗಳಾಗಿರುತ್ತವೆ. ಜೂ. 25ರಿಂದ ಜು. 4ರ ವರೆಗೆ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗೆ ಬರುವ ಎಲ್ಲ ವಿದ್ಯಾರ್ಥಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೆ„ಸ್ ಕಡ್ಡಾಯವಾಗಿರುತ್ತದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್, ವೃತ್ತ ನಿರೀಕ್ಷಕ ಗುರಣ್ಣ ಹೆಬ್ಟಾಳ್, ತಾಪಂ ಇಒ ಪ್ರವೀಣ್ಕುಮಾರ್, ಪಪಂ ಮುಖ್ಯಾಧಿಕಾರಿ ಬಾಲಚಂದ್ರಪ್ಪ, ತಾಲೂಕು ವೈದ್ಯಾಧಿ ಕಾರಿ ಸುರೇಶ್ ನಾಯ್ಕ, ಕ್ಷೇತ್ರ ಸಮಾನ್ವಯಾಧಿಕಾರಿ ನಾಗರಾಜ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.