ಯುವಪಡೆ ಕಟ್ಟಲು ಜೆಡಿಯು ಸನ್ನದ್ಧ: ಮಹಿಮಾ ಪಟೇಲ್‌

Team Udayavani, Feb 25, 2019, 7:47 AM IST

shiv-1.jpg

ಭದ್ರಾವತಿ: ದೇಶವನ್ನು ಕಾಯುವ ಭಾರತದ ಯೋಧರ ಪಡೆ ದೇಶದ ಗಡಿಯಲ್ಲಿ ನಿಂತು ದೇಶವನ್ನು ರಕ್ಷಿಸುತ್ತಿದ್ದರೆ, ದೇಶದ ಒಳಗೆ ಸೈನಿಕರಂತೆ ದುಡಿಯುವ ಯುವ ಪಡೆ ನಿರ್ಮಾಣ ಮಾಡುವ ನಿಟ್ಟಿಯಲ್ಲಿ ಸಂಯುಕ್ತ ಜನತಾದಳ ಮುಂದಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಮಹಿಮಾ ಜೆ.ಪಟೇಲ್‌ ಹೇಳಿದರು.

ಭಾನುವಾರ ನ್ಯೂಟೌನ್‌ ರೋಟರಿ ಕ್ಲಬ್‌ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವ ಸಂಯುಕ್ತ ಜನತಾದಳ ಪದಗ್ರಹಣ, ಸಿದ್ಧಗಂಗಾ ಮಠಾಧಿಧೀಶ, ನಡೆದಾಡುವ ದೇವರು ಡಾ| ಶ್ರೀ ಶಿವಕುಮಾರ ಸ್ವಾಮಿಗಳಿಗೆ ಹಾಗೂ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಮತ್ತು ನಿವೃತ್ತ ಯೋಧರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

 ಗಡಿ ಕಾಯುವ ಯೋಧರ ಸೇವೆ ಅನನ್ಯವಾಗಿದ್ದು ಸೈನಿಕರು ಕೇವಲ ಯುದ್ಧಕ್ಕಾಗಿ ತಮ್ಮ ಕಾರ್ಯವನ್ನು ಮೀಸಲಿಡದೆ ದೇಶದ ಅಭಿವೃದ್ಧಿಗೆ ಸಹ ದುಡಿಯುತ್ತಿದ್ದಾರೆ. ಅವರ ಸೇವೆಯನ್ನು ಇನ್ನೂ ಹೆಚ್ಚಿನ ಮಟ್ಟದಲ್ಲಿ ಬಳಸಿಕೊಳ್ಳುವಂತಾಗಬೇಕು ಎಂದರು.

 ಪಕ್ಷ ಯುವ ಸಮುದಾಯದ ಕಡೆ ಹೆಚ್ಚಿನ ಗಮನ ನೀಡಿದೆ. ಯುವಕರನ್ನು ಹೆಚ್ಚಾಗಿ ಸಂಘಟಿಸುವ ಅಗತ್ಯವಿದೆ. ದುಡಿಯುವ ಕೈಗಳಿಗೆ ಉದ್ಯೋಗ ಕಲ್ಪಿಸಿಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಅಭಿವೃದ್ಧಿಗೊಳಿಸಬೇಕಾಗಿದೆ. ನಗರದ ಎರಡು ಕಣ್ಣುಗಳಾಗಿರುವ ವಿಐಎಸ್‌ಎಲ್‌ ಮತ್ತು ಎಂಪಿಎಂ ಕಾರ್ಖಾನೆಗಳು ಅಭಿವೃದ್ಧಿಗೊಳ್ಳಬೇಕಾಗಿದೆ. ಪಕ್ಷದ ಯುವ ಪಡೆ ಈ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಸಲಹೆ ನೀಡಿದರು. 

 ವಿಐಎಸ್‌ಎಲ್‌ ಕಾರ್ಖಾನೆ ಗುತ್ತಿಗೆದಾರರು ನಡೆಸುತ್ತಿರುವ ಹೋರಾಟಕ್ಕೆ ಪಕ್ಷ ಬೆಂಬಲ ನೀಡಲಿದ್ದು, ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿಕೊಡುವ ಸುಳ್ಳು ಆಶ್ವಾಸನೆ ನೀಡುವುದಿಲ್ಲ. ಬದಲಿಗೆ ಅವರ ಹೋರಾಟದಲ್ಲಿ ನಾವುಗಳು ಸಹ ಭಾಗಿಯಾಗುತ್ತಿದ್ದೇವೆ ಎಂದರು.

 ರಾಜ್ಯ ಉಪಾಧ್ಯಕ್ಷರಾಗಿ ಶಶಿಕುಮಾರ್‌ ಎಸ್‌. ಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಬಾಬು ದೀಪಕ್‌ ಕುಮಾರ್‌ ಪದಗ್ರಹಣ ಸ್ವೀಕರಿಸಿದರು. ಉಳಿದಂತೆ ಬಹುತೇಕ ಮಂದಿ ಪಕ್ಷಕ್ಕೆ ಸೇರ್ಪಡೆಗೊಂಡರು.

 ನಿವೃತ್ತ ಯೋಧರಾದ ಚಂದ್ರಕುಮಾರ್‌, ಜಗದೀಶ್‌ಕುಮಾರ್‌, ಶ್ರೀಧರ್‌, ಆನಂದ್‌ ಮತ್ತು ಸುರೇಶ್‌ ಅವರನ್ನು ಸನ್ಮಾನಿಸಲಾಯಿತು. ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಕೆ.ವಿ ಶಿವರಾಮ್‌ ಅಧ್ಯಕ್ಷತೆ ವಹಿಸಿದ್ದರು.  ಪ್ರಮುಖರಾದ ಬಿ.ಎನ್‌ ರಾಜು, ಸತ್ಯನಾರಾಯಣ ಘೋರ್ಪಡೆ, ತಾತೋಜಿರಾವ್‌, ಉಪನ್ಯಾಸಕ ಡಾ| ಕೆ.ಎನ್‌. ಗಿರೀಶ್‌, ಎಸ್‌. ಕೃಷ್ಣ, ಗೀತಾಂಜಲಿ ಮತ್ತಿತರರು ಇದ್ದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.