ಠಾಕ್ರೆ ಹೇಳಿಕೆ ಖಂಡಿಸಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ
ಉದ್ಧವ್ ಠಾಕ್ರೆ ಹೇಳಿಕೆಗೆ ತಲ್ಲೂರು ಖಂಡನೆ
Team Udayavani, Jan 21, 2021, 7:26 PM IST
ಶಿವಮೊಗ್ಗ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಕರ್ನಾಟಕದ ಗಡಿಭಾಗದ ವಿಚಾರವಾಗಿ ಪದೇ ಪದೇ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಉದ್ಧವ್ ಠಾಕ್ರೆಯವರು ಕೂಡಲೇ ಕ್ಷಮೆಯಾಚಿಸಬೇಕು ಹಾಗೂ ರಾಜ್ಯ ಸರ್ಕಾರ ಈಗಲಾದರೂ ಕನ್ನಡ ನಾಡು, ನುಡಿಯ ಬಗ್ಗೆ ಧ್ವನಿ ಎತ್ತಿ ಗಟ್ಟಿ ನಿರ್ಣಯ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬೆಳಗಾವಿ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡಬೇಕೆ ನ್ನುವ ಅವಿವೇಕಿ ಉದ್ಧವ್ ಠಾಕ್ರೆ ಅವರನ್ನು ಕೂಡಲೇ ಮಾನಸಿಕ ಆಸ್ಪತ್ರೆಗೆ ದಾಖಲಿಸಬೇಕು. ಪದೇ ಪದೇ ಗಲಭೆ ಎಬ್ಬಿಸಲು ಪ್ರಚೋದಿಸುತ್ತಿರುವ ಉದ್ಧವ್ ಠಾಕ್ರೆ ವಿರುದ್ಧ ಈಗಲಾದರೂ ಕರ್ನಾಟಕ ಸರ್ಕಾರ ಸಿಡಿದೇಳಬೇಕೆಂದರು.
ಇದನ್ನೂ ಓದಿ : ಪಿಯು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ಕನ್ನಡಿಗರ ಸ್ವಾಭಿಮಾನಕ್ಕೆ, ನಾಡು-ನುಡಿಗೆ ಧಕ್ಕೆ ಬಂದಾಗ ಈ ನಾಡಿನ ಋಣದಲ್ಲಿರುವ ಇಲ್ಲಿನ ಅನ್ನ, ನೀರು ಸೇವಿಸುವ ಪ್ರತಿಯೊಬ್ಬ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಖಂಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ರಘುವೀರ್ ಸಿಂಗ್, ಸುದೀಪ್ ಕುಮಾರ್, ಹುಲಗಿ ಕೃಷ್ಣ, ಅಜೇಯ ರಾವ್, ನಜೀರ್ ಅಹಮ್ಮದ್, ರಶ್ಮಿ ಸಿಂಗ್, ಕೆ.ಎಸ್. ಆಶಾ, ಎಂ. ಲೋಹಿತ, ಪ್ರಮೋದ್, ಲೋಹಿತ್ ತಿವಾರಿ, ಎಸ್.ಎಲ್. ನಾಗರಾಜ್, ಕೆ. ವಿನೋದ್ ಇನ್ನಿತರರು ಭಾಗವಹಿಸಿದ್ದರು.
ಉದ್ಧವ್ ಠಾಕ್ರೆ ಹೇಳಿಕೆಗೆ ತಲ್ಲೂರು ಖಂಡನೆ
ಸೊರಬ: ರಾಜ್ಯದ ಅವಿಭಾಜ್ಯ ಅಂಗ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕ ಪ್ರಸಂಗತನದ ಹೇಳಿಕೆಯನ್ನುಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಡಾ| ರಾಜು ಎಂ. ತಲ್ಲೂರು ಖಂಡಿಸಿದ್ದಾರೆ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಉದ್ಧವ್ ಠಾಕ್ರೆ ಅವರೇ, ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದು ಎಚ್ಚರಿಸಿದ್ದಾರೆ. ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜೀ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿಗಳು ತಕ್ಕ ಪ್ರತ್ಯುತ್ತರ ನೀಡಬೇಕು. ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ಕನ್ನಡಿಗರ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯುವುದು ಉದ್ಧವ್ ಠಾಕ್ರೆ ಅವರ ಮೂರ್ಖತನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಸೀಶೆಲ್ಸ್, ಮಯಾನ್ಮಾರ್ ದೇಶಗಳಿಗೆ ಭಾರತದ ಕೋವಿಡ್ ಲಸಿಕೆ ರವಾನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್ ಊಟ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.