BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


Team Udayavani, Apr 27, 2024, 12:13 AM IST

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

ಶಿವಮೊಗ್ಗ: ಯಡಿಯೂರಪ್ಪ ಅವರಿಗೆ ಮೋದಿ ಬಗ್ಗೆ ಗೌರವ ಇದ್ದರೆ, ಅವರ ಸಿದ್ಧಾಂತ ಒಪ್ಪಿಕೊಳ್ಳುವುದಾದರೆ ತತ್‌ಕ್ಷಣವೇ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕು ಎಂದು ಲೋಕಸಭಾ ಚುನಾವಣೆ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಆಗ್ರಹಿಸಿದರು.

ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ನಿವಾಸದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಸೋನಿಯಾ ಗಾಂಧಿ  ಅವರ ಕುಟುಂಬ ರಾಜಕೀಯವನ್ನು ಟೀಕಿಸಿದ್ದಾರೆ.

ಈ ವೇಳೆ ಅವರ ಪಕ್ಕದಲ್ಲೇ ಯಡಿಯೂರಪ್ಪ ಅವರು ಕೂತಿದ್ದಾರೆ. ಇವರಿಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕು. ಇಲ್ಲ, ಮೋದಿ ಸಭೆಗೆ ಯಡಿಯೂರಪ್ಪ ಹೋಗಬಾರದು ಎಂದರು.

ನನ್ನ ಜೀವನದಲ್ಲಿ ಪಕ್ಷದ ನಾಯಕರು ಹೇಳಿದ ಯಾವ ಮಾತನ್ನು ನಾನು ಮೀರಿಲ್ಲ. ಅವತ್ತು ಸಂಗೊಳ್ಳಿ ರಾಯಣ್ಣ ಬ್ರಿàಗೇಡ್‌ ಬಿಟ್ಟಿದ್ದರ ಪರಿಣಾಮ ಹಿಂದುಳಿದವರು, ದಲಿತರು ಎಲ್ಲ ಕಾಂಗ್ರೆಸ್‌ಗೆ ಹೋಗಿದ್ದಾರೆ ಎಂದು ಟೀಕಿಸಿದರು.

ಹಿಂದೂ ಯುವತಿ ನೇಹಾ ಹತ್ಯೆಯಾದಾಗ ವರದಿ ಕೊಡುವುದಕ್ಕಿಂತ ಮುನ್ನವೇ ಸಿಎಂ, ಸಚಿವರು ಈ ರೀತಿ ಹೇಳಿಕೆ ಕೊಟ್ಟರೆ, ಸಿಐಡಿ ಸಂಸ್ಥೆ ಇದಕ್ಕೆ ವ್ಯತಿರಿಕ್ತ ಹೇಳಿಕೆ ಹೇಗೆ ಕೊಡುತ್ತದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ವಿಜಯೇಂದ್ರ ಮುಖ ನೋಡಿ ಯಾರೂ ಮತ ಹಾಕರು: ಈಶ್ವರಪ್ಪ
ಶಿವಮೊಗ್ಗ: ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಮುಖ ನೋಡಿ ಜನ ಬಿಜೆಪಿಗೆ ಮತ ಹಾಕುತ್ತಿದ್ದಾರೆ. ರಾಜ್ಯದಲ್ಲೂ ಮೋದಿ ಮುಖ ನೋಡಿಯೇ ಮತ ಹಾಕುತ್ತಿದ್ದಾರೆ ಹೊರತು ವಿಜಯೇಂದ್ರ ಮುಖ ನೋಡಿದರೆ ಯಾರೂ ಮತ ಹಾಕುವುದಿಲ್ಲ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ ಕ್ಷೇತ್ರದಲ್ಲಿ ಎಷ್ಟು ಬೂತ್‌ ಇದೆ ಎಂಬುದೇ ವಿಜಯೇಂದ್ರಗೆ ಗೊತ್ತಿಲ್ಲ. ಯಡಿಯೂರಪ್ಪಗೆ ಮೋದಿ ಬಗ್ಗೆ ಗೌರವ ಇದ್ದರೆ, ಅವರ ಸಿದ್ಧಾಂತ ಒಪ್ಪಿಕೊಳ್ಳುವುದಾದರೆ ತತ್‌ಕ್ಷಣವೇ ಮಗ ನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕು. ನನ್ನ ಜೀವನದಲ್ಲಿ ಪಕ್ಷದ ನಾಯಕರು ಹೇಳಿದ ಯಾವ ಮಾತನ್ನೂ ನಾನು ಮೀರಿಲ್ಲ. ಆವತ್ತು ರಾಯಣ್ಣ ಬ್ರಿಗೇಡ್‌ ಬಿಟ್ಟಿದ್ದರ ಪರಿಣಾಮ ಹಿಂದುಳಿದವರು, ದಲಿತರು ಎಲ್ಲ ಕಾಂಗ್ರೆಸ್‌ಗೆ ಹೋಗಿದ್ದಾರೆ ಎಂದರು.

ಟಾಪ್ ನ್ಯೂಸ್

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.