ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್
Team Udayavani, Jan 28, 2021, 5:11 PM IST
ಶಿವಮೊಗ್ಗ: ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿಗೆ ಟಿಸಿ ಅಳವಡಿಸಿ, ವಿದ್ಯುತ್ ಸಂಪರ್ಕ ಕಲ್ಪಿಸುವ ಸಲುವಾಗಿ, ಐದು ಸಾವಿರ ರೂ. ಲಂಚ ಪಡೆಯುತ್ತಿದ್ದ ಮೆಸ್ಕಾಂನ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಮೆಸ್ಕಾಂನ ಹೊಳೆಹೊನ್ನೂರು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಎಸ್. ಪ್ರಕಾಶ್, ಎಸಿಬಿ ಬಲೆಗೆ ಬಿದ್ದವರು. ಇಂದು ಮಧ್ಯಾಹ್ನ ಪ್ರಕಾಶ್ ಅವರು ಐದು ಸಾವಿರ ರೂ. ಲಂಚ ಪಡೆಯುತ್ತಿದ್ದ ಸಮಯದಲ್ಲಿ ಹೊಳೆಹೊನ್ನೂರು ಉಪ ವಿಭಾಗ ಕಚೇರಿಯಲ್ಲೇ ದಾಳಿ ನಡೆಸಲಾಗಿದ್ದು, ಎಂಜಿನಿಯರ್ ಬಿ.ಎಸ್.ಪ್ರಕಾಶ್ ಅವರ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ.
ಇದನ್ನೂ ಓದಿ:ಹಳ್ಳಿಹಕ್ಕಿ ‘ಸಚಿವ’ ಆಸೆಗೆ ತಣ್ಣೀರೆರಚಿದ ಕೋರ್ಟ್: ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ
ಎಸಿಬಿಯ ಪೂರ್ವ ವಲಯ ಎಸ್‍ಪಿ ಜಯಪ್ರಕಾಶ್ ಅವರ ಮಾರ್ಗದರ್ಶನದಲ್ಲಿ ಹಾಗೂ ಡಿವೈಎಸ್‍ಪಿ ಲೋಕೇಶ್ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ, ಇನ್ಸ್ ಪೆಕ್ಟರ್ ಇಮ್ರಾನ್ ಬೇಗ್, ಸಿಬ್ಬಂದಿಗಳಾದ ವಸಂತ ಎನ್.ಕೆ. ರಘುನಾಯ್ಕ, ನಾಗರಾಜ, ಸುರೇಂದ್ರ, ಯೋಗೇಶಪ್ಪ, ಹರೀಶ್, ಶ್ರೀನಿವಾಸ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.