ದೇಶೀ ಮಾರುಕಟ್ಟೆ ರಕ್ಷಣೆಗೆ ಒತ್ತಾಯ

Team Udayavani, Feb 25, 2020, 1:29 PM IST

sm-tdy-1

ಶಿವಮೊಗ್ಗ: ಭಾರತದ ಆಹಾರ ಸಾರ್ವಭೌಮತ್ವ ಮತ್ತು ದೇಶೀಯ ಮಾರುಕಟ್ಟೆ ರಕ್ಷಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಗಾಂಧಿಪಾರ್ಕ್‌ನ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.

ಹಸು ಸಾಕಿ ಹಾಲು ಕರೆಯುವ, ಕೋಳಿ ಸಾಕುವ ರೈತರನ್ನು ಕಾಪಾಡಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು. ಭಾರತದ ಕೃಷಿಯನ್ನು ವಿಶ್ವ ವಾಣಿಜ್ಯ ಒಪ್ಪಂದಕ್ಕೆ ಸೇರಿಸಿದ ಮೇಲೆ ದೇಶಿಯ ಕೃಷಿ ಉತ್ಪನ್ನ ಮತ್ತು ಅವುಗಳ ಮಾರುಕಟ್ಟೆ ವಿದೇಶಿಯರ ಹಿಡಿತಕ್ಕೆ ಸಿಲುಕಿ ಬೆಲೆ ಕುಸಿತಕ್ಕೆ ಭಾರತದ ರೈತರು ಜರ್ಜರಿತರಾಗಿದ್ದೇವೆ ಎಂದು ಹೇಳಿದರು.

ಕೃಷಿ ಜ್ಞಾನ, ಬಿತ್ತನೆ ಬೀಜ, ಬೆಳೆಗಳ ಬೆಲೆ ಕುಸಿತ ವಿದೇಶಿ ಕಂಪೆನಿಗಳ ಪಾಲಾಗುತ್ತಿವೆ. ಗ್ರಾಮೀಣ ಜನತೆ ದುಡಿದು ಸಂಪಾದಿಸಿ ಜೀವನ ನಡೆಸಲು ಆತಂಕ ಪಡುವಂತಾಗಿದೆ.ಭಾರತ ಸರ್ಕಾರದ ಆಮದು ಮತ್ತು ರಫ್ತು ನೀತಿಗಳು ಬಹುರಾಷ್ಟ್ರೀಯ ಕಂಪೆನಿಗಳ ಹಿಡಿತಕ್ಕೆ ಜಾರುತ್ತಿವೆ. ಇದರಿಂದ ಭಾರತವನ್ನು ಲಾಭಕೋರರು ಮಾರು ಕಟ್ಟೆಯನ್ನಾಗಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು. ಭಾರತದ ಮಹಿಳೆಯರು ಪಶುಪಾಲನೆ ಮಾಡಿ ಹಾಲು ಉತ್ಪಾದನೆ, ಕುಕ್ಕುಟೋದ್ಯಮ ಕೃಷಿಯ ಭಾಗವಾಗಿಸಿಕೊಂಡಿದ್ದಾರೆ. ಇವುಗಳ ರಕ್ಷಣೆ ಆಗಬೇಕಿದೆ ಎಂದರು.

ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಭಾರತಕ್ಕೆ ಭೇಟಿ ಕೊಟ್ಟಿದ್ದು ಭಾರತದ ರೈತರಲ್ಲಿ ಅನೇಕ ಆಂತಕ ಮತ್ತು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಭಾರತದ ಕೃಷಿಯು ಗ್ರಾಮೀಣ ಜನರ ಉದ್ಯೋಗ ಭದ್ರತೆ ಮತ್ತು ಆಹಾರ ಭದ್ರತೆ ಕಲ್ಪಿಸುತ್ತಿದೆ. ಇವುಗಳ ಮೇಲೆ ವಿದೇಶಿ ಬಹುರಾಷ್ಟ್ರೀಯ ಕಂಪೆನಿಗಳು ಕಣ್ಣಿಟ್ಟಿವೆ. ಭಾರತದ ಕೃಷಿ ಮತ್ತು ಜ್ಞಾನ ಈಗಿನ ಯುವಜನಾಂಗಕ್ಕೆ ಹೊಸ ಭರವಸೆ ಹುಟ್ಟುಹಾಕುತ್ತಿವೆ. ಇವುಗಳ ರಕ್ಷಣೆ ಅಗತ್ಯವಾಗಿದೆ ಎಂದರು.

ಅಮೆರಿಕ ಅಧ್ಯಕ್ಷರ ಭಾರತ ಭೇಟಿ ವೇಳೆ ಒಪ್ಪಂದ ಮಾಡಿಕೊಳ್ಳುವಾಗ ಅಮೆರಿಕ ಮತ್ತು ಇತರೆ ರಾಷ್ಟ್ರಗಳಿಂದ ಮುಕ್ತ ಸುಂಕ ರಹಿತ ಆಮದಿಗೆ ಭಾರತ ಒಪ್ಪಬಾರದು. ಭಾರತದ ರೈತರನ್ನು ಕಾಪಾಡುವ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು. ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್‌ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.