ಮಹಾತ್ಮರ ಆದರ್ಶ-ಸಿದ್ಧಾಂತದಿಂದ ಹೆಚ್ಚಿದ ಭಾರತದ ಘನತೆ


Team Udayavani, Jan 2, 2018, 3:09 PM IST

02-35.jpg

ಶಿವಮೊಗ್ಗ: ಭಾರತದ ಘನತೆ, ಗೌರವ ಜಗತ್ತಿನಲ್ಲಿ ಎತ್ತರಕ್ಕೆ ತಲುಪಲು ಸ್ವಾಮಿ ವಿವೇಕಾನಂದರು, ಬಸವಣ್ಣ, ರಾಮಕೃಷ್ಣ
ಪರಮಹಂಸ, ಶಾರದಾಮಾತೆ ಇವರ ಕೊಡುಗೆ ಅಪಾರವಾದುದು ಎಂದು ಹೊಸನಗರ ಮೂಲೆಗದ್ದೆ ಮಠ ಸದಾನಂದ ಶಿವಯೋಗ
ಆಶ್ರಮದ ಶ್ರೀಚನ್ನಬಸವ ಸ್ವಾಮೀಜಿ ಹೇಳಿದರು.

ಸಮೀಪದ ಅನುಪಿನಕಟ್ಟೆ ಶ್ರೀರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್‌ನ ಶ್ರೀರಾಮಕೃಷ್ಣ ಆಂಗ್ಲ ಮಾಧ್ಯಮ ಗುರುಕುಲ ವಸತಿ ವಿದ್ಯಾಲಯದಲ್ಲಿ
ಹಮ್ಮಿಕೊಂಡಿದ್ದ ಶ್ರೀಸತ್ಯನಾರಾಯಣ ಪೂಜೆ, ಜನ್ಮದಾತರಿಗೆ ಪಾದಪೂಜೆ ಹಾಗೂ ಮಕ್ಕಳಿಂದ ರಂಗೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಭವ್ಯ ಭಾರತಕ್ಕೆ ಘನತೆ, ಗೌರವ ದೊರಕಿರುವುದು ಶ್ರೀಮಂತರು ಕೂಡಿಟ್ಟಿರುವ ಆಸ್ತಿಯಿಂದಲ್ಲ. ಬದಲಿಗೆ ಸ್ವಾಮಿ ವಿವೇಕಾನಂದ, ಬಸವಣ್ಣ, ರಾಮಕೃಷ್ಣ ಪರಮಹಂಸ, ಶಾರದಾಮಾತೆ ಮುಂತಾದ ಮಹಾತ್ಮರು ಹಾಕಿಕೊಟ್ಟ ಆದರ್ಶ ಸಿದ್ಧಾಂತಗಳಿಂದ ಎಂದರು. ಸುಶಿಕ್ಷಿತರ ಸಂಖ್ಯೆ ಹೆಚ್ಚಿದಷ್ಟು ದೇಶ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ದೇಶದ ಪ್ರತಿಯೊಬ್ಬ ನಾಗರಿಕರು ಶಿಕ್ಷಣ ಪಡೆಯಬೇಕು. ಮುಕ್ತವಾಗಿ ದೇಶದ ಅಭಿವೃದ್ಧಿ ಕೈಜೋಡಿಸಬೇಕೆಂದು ಹೇಳಿದರು.

ಮಕ್ಕಳು ತಮ್ಮನ್ನು ಹೆತ್ತು, ಬೆಳೆಸಿ ದೊಡ್ಡವರನ್ನಾಗಿ ಮಾಡಿದ ತಂದೆ-ತಾಯಿಯನ್ನು ಪೂಜನೀಯವಾಗಿ ಕಾಣಬೇಕು. ಯಾವುದೇ
ಕಾರಣಕ್ಕೂ ಅವರ ಮನಸ್ಸನ್ನು ನೋಯಿಸುವ ಕೆಲಸ ಮಾಡಬಾರದು. ತಂದೆ-ತಾಯಿಯನ್ನು ಗೌರವದಿಂದ ಕಂಡರೆ, ಮುಂದಿನ ಜೀವನ ಕೂಡ ಉತ್ತಮವಾಗಿರುತ್ತದೆ ಎಂದರು. ಶ್ರೀರಾಮಕೃಷ್ಣ ಗುರುಕುಲ ಶಾಲೆ ಮಕ್ಕಳಿಗೆ ಆದ್ಯಾತ್ಮದ ಮೂಲಕ ಅವಶ್ಯಕ ಬೋಧನ, ಬದುಕಿನ ಅನಿವಾರ್ಯತೆಗಳನ್ನು ಹೇಳಿಕೊಡುತ್ತಾ, ದೇಶದ ಸತ್ಪಜ್ರೆಗಳನ್ನು, ಭಾರತಾಂಭೆಯ ಹೆಮ್ಮೆಯ ಮಕ್ಕಳನ್ನು ರೂಪಿಸುತ್ತಿದೆ ಎಂದು ಶ್ಲಾಘಿಸಿದರು.

ಟ್ರಸ್ಟ್‌ ಅಧ್ಯಕ್ಷ ಡಾ| ಡಿ.ಆರ್‌.ನಾಗೇಶ್‌ ಮಾತನಾಡಿದರು. ಇದೇ ಸಂದರ್ಭದಲ್ಲಿ ವಸತಿ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿನಿ
ಕುಮಾರಿ ಹರ್ಷಿತಾ ಅವರ ತೊದಲು ನುಡಿಯೊಳಗೆ ಚಿಗುರಿದ ಕವನ ಎಂಬ ಪುಸ್ತಕವನ್ನು ಶ್ರೀಗಳು ಲೋಕಾರ್ಪಣೆಗೊಳಿಸಿದರು. ಟ್ರಸ್ಟಿ
ಶೋಭಾ ವೆಂಕಟರಮಣ, ಡಿ.ಎಂ.ದೇವರಾಜ್‌ ಇದ್ದರು.

ಟಾಪ್ ನ್ಯೂಸ್

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.