ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಇಬ್ಬರು ಯುವಕರ ಆತ್ಮಹತ್ಯೆ
Team Udayavani, Sep 26, 2021, 1:40 PM IST
ಸಾಗರ: ಇಲ್ಲಿನ ಜೋಗ ಬಸ್ ನಿಲ್ದಾಣದ ಸಮೀಪದ ಖಾಸಗಿ ಲಾಡ್ಜ್‌ವೊಂದರಲ್ಲಿ ಇಬ್ಬರು ಯುವಕರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಹಟ್ಟಿ ಗ್ರಾಮದ ಸಂತೋಷ್ (23) ಮತ್ತು ಹನುಮಂತ (28) ಜೀವತೆತ್ತ ಯುವಕರು.
ಸಂತೋಷ್ ಮತ್ತು ಹನುಮಂತ ಅವರು ಸೆ. 24ರ ತಡರಾತ್ರಿ ಲಾಡ್ಜ್‌ಗೆ ಬಂದು ಡಬ್ಬಲ್ ಬೆಡ್‌ರೂಂ ಬಾಡಿಗೆಗೆ ಪಡೆದಿದ್ದರು. ಶನಿವಾರ ಮಧ್ಯಾಹ್ನ ಇಬ್ಬರೂ ಹೊರಗೆ ಬಂದು ಊಟ ತೆಗೆದುಕೊಂಡು ರೂಮ್ ಸೇರಿಕೊಂಡಿದ್ದರು ಎನ್ನಲಾಗಿದೆ. ಶನಿವಾರ ರಾತ್ರಿ 8-30ಕ್ಕೆ ರೂಮ್‌ಬಾಯ್ ಊಟ ಬೇಕೆಂದು ಕೇಳಲು ಬಾಗಿಲು ಬಡಿದಾಗಲೂ ಇಬ್ಬರೂ ಹೊರಗೆ ಬಂದಿರಲಿಲ್ಲ. ರೂಮ್‌ಬಾಯ್ ಇಬ್ಬರೂ ಮಲಗಿರಬೇಕು ಎಂದು ವಾಪಾಸ್ ಹೋಗಿದ್ದನು.
ಇದನ್ನೂ ಓದಿ:ಅನೈತಿಕತೆಯ ಚಟುವಟಿಕೆಗಳ ತಾಣವಾಗಿರುವ ಕಲ್ಯಾಣನಗರ ಲೇಔಟ್ ನ ಬಿಸಿಎಂ ಕಾಲೇಜು ಹಾಸ್ಟೆಲ್
ಭಾನುವಾರ ಬೆಳಿಗ್ಗೆ ರೂಮಿನ ಬಾಗಿಲು ಸಾಕಷ್ಟು ಬಾರಿ ಬಡಿದಾಗಲೂ ಬಾಗಿಲು ತೆರೆಯಲಿಲ್ಲ. ಇದರಿಂದ ಅನುಮಾನಗೊಂಡು ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲಿ ರೂಮಿನ ಬಾಗಿಲು ಒಡೆದು ನೋಡಿದಾಗ ಇಬ್ಬರೂ ರೂಮಿನ ಸೀಲಿಂಗ್‌ಗೆ ಅಳವಡಿಸಿದ್ದ ಎರಡು ಫ್ಯಾನ್‌ಗೆ ನೇಣು ಹಾಕಿಕೊಂಡಿರುವುದು ಪತ್ತೆಯಾಗಿದೆ. ಸ್ಥಳಕ್ಕೆ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.