PM Modi ಅವಹೇಳನ; ನಾಗರಾಜ್ ಕುಡುಪಲಿ ವಿರುದ್ಧ ಸಾಗರದಲ್ಲಿ ದೂರು
ವಕೀಲರ ಸಮ್ಮೇಳನದಲ್ಲಿ ಚಾಲೆಂಜ್... ವಿಡಿಯೋ...!
Team Udayavani, Aug 18, 2023, 4:42 PM IST
ಸಾಗರ: ರಾಣೆಬೆನ್ನೂರಿನ ನ್ಯಾಯವಾದಿ ನಾಗರಾಜ್ ಕುಡುಪಲಿ ಎಂಬುವವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಾಗೂ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕ್ರಮವನ್ನು ಖಂಡಿಸಿ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸುವಂತೆ ಸಾಗರ ನ್ಯಾಯವಾದಿ ಕೆ.ವಿ.ಪ್ರವೀಣ್ ನಗರ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ.
ಮೈಸೂರಿನಲ್ಲಿ ಆ.12 ಮತ್ತು 13ರಂದು ನಡೆದ ರಾಜ್ಯಮಟ್ಟದ ವಕೀಲರ ಸಮ್ಮೇಳನದಲ್ಲಿ ನನಗೆ ನಾಗರಾಜ ಅವರ ಪರಿಚಯವಾಗಿತ್ತು. ಆ. 12 ರಂದು ಅವರು ನನ್ನೊಂದಿಗೆ ಮಾತನಾಡುತ್ತಾ, ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗುವುದಿಲ್ಲ ಎಂದು ನನ್ನ ಜತೆ ಚಾಲೆಂಜ್ ಮಾಡಿದ್ದಾರೆ. ಹೀಗೆ ಚಾಲೆಂಜ್ ಮಾಡಿದ ವಿಡಿಯೋವನ್ನು ನಾವಿಬ್ಬರು ಪರಸ್ಪರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೇವೆ. ಕುಡುಪಲಿ ಅವರು ತಮ್ಮ ಫೇಸ್‌ಬುಕ್ ಖಾತೆ ಸುದ್ದಿ ಚಾವಡಿಗೆ ವಿಡಿಯೋವನ್ನು ಅಪ್‌ಲೋಡ್ ಮಾಡಿದ್ದಾರೆ. ಆ 14ರಂದು ಪುನಃ ಅವರು ಇನ್ನೊಂದು ವಿಡಿಯೋ ಮಾಡಿ ಅದನ್ನು ತಮ್ಮ ಸುದ್ದಿ ಚಾವಡಿ ಖಾತೆಗೆ ಅಪ್‌ಲೋಡ್ ಮಾಡಿದ್ದಾರೆ.
ಆ ವಿಡಿಯೋದಲ್ಲಿ ”ಬಿಜೆಪಿ ಮುಕ್ತ ಕರ್ನಾಟಕವಾಗಬೇಕು. ಮೋದಿಯೇನು ದೇವರೇನ್ರಿ, ಹಿ ವಾಸ್ ಒನ್ ಆಫ್ ದಿ ಟೆವೆಂಡರ್, ಹುದ್ದೆ ಬಿಟ್ಟರೆ ಯಾರವರು, ಹೂ ಈಸ್ ಹಿ, ಸ್ವತಂತ್ರವಾಗಿ ವಿಮಾನದಲ್ಲಿ ಅಡ್ಡಾಡುವ ಶಕ್ತಿ ಅವನಿಗೆ ಇಲ್ಲ, ನಾನು ದುಡಿದ ಹಣದಲ್ಲಿ ವಿಮಾನದ ಟಿಕೆಟ್ ತೆಗೆದುಕೊಂಡು ಓಡಾಡುತ್ತೇನೆ. ಅವರದೇನಿದೆ ದುಡಿಮೆ ಎಂದು ಹೇಳಿರುವ ಜತೆಗೆ, ಇವತ್ತು ಒಬ್ಬ ಪ್ರವೀಣ ಎಂಬ ಕೋಮುವಾದಿ ನನ್ನನ್ನು ಭೇಟಿಯಾಗಿದ್ದು ಫೇಸ್‌ಬುಕ್ ಮತ್ತು ಫೋನ್‌ನಲ್ಲಿರುವ ದುಷ್ಟಬುದ್ಧಿ ಇರುವವನು ಎಂದು ಅವಹೇಳನಾಕಾರಿಯಾಗಿ ದೇಶದ ಪ್ರಧಾನಮಂತ್ರಿಗಳು ಮತ್ತು ನನ್ನ ಬಗ್ಗೆ ಮಾತನಾಡಿದ್ದಾರೆ.ದೇಶದ ಪ್ರಧಾನಿ ವಿರುದ್ಧ ಅವಹೇಳನಕಾರಿಯಾಗಿ ಏಕವಚನದಲ್ಲಿ ಮಾತನಾಡಿದ್ದು, ನನ್ನ ವಿರುದ್ದವೂ ಮಾನಹಾನಿಯಾಗುವಂತಹ ಟೀಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಗರಾಜ್ ಕುಡುಪಲಿ ಎಂಬುವವರನ್ನು ಕರೆಸಿ ವಿಚಾರಣೆ ನಡೆಸುವ ಜೊತೆಗೆ ಸೂಕ್ತ ಕಾನೂನುಕ್ರಮ ಜರುಗಿಸಬೇಕು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಕೆ.ವಿ.ಪ್ರವೀಣ್ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.