ನೀವು ಸಿ.ಎಂ. ಆಗಿದ್ದಾಗ ಏನು ಮಾಡಿದ್ದೀರಾ? ಸಿದ್ದರಾಮಯ್ಯಗೆ ಸಚಿವ ಕೆ.ಎಸ್.ಈಶ್ವರಪ್ಪ ಟಾಂಗ್


Team Udayavani, Oct 30, 2019, 12:20 PM IST

news-tdy-4

ಶಿವಮೊಗ್ಗ : ಬಿಜೆಪಿ ಸರ್ಕಾರ ಸತ್ತು ಹೋಗಿದೆ‌ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತೀರುಗೇಟು ನೀಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹಿಂದಿನ ಸರಕಾರಕ್ಕೆ ನಮ್ಮ ಸರ್ಕಾರ ವನ್ನು ಹೋಲಿಸುವುದಕ್ಕೆ ಹೋಗುವುದಿಲ್ಲ.ಬರ ಬಂದಾಗ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರ ಸಚಿವರು ಜಿಲ್ಲೆಗಳಿಗೆ ಹೋಗಲಿಲ್ಲ, ರೈತರಿಗೆ ಧೈರ್ಯ ತುಂಬಲಿಲ್ಲ ಎಂದು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು,ಮೈತ್ರಿ ಸರಕಾರ ಬಂದಾಗಲೂ  ಬರಪೀಡಿತ ಪ್ರದೇಶಗಳಿಗೆ ಜೊತೆಯಾಗಿ ಹೋಗಲು ಹೇಳಿದ್ದೇ. ಸಿದ್ದರಾಮಯ್ಯ, ದೇವೇಗೌಡರು ಒಟ್ಟಿಗೆ ಹೋಗಿ ರೈತರಿಗೆ ಧೈರ್ಯ ಹೇಳಲಿಲ್ಲ ಕಾಂಗ್ರೆಸ್ ಸರ್ಕಾರ ಯಾಕೆ ಸತ್ತು ಹೋಯಿತು ಅಂದರೆ ರೈತರ ಸಂಕಷ್ಟಗಳಿಗೆ ಸ್ಪಂದಿಸದ ಕಾರಣಕ್ಕೆ  ಎಂದು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.

ಈಗ ರಾಜ್ಯ ಸರಕಾರ ನಿರೀಕ್ಷೆಗೆ ಮೀರಿ ಕೆಲಸ ಮಾಡುತ್ತಿದೆ..ಜನರ ಆಶೀರ್ವಾದ ಇದೆ ಕಾಂಗ್ರೆಸ್ ಸರ್ಕಾರ ಸತ್ತು ಹೋಗಿರುವುದನ್ನು ಈಗ ಮತ್ತೆ ಮತ್ತೆ ನೆನಪು ಮಾಡಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಸರಕಾರಕ್ಕೆ ಮತ್ತೆ ಜೀವ ಬರುವ ಪ್ರಶ್ನೆ ಇಲ್ಲ, ಅವರು ಮತ್ತೆ ಮುಖ್ಯಮಂತ್ರಿ ಆಗುವ ಪ್ರಶ್ನೆಯೇ ಇಲ್ಲ. ಬಿಜೆಪಿ ಸರಕಾರ ಬೀಳುವುದಕ್ಕೆ ನಾವು ಅವಕಾಶ ಮಾಡಿಕೊಡುವುದಿಲ್ಲ ಎಂದರು.

ಎಚ್ ಡಿಕೆ ಹೇಳಿಕೆ ವಿಚಾರಕ್ಕೆ ಮಾತಾನಾಡಿದ ಅವರು ಕುಮಾರಸ್ವಾಮಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ.ನಮ್ಮದೇ ಪೂರ್ಣ ಬಹುಮತದ ಸರಕಾರ ಇರುವಾಗ ಅಂತಹ ಅವಕಾಶ ಇರುವುದಿಲ್ಲ. ಅಲ್ಲಿಯವರೆಗೆ ಹೋಗುವ ಪ್ರಶ್ನೆ ಬರುವುದಿಲ್ಲ, ಅವರ ರಕ್ಷಣೆ ನಮಗೆ ಅವಶ್ಯಕತೆ ಇಲ್ಲ ಎಂದರು.

ನಾಳೆ ಉಪಚುನಾವಣೆ ಆದರೆ 15 ಕ್ಕೆ 15 ಸ್ಥಾನ ಬಿಜೆಪಿ ಗಳಿಸಲಿದೆ,ನೆರೆ ಸಂತ್ರಸ್ತರಿಗೆ ಇಡೀ ರಾಜ್ಯದಲ್ಲಿ ಸಂಘ ಸಂಸ್ಥೆಗಳು, ಸಾರ್ವಜನಿಕರು ಸ್ಪಂದಿಸಿದ್ದಾರೆ. ರಾಜ್ಯ ಸರ್ಕಾರ ಕೂಡ ಅಗತ್ಯ ನೆರವು ನೀಡುತ್ತಲೇ ಇದೆ ಎಂದು ಹೇಳಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

9

Shivamogga: ಅಯೋಧ್ಯೆ ರೀತಿ ವ‌ಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.