ಜೂ.1ರಿಂದ ಜನಶತಾಬ್ದಿ ರೈಲು ಸಂಚಾರ
Team Udayavani, May 23, 2020, 6:40 AM IST
ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಶಿವಮೊಗ್ಗ- ಬೆಂಗಳೂರು ನಡುವಣ ಜನಶತಾಬ್ದಿ ರೈಲು ಸಂಚಾರ ಜೂ. 1ರಿಂದ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಶುಕ್ರವಾರ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸದ್ಯ ಕೇವಲ ಒಂದು ರೈಲು ಮಾತ್ರ ಸೇವೆ ಆರಂಭಿಸಲಿದೆ. ಜೂ. 1ರಂದು ಸಂಜೆ 5.30ಕ್ಕೆ ಬೆಂಗಳೂರಿನಿಂದ ಹಾಗೂ ಜೂ. 2ರಂದು ಬೆಳಗ್ಗೆ 5.30ಕ್ಕೆ ಶಿವಮೊಗ್ಗದಿಂದ ರೈಲು ಹೊರಡಲಿದೆ. ಕೇವಲ ಆನ್‌ಲೈನ್‌ನಲ್ಲಿ ಮಾತ್ರ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶವಿದೆ. ಪ್ರತಿ ಬೋಗಿಯಲ್ಲಿ ಕೇವಲ 54 ಮಂದಿಗೆ ಮಾತ್ರ ಪ್ರಯಾಣಕ್ಕೆ ಅವಕಾಶವಿದ್ದು, ಒಟ್ಟು 648 ಸೀಟುಗಳನ್ನು ಮಾತ್ರ ಕಾಯ್ದಿರಿಸಲಾಗುತ್ತಿದೆ. ಹವಾ ನಿಯಂತ್ರಿತ ಬೋಗಿಯಲ್ಲಿ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ ಎಂದು ಅವರು ಸ್ಪಷ್ಪಪಡಿಸಿದರು.
ರೈಲಿನ ನಿಲುಗಡೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಶಿವಮೊಗ್ಗ- ಭದ್ರಾವತಿ- ಕಡೂರು- ತುಮಕೂರು- ಬೆಂಗಳೂರು ಮಾರ್ಗದಲ್ಲಿ ಸಂಚರಿಸಲಿದೆ. ರೈಲು ಹತ್ತುವುದಕ್ಕಿಂತ ಪೂರ್ವದಲ್ಲಿ ಪ್ರತಿಯೊಬ್ಬರನ್ನೂ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುವುದು. ರೋಗ ಲಕ್ಷಣವಿರುವವರಿಗೆ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ. ಜಿಲ್ಲಾಡಳಿತದ ವತಿಯಿಂದ ಸಹ ಸ್ಕ್ರೀನಿಂಗ್‌ಗೆ ವ್ಯವಸ್ಥೆ ಮಾಡಲಾಗುವುದು ಎಂದರು.
ಅನಿವಾರ್ಯ ಇದ್ದರೆ ಮಾತ್ರ ಪಯಣಿಸಿ: ಕೋವಿಡ್ ಸಂದರ್ಭದಲ್ಲಿ ದೂರದ ಪ್ರಯಾಣ ಒಳ್ಳೆಯದಲ್ಲ. ರೈಲಿನಲ್ಲಿ ಅನಿವಾರ್ಯವಾದರೆ ಮಾತ್ರ ಪ್ರಯಾಣಿಸುವುದು ಉತ್ತಮ ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು. ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ರೈಲ್ವೆ ಅಧಿಕಾರಿಗಳು ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.