ಭಾರತ ಶಕ್ತಿಶಾಲಿ ರಾಷ್ಟ್ರವಾಗುವುದು ಖಚಿತ: ವೆಂಕಟೇಶ್
Team Udayavani, Sep 4, 2017, 5:51 PM IST
ಶಿವಮೊಗ್ಗ: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಮಕ್ಕಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಿತ್ತಿದರೆ ಇವರು ಮುಂದೆ ಸತ್ಪ್ರಜೆಗಳಾಗುತ್ತಾರೆ. ಇಂತಹ ಸತ್ಪ್ರಜೆಗಳಿಂದ ಭಾರತ ಮುಂದೊಂದು ದಿನ ಜಗತ್ತಿನ ಬಲಶಾಲಿ ರಾಷ್ಟ್ರವಾಗುವುದು ನಿಶ್ಚಿತ ಎಂದು ಉತ್ತಮ ಪ್ರಜಾ
ಪಾರ್ಟಿಯ ಶಿವಮೊಗ್ಗ ಘಟಕದ ಮುಖ್ಯಸ್ಥ ವೆಂಕಟೇಶ್ ಭರವಸೆ ವ್ಯಕ್ತಪಡಿಸಿದರು.
ಉತ್ತಮ ಪ್ರಜಾ ಪಾರ್ಟಿ ಶಿವಮೊಗ್ಗ ವತಿಯಿಂದ ಇಲ್ಲಿನ ಲಕ್ಷ್ಮೀ ಗೆಲಾಕ್ಸಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಚಿತ್ರಕಲಾ ಸ್ಪರ್ಧೆ (ಗಣಪತಿ ಚಿತ್ರ), ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡವರಿಗೆ ಪ್ರಶಸ್ತಿ ಪತ್ರ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶದಲ್ಲಿ ಜನಸಾಮಾನ್ಯರಿಂದ ಮಾತ್ರ ಸಾಮಾಜಿಕ ಬದಲಾವಣೆ ಸಾಧ್ಯ. ಇಂತಹ ಸಾಮಾಜಿಕ ಬದಲಾವಣೆ ತರುವ ಉದ್ದೇಶದಿಂದ ಚಲನಚಿತ್ರ ನಟ ಉಪೇಂದ್ರ ಅವರು ಉತ್ತಮ
ಪ್ರಜಾ ಪಾರ್ಟಿಯನ್ನು ಸ್ಥಾಪಿಸಿದ್ದು, ಇದಕ್ಕೆ ಜನಸಾಮಾನ್ಯರು ಬೆಂಬಲ ನೀಡಬೆಕೆಂದು ಮನವಿ ಮಾಡಿದರು. ಕಾರ್ಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗ ಸಂವಿಧಾನದ ಆಧಾರ ಸ್ಥಂಬಗಳಾಗಿವೆ. ಪತ್ರಿಕಾ ರಂಗವನ್ನು 4ನೇ ಅಂಗವಾಗಿ ಪರಿಗಣಿಸಲಾಗಿದೆ. ಒಂದು ಮನೆಗೆ ನಾಲ್ಕು ಗೋಡೆಗಳಿರುವಂತೆ ದೇಶವೆಂಬ ಮನೆಗೆ ಈ ನಾಲ್ಕು ಅಂಗಗಳು ಗೋಡೆಗಳಂತಿವೆ. ಈ ಗೋಡೆಗಳಿಗೆ ಜನಸಾಮಾನ್ಯರೇ ಭದ್ರ ಬುನಾದಿಯಾಗಿದ್ದಾರೆಂದರು.
ಭ್ರಷ್ಟಾಚಾರ, ಜಾತಿ ವೈಷಮ್ಯ, ಅಸಮಾನತೆ, ಬಡತನ, ಜಾತಿಯತೆ ಮತ್ತಿತರ ಸಮಸ್ಯೆಗಳು ಸಮಾಜವನ್ನು ಕಾಡುತ್ತಿವೆ. ಸಮಸ್ಯೆಗಳ ನಿವಾರಣೆಗೆ ಜನಸಾಮಾನ್ಯರಿಂದ ಮಾತ್ರ ಸಾಧ್ಯ. ಜನರಿಂದ ಜನರಿಗಾಗಿ ಜನರಿಗೋಸ್ಕರ ಉತ್ತಮ ಪ್ರಜಾ ಪಾರ್ಟಿಯನ್ನು ಸ್ಥಾಪಿಸಲಾಗಿದೆ. ಈ
ಮೂಲಕ ಸಾಮಾಜಿಕ ಸಮಸ್ಯೆಗಳ ನಿವಾರಣೆಗಳ ಜೊತೆಗೆ ಸಾಮಾಜಿಕ ಬದಲಾವಣೆ ತರಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಮಂಜು, ಹರೀಶ್, ಮಾದವನ್, ಮಹೇಶ್ ಚಿಕ್ಕಮಠ, ಸಂಧೀಪ್,ರಾಜೆಶ್, ಅಕ್ಷತಾ ವೆಂಕಟೇಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.