ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು
Team Udayavani, Mar 22, 2022, 1:30 PM IST
ತೀರ್ಥಹಳ್ಳಿ: ತೀರ್ಥಹಳ್ಳಿಯ ತುಂಗಾ ನದಿಯ ರಾಮ ಮಂಟಪದ ಬಳಿ ನಿನ್ನೆ ಮಧ್ಯಾಹ್ನ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು ಇಂದು ಶವ ಪತ್ತೆಯಾಗಿದೆ.
ತುಂಗಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಥಮ ಬಿಎ ವಿದ್ಯಾರ್ಥಿ ಅರಳಸುರಳಿ ಸಮೀಪದ ಬಂದ್ಯಾ ಎಂಬ ಊರಿನ ವರ್ಧನ್ (19) ಹಾಗೂ ಸೊನಲೆಯ ಮಂಜು (20) ನೀರು ಪಾಲಾದವರು ಎಂದು ತಿಳಿದು ಬಂದಿದೆ. ನಿನ್ನೆ ಮಧ್ಯಾಹ್ನ ಇಬ್ಬರೂ ತುಂಗ ನದಿಯಲ್ಲಿ ಈಜಲು ಹೋಗಿದ್ದರು. ನಂತರ ಅವರ ಮೊಬೈಲ್ ಲೊಕೇಶನ್ ಮೂಲಕ ಪತ್ತೆ ಮಾಡಲಾಗಿದ್ದು ಸ್ಥಳದಲ್ಲಿ ಇಬ್ಬರ ಯೂನಿಫಾರ್ಮ್ ಮೊಬೈಲ್ ಪತ್ತೆಯಾಗಿತ್ತು.
ನಿನ್ನೆಯಿಂದ ಅಗ್ನಿಶಾಮಕದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದರು. ಇಂದು ಅಗ್ನಿ ಶಾಮಕ ದಳ, ಸ್ಥಳೀಯರು ಹಾಗೂ ಪೊಲೀಸರ ಸಹಕಾರದೊಂದಿಗೆ ಇಂದು ಶವ ನದಿಯಿಂದ ಹೊರ ತೆಗೆಯಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.