ಬಸ್ಸಿಗೆ ಕಾಯುತ್ತಿದ್ದವರಿಗೆ ಢಿಕ್ಕಿ ಹೊಡೆದ ಕಾರು: ಚಾಲಕ ಸಾವು, ಉಳಿದವರ ಸ್ಥಿತಿ ಗಂಭೀರ
Team Udayavani, Oct 24, 2021, 4:37 PM IST
ಸಾಗರ: ತಾಲೂಕಿನ ಕೆಳದಿಪುರ ಸಮೀಪದ ಸುಳಗೋಡು ಗ್ರಾಮದ ಬಳಿ ಮಾರುತಿ ಓಮ್ನಿ ಕಾರು ಪಲ್ಟಿ ಹೊಡೆದು ಚಾಲಕ ಮೃತಪಟ್ಟ ಘಟನೆ ನಡೆದಿದೆ.
ಸಾಗರದ ಷಾಹಿ ಗಾಮೇಂಟ್ಸ್‌ಗೆ ಮಾಸೂರು ಕೆಳದಿ, ಕೆಳದಿಪುರ ಗ್ರಾಮದಿಂದ ನಾಲ್ವರು ಕೆಲಸಕ್ಕೆ ಕಾರಿನಲ್ಲಿ ಬರುತ್ತಿದ್ದರು. ಈ ಸಂದರ್ಭದಲ್ಲಿ ಸುಳಗೋಡು ಗ್ರಾಮದ ಸಮೀಪ ಕಾರಿನ ಬ್ರೇಕ್ ಫೇಲ್ ಆಗಿದೆ. ಹಾಗಾಗಿ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ಬಸ್‌ಗೆ ಕಾಯುತ್ತಾ ನಿಂತಿದ್ದ ಐವರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಕಾರು ಚಾಲಕ ಸುರೇಶ್ ಕೆಳದಿಪುರ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ರಸ್ತೆ ಪಕ್ಕದಲ್ಲಿ ನಿಂತಿದ್ದ ಐವರಿಗೆ ಗಂಭೀರ ಗಾಯವಾಗಿದೆ.
ಅಪಘಾತದಲ್ಲಿ ದೀಪಾ, ಆಶಾ, ಅರ್ಪಿತಾ, ಕಲಾವತಿ, ಚೈತ್ರ, ಶ್ಯಾಮಲ, ರೇಣುಕಾ, ಜಯಶ್ರೀ, ಶಾಂಭವಿ ಅವರಿಗೆ ಗಾಯವಾಗಿದ್ದು, ಈ ಪೈಕಿ ಗಂಭೀರವಾಗಿ ಗಾಯಗೊಂಡಿರುವ ಅರ್ಪಿತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವರ ಪರಿಸ್ಥಿತಿ ಬಗ್ಗೆ ನಿಗಾ ವಹಿಸಲಾಗಿದ್ದು ವರದಿ ಬಂದ ನಂತರ ಸ್ಥಳೀಯ ಚಿಕಿತ್ಸೆ ಅಥವಾ ಹೆಚ್ಚಿನ ಚಿಕಿತ್ಸೆಗೆ ಕಳುಹಿಸುವ ಕುರಿತು ನಿರ್ಧರಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ನೀರಾವರಿ ಯೋಜನೆಗೆ ಗೌರಿಶಂಕರ್ ಅಡ್ಡಗಾಲು
ದುರದೃಷ್ಟಕರ ದಿನ: ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಮಾತನಾಡಿದ ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು, ಉಪವಿಭಾಗೀಯ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲರಿಗೂ ಉತ್ತಮ ಚಿಕಿತ್ಸೆ ಕೊಡಿಸಲಾಗುತ್ತದೆ. ನಾಲ್ವರು ವೈದ್ಯರು ಸೇವೆ ನೀಡುತ್ತಿದ್ದಾರೆ. ಈ ನಡುವೆ ಷಾಹಿ ಗಾರ್ಮೆಂಟ್ಸ್‌ನ ವ್ಯವಸ್ಥಾಪಕರ ಜೊತೆ ಮಾತುಕತೆ ನಡೆಸಿದ್ದು, ಅಪಘಾತದಿಂದ ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಅವರಿಗೆ ವೆಚ್ಚ ಭರಿಸಲು ಒಪ್ಪಿಗೆ ನೀಡಿದ್ದಾರೆ. ಈ ರೀತಿ ಅಪಘಾತಗಳಾಗಬಹುದಾದ ಹಿನ್ನೆಲೆಯಲ್ಲಿ ವಿಮೆ ಹಾಗೂ ಇತರ ದಾಖಲೆಗಳನ್ನು ಹೊಂದಿರಬೇಕು. ಕೆಲಸದ ಸ್ಥಳ ಸೇರಲು ಕೊನೆ ಕ್ಷಣದ ಗಡಿಬಿಡಿ ಮಾಡುವ ಬದಲು ಕಾಲು ಅರ್ಧ ಘಂಟೆ ಮೊದಲೇ ಹೊರಡಲು ವ್ಯವಸ್ಥೆ ಮಾಡಿಕೊಳ್ಳಬೇಕು. ಒಟ್ಟಿನಲ್ಲಿ ಸಾಗರದ ಪಾಲಿಗೆ ಈ ಭಾನುವಾರ ದುರದೃಷ್ಟಕರ ದಿನ ಎಂದು ತಿಳಿಸಿದರು.
ಸೂಕ್ತ ಚಿಕಿತ್ಸೆಯ ಒತ್ತಾಯ: ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿ ಮಾತನಾಡಿದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಲು ವೈದ್ಯರ ಬಳಿ ಮನವಿ ಮಾಡಲಾಗಿದೆ. ಮೃತಪಟ್ಟ ಚಾಲಕನಿಗೆ ಪರಿಹಾರ ಕೊಡಬೇಕು ಮತ್ತು ಗಾಯಗೊಂಡವರಿಗೆ ಷಾಹಿ ಗಾರ್ಮೇಂಟ್ಸ್‌ನಿಂದ ಚಿಕಿತ್ಸೆ ಜೊತೆಗೆ ಪರಿಹಾರ ಸಹ ಕೊಡಲು ಒತ್ತಾಯಿಸುತ್ತಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.