ನೆಲ-ಜಲ ಕಾನೂನು ಬದ್ಧವಾಗಿದ್ದರೆ, ಬೇರೆ ರಾಜ್ಯಕ್ಕೆ ಒಂದಿಂಚೂ ಜಾಗ ಬಿಟ್ಟುಕೊಡಲ್ಲ: ಈಶ್ವರಪ್ಪ
Team Udayavani, Jan 2, 2020, 12:05 PM IST
ಶಿವಮೊಗ್ಗ: ಸಂಕ್ರಾತಿ ಬಳಿಕ ಸಚಿವ ಸಂಪುಟ ವಿಸ್ತರಣೆ ಅಗಬಹುದು ಅಥವಾ ಪುನರ್ ರಚನೆ ಆಗಬಹುದು. ಸಚಿವ ಸಂಪುಟದ ನಿರ್ಧಾರ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು. ಚುನಾವಣೆಯಲ್ಲಿ ಗೆದ್ದ ಎಲ್ಲಾ ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋತವರಿಗೆ ಮತ್ತು ಆರ್. ಶಂಕರ್ ಕುರಿತು ಪಕ್ಷದ ವರಿಷ್ಠರು ತಿರ್ಮಾನ ತಗೆದುಕೊಳ್ಳುತ್ತಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಆರ್.ಶಂಕರ್ ಗೆ 6 ತಿಂಗಳಲ್ಲಿ ಚುನಾವಣೆಯಲ್ಲಿ ಗೆದ್ದು ಅಥವಾ ಎಂಎಲ್ ಸಿ ಯಾಗಿ ಗೆದ್ದರೆ ಸಚಿವ ಸ್ಥಾನ ನೀಡಲಾಗುವುದು ಎಂದರು.
ರಾಜ್ಯದಲ್ಲಿ ಡಿಸಿಎಂ ಹುದ್ದೆಯ ಕುರಿತು ರೇಣುಕಾಚಾರ್ಯ ಸಹಿ ಸಂಗ್ರಹಿಸಿಲ್ಲ. ಪಕ್ಷದ ವರಿಷ್ಠರು ಡಿಸಿಎಂ ಹುದ್ದೆಯ ವಿವಾದಕ್ಕೆ ತೆರೆಯೆಳೆಯಲಿದ್ದಾರೆ. ಡಿಸಿಎಂ ಕುರಿತು ವೈಯಕ್ತಿಕ ಯಾವುದೇ ಅಭಿಪ್ರಾಯವಿಲ್ಲ. ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದರು.
ಗಡಿ ವಿಚಾರವಾಗಿ ಮಾತನಾಡಿ, ಮಹಾರಾಷ್ಟ್ರದಲ್ಲಿ ಕೆಲ ಸಚಿವರು ದೊಡ್ಡವರಾಗುವ ಭ್ರಮೆಯಲ್ಲಿದ್ದಾರೆ. ನಾವು ನೆಲ ಜಲ ವಿಚಾರದಲ್ಲಿ ಯಾವ ರಾಜ್ಯದ ತಂಟೆಗೆ ಹೋಗಿಲ್ಲ. ವಿವಾದವನ್ನು ಹುಟ್ಟುಹಾಕಿಲ್ಲ. ಕಾನೂನು ಬದ್ದವಾಗಿದ್ದರೆ ನೆಲ- ಜಲವನ್ನ ಬೇರೆ ರಾಜ್ಯಗಳಿಗೆ ಬಿಡಲಾಗುತ್ತೆ. ಇಲ್ಲವಾದ್ರೆ ಒಂದು ಇಂಚು ಕೂಡ ಜಾಗವನ್ನ ಬಿಟ್ಟು ಕೊಡುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.