ವಿಐಎಸ್‌ಎಲ್ ಅಭಿವೃದ್ಧಿಪಡಿಸುವ ಜವಾಬ್ದಾರಿ ಹೆಚ್ಚಿದೆ
ಕೇಂದ್ರ ಸರಕಾರ ಕಾರ್ಖಾನೆ ಖಾಸಗೀಕರಣ ಪ್ರಕ್ರಿಯೆ ಹಿಂಪಡೆದಿದೆ: ಸಂಸದ ಬಿ.ವೈ.ರಾಘವೇಂದ್ರ
Team Udayavani, Oct 16, 2022, 4:06 PM IST
ಶಿವಮೊಗ್ಗ: ಕೇಂದ್ರ ಸರ್ಕಾರ ಭದ್ರಾವತಿಯ ವಿಐಎಸ್ ಎಲ್ ಕಾರ್ಖಾನೆಯ ಖಾಸಗೀಕರಣ ಪ್ರಕ್ರಿಯೆಯನ್ನು ಹಿಂಪಡೆದಿರುವುದರಿಂದ ಕಾರ್ಖಾನೆಯ ಅಭಿವೃದ್ಧಿಯ ಜವಾಬ್ದಾರಿ ಹೆಚ್ಚಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಶನಿವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಷ್ಟದಲ್ಲಿದ್ದ ಕಾರ್ಖಾನೆಯನ್ನು ಬಂಡವಾಳ ತೊಡಗಿಸಿ ಅಭಿವೃದ್ಧಿಗಾಗಿ ಪ್ರಯತ್ನಿಸಲಾಗುತ್ತಿತ್ತು. ಮೂರು ಬಾರಿ ಕೇಂದ್ರ ಸಚಿವರನ್ನು ಕಾರ್ಖಾನೆಗೆ ಭೇಟಿ ಮಾಡಿಸಿದ್ದರೂ ಸಹ ಅಭಿವೃದ್ಧಿಯಾಗಿರಲಿಲ್ಲ. ಇದರಿಂದಾಗಿ ಕೇಂದ್ರ ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣಗೊಳಿಸಲು ಯತ್ನಿಸಿ ಜಾಗತಿಕ ಟೆಂಡರ್ ಮೂಲಕ ಖಾಸಗೀಕರಣ ಪ್ರಕ್ರಿಯೆಗೆ ಯತ್ನಿಸಿತ್ತು. ಆದರೆ ಖಾಸಗಿಯವರು ಕಾರ್ಖಾನೆ ಕೊಳ್ಳಲು ಮುಂದೆ ಬರದ ಹಿನ್ನೆಲೆಯಲ್ಲಿ ಖಾಸಗೀಕರಣ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದರು.
ಕಾರ್ಖಾನೆಗೆ ಬಂಡವಾಳ ತೊಡಗಿಸಲು ಸಾಕಷ್ಟು ಬಾರಿ ಪ್ರಯತ್ನ ನಡೆದು ಕೇಂದ್ರ ಸಚಿವರು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಬಂಡವಾಳ ತೊಡಗಿಸಲು ಯತ್ನಿಸಲಾಗಿತ್ತು. ಆದರೆ, ಈಗ ಕೇಂದ್ರ ಸರ್ಕಾರ ಖಾಸಗೀಕರಣ ಪ್ರಕ್ರಿಯೆಯನ್ನು ಹಿಂಪಡೆದಿದ್ದು, ಎಲ್ಲರೂ ಸೇರಿ ಮುಂದಿನ ದಿನಗಳಲ್ಲಿ ಕಾರ್ಖಾನೆಯ ಅಭಿವೃದ್ಧಿಗಾಗಿ ಚರ್ಚಿಸಿ ಉಳಿಸಿ ಬೆಳೆಸುವ ಪ್ರಯತ್ನ ಮಾಡಲಾಗುವುದು ಹಾಗೂ ಕಾರ್ಖಾನೆಯನ್ನು ಯಶಸ್ವಿ ದಿಕ್ಕಿನತ್ತ ಕೊಂಡೊಯ್ಯಲಾಗುವುದು ಎಂದರು.
ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಕಾರ್ಖಾನೆಯ ಅಭಿವೃದ್ಧಿಗಾಗಿ ಹೆಚ್ಚಿನ ಬಂಡವಾಳ ತೊಡಗಿಸಲು ಕೇಂದ್ರ ಸಚಿವರ ಮೇಲೆ ಒತ್ತಡ ಹೇರಲಾಗುವುದು ಎಂದರು.
ಕಾರ್ಖಾನೆಯ ಕಾರ್ಮಿಕರ ಸಂಘದ ಅಧ್ಯಕ್ಷ ಜಿ. ಜಗದೀಶ್ ಮಾತನಾಡಿ, 2016 ರಿಂದ ಕಾರ್ಖಾ ನೆಯನ್ನು ಖಾಸಗೀಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ. 1918 ರಲ್ಲಿ ಆರಂಭವಾದ ಕಾರ್ಖಾನೆ ವಿಶ್ವವಿಖ್ಯಾತವಾಗಿದ್ದು, ಖಾಸಗಿ ಕಾರ್ಖಾನೆಗಳ ಪೈಪೋಟಿಯಿಂದಾಗಿ ಸ್ಪರ್ಧೆ ನೀಡಲು ಆಗಲಿಲ್ಲ. ಈಗಿರುವ ಯಂತರೋಪಕರಣಗಳು ಹಳೆಯದಾಗಿದ್ದು, ಉತ್ಪಾದನೆ ಸಹ ಕುಂಠಿತವಾಗಿದೆ. ಸಾಕಷ್ಟು ಬಾರಿ ಕೇಂದ್ರ ಸರ್ಕಾರಕ್ಕೆ ಬಂಡವಾಳ ಹೂಡಲು ಮನವಿ ಹಾಗೂ ಹೋರಾಟ ಮಾಡಿದ್ದರೂ ಸಹ ಬಂಡವಾಳ ಹೂಡಿಕೆಯಾಗಿಲ್ಲ. ಇದರಿಂದಾಗಿ ಉತ್ಪಾದನೆ ಕಡಿಮೆಯಾಗುವುದರ ಜೊತೆಗೆ ನಷ್ಟವೂ ಆಗುತ್ತಿದೆ ಎಂದರು.
3 ದಶಕಗಳ ಕಾಲ ವಿಶ್ವವಿಖ್ಯಾತಿ ಪಡೆದು ಉತ್ಪಾದನೆಯಲ್ಲಿ ಪಾರಮ್ಯ ಮೆರೆದಿದ್ದ ಕಾರ್ಖಾನೆ ಒಂದು ಕಾಲದಲ್ಲಿ 12 ಸಾವಿರಕ್ಕೂ ಹೆಚ್ಚು ಕಾಯಂ ಕಾರ್ಮಿಕರು ಮತ್ತು 4 ಸಾವಿರ ಗುತ್ತಿಗೆ ಕಾರ್ಮಿಕರಿಗೆ ಉದ್ಯೋಗ ನೀಡಿತ್ತು. 1980 ರ ನಂತರ 50-60 ವರ್ಷ ಹಳೆಯದಾದ ಯಂತ್ರೋಪಕರಣಗಳು ಮತ್ತು ಹಳೆಯ ತಾಂತ್ರಿಕತೆಯಿಂದಾಗಿ ನಿರಂತರ ನಷ್ಟ ಅನುಭವಿಸುತ್ತಾ ಬಂದ ಪರಿಣಾಮ ರಾಜ್ಯ ಸರ್ಕಾರ ಕಾರ್ಖಾನೆಯನ್ನು ಕೇಂದ್ರ ಸರ್ಕಾರದ ಒಡೆತನದ ಭಾರತೀಯ ಉಕ್ಕು ಪ್ರಾಕಾರಕ್ಕೆ ಪುಕ್ಕಟೆಯಾಗಿ ವಹಿಸಿಕೊಡಲಾಗಿತ್ತು. ಆದರೆ, ಉಕ್ಕು ಪ್ರಾಧಿಕಾರ ಬಂಡವಾಳ ತೊಡಗಿಸದೇ ಇರುವುದರಿಂದ ಕಾರ್ಖಾನೆ ಇಂದು ನಷ್ಟದಲ್ಲಿದೆ ಎಂದರು.
ಹಲವಾರು ವರ್ಷಗಳಿಂದ ವಾರ್ಷಿಕ 100 ಕೋಟಿ ರೂ. ನಷ್ಟ ಅನುಭವಿಸುತ್ತಿದ್ದ ಕಾರ್ಖಾನೆ ಇತ್ತೀಚಿನ ವರ್ಷಗಳಲ್ಲಿ ಕಾರ್ಮಿಕರ ಪ್ರಯತ್ನದಿಂದಾಗಿ ನಷ್ಟ 35 ಕೋಟಿ ರೂ.ಗೆ ತಲುಪಿದೆ. ಕಾರ್ಖಾನೆಯನ್ನು ಖಾಸಗೀಕರಣ ಮುಂತಾದ ವ್ಯರ್ಥ ಪ್ರಯತ್ನಗಳಲ್ಲಿ ಕಾಲಹರಣ ಮಾಡದೇ ಕೇಂದ್ರ ಸರ್ಕಾರ ಸುಮಾರು ಕನಿಷ್ಠ 2 ಸಾವಿರ ಕೋಟಿ ರೂ. ಬಂಡವಾಳ ತೊಡಗಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಕಾರ್ಖಾನೆಯ ಚಿತ್ರಣವೇ ಬದಲಾಗಿ ಮತ್ತೆ ಗತವೈಭವವನ್ನು ಕಾಣಬಹುದಾಗಿದೆ ಎಂದರು.
ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಖಾಸಗೀಕರಣ ಪ್ರಕ್ರಿಯೆಯನ್ನು ಆರಂಭಿಸಿದಾಗ ಸಂಸದ ಬಿ.ವೈ. ರಾಘವೇಂದ್ರ ಅವರು ಯಾವುದೇ ಕಾರಣಕ್ಕೂ ಖಾಸಗೀಕರಣಗೊಳಿಸಲು ಬಿಡುವುದಿಲ್ಲ ಎಂದು ಮೂರ್ನಾಲ್ಕು ಬಾರಿ ಸಂಘದ ಪದಾಧಿಕಾರಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ಕೇಂದ್ರ ಸಚಿವರನ್ನು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಭೇಟಿ ಮಾಡಿಸಿ ಬಂಡವಾಳ ಹೂಡಬೇಕೆಂದು ಒತ್ತಡ ಹೇರಿದ್ದರು ಎಂದ ಅವರು, ಖಾಸಗೀಕರಣ ಪ್ರಕ್ರಿಯೆ ಹಿಂಪಡೆದಿರುವ ಕೇಂದ್ರ ಸರ್ಕಾರದ ಕ್ರಮ ಸ್ವಾಗತಿಸುತ್ತೇವೆ. ಹಾಗೂ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಮತ್ತು ಶ್ರೇಯೋಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಬಿ.ವೈ. ರಾಘವೇಂದ್ರ ಅವರಿಗೆ ಅಭಿನಂದಿಸುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮೇಯರ್ ಸುನೀತಾ ಅಣ್ಣಪ್ಪ, ಕಾರ್ಖಾನೆ ಕಾರ್ಮಿಕರ ಸಂಘದ ಪದಾಕಾರಿಗಳಾದ ಬಿ.ಸಿ. ಶೈಲಶ್ರೀ, ಯು.ಎ. ಬಸಂತಕುಮಾರ್, ಕೆ.ಆರ್. ಮನು, ಎಸ್. ಮೋಹನ್, ಸದಸ್ಯರಾದ ಕೆ.ಎಂ. ಮಂಜುನಾಥ್, ಪಿ. ಕುಮಾರಸ್ವಾಮಿ, ಡಿ. ಸುನಿಲ್ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.