ಸರಿಯಾಗಿ ಕೆಲಸ ಮಾಡದ ವೈದ್ಯರ ವಿರುದ್ಧ ಕ್ರಮ ಜರುಗಿಸಿ: ಈಶ್ವರಪ್ಪ
Team Udayavani, Apr 30, 2021, 12:07 PM IST
ಶಿವಮೊಗ್ಗ: ಇಲ್ಲಿನ ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಮಹತ್ವದ ಸಭೆ ನಡೆಸಿದರು. ಸಿಮ್ಸ್ ಕಾಲೇಜು ಆವರಣದಲ್ಲಿ ಕೆ.ಎಸ್.ಈಶ್ವರಪ್ಪ ಹಾಗೂ ಆಯನೂರು ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಲಾಯಿತು.
ಆಸ್ಪತ್ರೆಯಲ್ಲಿ ಸರ್ಸ್ ಗಳ ಕೊರತೆಯಿದ್ದು, ಈ ಸಮಸ್ಯೆ ಬಗೆಹರಿಸುವಂತೆ ಸಚಿವರು ಸೂಚನೆ ನೀಡಿದರು. ಜೊತೆಗೆ ಸಚಿವ ಈಶ್ವರಪ್ಪ, ವೈದ್ಯರು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಭದ್ರಾವತಿ ನಗರಸಭೆಯೂ ‘ಕೈ’ ತೆಕ್ಕೆಗೆ: ನಿರಾಸೆ ಅನುಭವಿಸಿದ ಕಮಲ, ದಳ ಪಕ್ಷಗಳು
ಯಾವ ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲವೋ ತನಿಖೆ ಮಾಡಿ ಅವರ ವಿರುದ್ಧ ಕ್ರಮ ಜರುಗಿಸಿ ಎಂದು ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ ಅವರಿಗೆ ಸೂಚನೆ ನೀಡಿದರು.
ಭಾನುವಾರ ಸಂಜೆ ಒಳಗಾಗಿ ಮೆಗ್ಗಾನ್ ಆಸ್ಪತ್ರೆ ಸಮಸ್ಯೆಗಳ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿದ ಅವರು, ಸೋಮವಾರ ಮತ್ತೆ ಸಭೆ ನಡೆಸಿ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುವುದಾಗಿ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.