ತೀರ್ಥಹಳ್ಳಿ ಪಾದಯಾತ್ರೆಯಲ್ಲಿ ಕನ್ನಡ ಧ್ವಜಕ್ಕೆ ಅಪಮಾನ!: ಆರೋಪ
Team Udayavani, Jun 16, 2022, 11:12 AM IST
ತೀರ್ಥಹಳ್ಳಿ: ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ವಿರುದ್ಧ ತೀರ್ಥಹಳ್ಳಿಯಲ್ಲಿ ಬುಧವಾರ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಪಾದಯಾತ್ರೆಯಲ್ಲಿ ಕನ್ನಡ ಧ್ವಜಕ್ಕೆ ಅಪಮಾನ ಮಾಡಲಾಗಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.
ಪಾದಯಾತ್ರೆಯಲ್ಲಿ ನೂರಾರು ಅಡಿ ಉದ್ದದ ಕನ್ನಡ ಧ್ವಜವನ್ನು ಹಿಡಿದು ಬಂದಿದ್ದು, ಈ ವೇಳೆ ಮೇಲಿನಕುರುವಳ್ಳಿಯಲ್ಲಿ ಕನ್ನಡ ಧ್ವಜವನ್ನು ನೆಲದ ಮೇಲೆ ಹಾಕಿ ಅಪಮಾನ ಮಾಡಿದ್ದಾರೆ ಎಂದು ಸಾರ್ವಜನಿಕರಿಂದ ಮಾತು ಕೇಳಿ ಬರುತ್ತಿದೆ. ಆದರೂ ಸಹ ಕನ್ನಡ ಪರ ಸಂಘಟನೆಗಳು ಸುಮ್ಮನೆ ಕುಳಿತಿರುವುದು ಯಾಕೆ ಎಂಬ ಪ್ರಶ್ನೆ ಹಲವರಲ್ಲಿ ಚರ್ಚೆಯಾಗತೊಡಗಿದೆ.
ಇದನ್ನೂ ಓದಿ:ಮಂಗಳೂರು: ಬಾಲ್ಕನಿಯ ಕರ್ಟನ್ ಸರಿಪಡಿಸುವ ವೇಳೆ 5ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು
ಮೆರವಣಿಗೆಯು ಕುಪ್ಪಳ್ಳಿಯ ಕವಿಶೈಲದಿಂದ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ಸಾಂಸ್ಕೃತಿಕ ಮಂದಿರದವರೆಗೆ ನಡೆಯಿತು. ಈ ಪ್ರತಿಭಟನಾ ಪಾದಯಾತ್ರೆಯಲ್ಲಿ ಕನ್ನಡ ಪರ ಸಂಘಟನೆ, ಸಾಹಿತಿಗಳು ಸೇರಿ ಹಾಗೂ ಪಕ್ಷಾತೀತವಾಗಿ ಹಲವರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Cooperation: ನಬಾರ್ಡ್ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.