ಷಡ್ಯಂತ್ರದ ಹಿಂದೆ ಯಾರಿದ್ದಾರೆಂದು ಗೊತ್ತಾದರೆ ಸಂತೋಷ್ ಆತ್ಮಕ್ಕೂ ಶಾಂತಿ ಸಿಗಲಿದೆ: ಈಶ್ವರಪ್ಪ
Team Udayavani, Apr 16, 2022, 2:33 PM IST
ಶಿವಮೊಗ್ಗ: ತಪ್ಪು ಮಾಡಿದವರು ಹೊರಗೆ ಬರಬೇಕು. ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಈ ಷಡ್ಯಂತ್ರದ ರೂವಾರಿಗಳು ಯಾರು? ವ್ಯಕ್ತಿಯೋ, ಸಂಸ್ಥೆಯೋ, ಪಕ್ಷವೋ ಎಂದು ಹೊರಗೆ ಬರಬೇಕು. ಆಗ ನಿಜಕ್ಕೂ ಮೃತ ಸಂತೋಷ್ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಮೃತ ಹುಡುಗನ ಬಗ್ಗೆ ನನಗೂ ಸಹ ಒಂದು ರೀತಿಯ ಕರುಣೆಯಿದೆ. ಆ ಹುಡುಗನನ್ನು ಯಾರಾದರೂ ದುರುಪಯೋಗ ಮಾಡಿಕೊಂಡರೇ ಎಂಬ ಬಗ್ಗೆ ತನಿಖೆ ಆದ ನಂತರವೇ ಹೊರ ಬರಲಿದೆ. ಈ ಬಗ್ಗೆ ನ್ಯಾಯ ಹೊರಗೆ ಬರಬೇಕು ಎಂದರು.
ಒಪ್ಪಿಗೆ ಪಡೆದು ರಾಜೀನಾಮೆ: ಇಡೀ ರಾಜ್ಯದ ಜನ, ನನ್ನ ಕ್ಷೇತ್ರದಲ್ಲಿ ಗೆಲ್ಲಿಸಿದ ಜನ ನಮ್ಮ ಪರಿವಾರದ ಹಿರಿಯರು, ರಾಜ್ಯ ಹಾಗೂ ರಾಷ್ಟ್ರದ ನಾಯಕರು, ಮಂತ್ರಿಗಳು, ಶಾಸಕರು ಯಾರಿಗೂ ಕೂಡಾ ಇರಿಸುಮುರಿಸು ಆಗಬಾರದೆಂದು ಎಲ್ಲಾ ಹಿರಿಯರ ಒಪ್ಪಿಗೆ ಪಡೆದು ರಾಜೀನಾಮೆ ಕೊಟ್ಟಿದ್ದೇನೆ ಎಂದರು.
ರಾಜೀನಾಮೆ ಕೊಡುವ ವೇಳೆ ಬಲಪ್ರದರ್ಶನ ಅಲ್ಲ. ನಾನು ರಾಜೀನಾಮೆ ಕೊಡುತ್ತೇನೆಂದು ಹೇಳಿದಾಗ ನನ್ನ ಜೊತೆ ಬರುತ್ತೇನೆ ಎಂದಿದ್ದರು. ಒಂದು 3-4 ಕಾರಿನಲ್ಲಿ ಬರುತ್ತಾರೆ ಅಂದುಕೊಂಡಿದ್ದೆ. ಆದರೆ, ನೂರಾರು ಕಾರಿನಲ್ಲಿ ಬರುತ್ತಾರೆಂದು ಗೊತ್ತಿರಲಿಲ್ಲ. ಅವರ ಅಭಿಮಾನ, ಸ್ನೇಹ, ಬಾಂಧವ್ಯ, ಬೆಂಗಳೂರಿನವರೆಗೆ ಬಂದು ಬೆಂಬಲ ಕೊಟ್ಟಿದ್ದು ನನಗೂ ಸಂತೋಷವಾಗಿದೆ ಎಂದರು.
ರಾಜ್ಯದಲ್ಲಿ ಎಲ್ಲರೂ ನನಗೆ ಬೆಂಬಲ ಕೊಡುತ್ತಿದ್ದಾರೆ. ಒಂದೇ ಒಂದು ನನ್ನ ಬಗ್ಗೆ ಒಡಕು ಧ್ವನಿ ಇಲ್ಲ. ಎಲ್ಲರದ್ದು ಒಂದೇ ಧ್ವನಿ, ಇದರಲ್ಲಿ ನಿಮ್ಮ ಯಾವುದೇ ತಪ್ಪು ಇಲ್ಲ. ಷಡ್ಯಂತ್ರ ಇದೆ. ಈ ಷಡ್ಯಂತ್ರದಿಂದ ನೀವು ಹೊರಗೆ ಬರುತ್ತೀರಾ ಎಂಬ ಮಾತನ್ನು ಎಲ್ಲರೂ ಹೇಳುತ್ತಿದ್ದಾರೆ ಎಂದರು.
ಅನುಮಾನವಿದೆ: ನಾನು ಅವರಿಗೆ (ಸಂತೋಷ್) ನ್ಯಾಯಾಲಯದ ಮೂಲಕ ನೋಟೀಸ್ ಕೊಟ್ಟಾಗ ಹೆದರಿಕೊಂಡು ಈ ರೀತಿ ಮಾಡಿಕೊಂಡಿದ್ದಾರೆಂದುಕೊಂಡಿದ್ದೆ. ಆದರೆ ಆಮೇಲೆ ನನಗೆ ಒಂದೊಂದೇ ಅನುಮಾನ ಬರುತ್ತಿದೆ. ಇದು ಆತ್ಮಹತ್ಯೆಯೋ, ಕೊಲೆಯೋ ಎಂಬ ಅನುಮಾನ ಬರುತ್ತಿದೆ. ಕೊಲೆ ಎನ್ನುವ ಅಂಶಗಳ ಬಗ್ಗೆ ಬೇರೆ ಬೇರೆಯವರ ಜೊತೆ ಮಾತನಾಡಿದಾಗ ಅನೇಕ ಅಂಶ ಮಾತನಾಡಿದ್ದಾರೆ. ಈ ಬಗ್ಗೆ ಆದಷ್ಟು ಬೇಗ ತನಿಖೆ ವರದಿ ಬರಬೇಕು ಅಂತಾ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದೇನೆ ಎಂದು ಈಶ್ವರಪ್ಪ ಹೇಳಿದರು.
ಇದನ್ನೂ ಓದಿ:ಸಂತೋಷ್ ಪಾಟೀಲ್ ಕೇಸ್: ತನಿಖೆಗೆ ಉಡುಪಿ ಎಸ್ಪಿ ನೇತೃತ್ವದಲ್ಲಿ 7 ತಂಡಗಳ ರಚನೆ; ಎಡಿಜಿಪಿ
ಇದು ಆತ್ಮಹತ್ಯೆಯೋ, ಕೊಲೆಯೋ ಎಂದು ಗೊತ್ತಿಲ್ಲ. ಏನೂ ಗೊತ್ತಿಲ್ಲದೇ ಸರಕಾರ ಸಹ ಏನು ಮಾಡಲು ಸಾಧ್ಯವಿಲ್ಲ. ತನಿಖೆಯ ವರದಿ ಬಂದ ನಂತರ ಸಿಎಂ ಜೊತೆ ಮಾತನಾಡುತ್ತೇನೆ. ತನಿಖೆ ನಡೆಯುವ ಸಂದರ್ಭದಲ್ಲಿ ಇದರ ಹಿಂದೆ ಡಿಕೆಶಿ ಇದ್ದಾರೋ, ಇಲ್ಲವೋ ಎಂಬ ಬಗ್ಗೆ ಈಗಲೇ ಹೇಳಲ್ಲ. ವರದಿಯ ಬಳಿಕ ಗೊತ್ತಾದರೆ ಆಗ ಹೇಳುತ್ತೇನೆ. ತನಿಖೆಯ ವರದಿ ತಿಳಿದುಕೊಳ್ಳದೇ ಏನು ಹೇಳಲು ಇಷ್ಟಪಡುವುದಿಲ್ಲ ಎಂದರು.
ವೀರಶೈವ ಸಮಾಜದವರ ಹೋರಾಟ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವೀರಶೈವ ಸಮಾಜದ ಯಾರೋ ನಾಲ್ಕು ಜನ ಫ್ಲೆಕ್ಸ್ ಹಾಕಿದ ಮಾತ್ರಕ್ಕೆ ನಾನು ಒಪ್ಪಲ್ಲ. ಸಮಾಜದವರು, ಕುಟುಂಬದವರು ಏನು ಮಾಡಬೇಕೋ ಮಾಡಲಿ. ಅದು ಅವರ ಕರ್ತವ್ಯ ಎಂದರು.
ಮೊಮ್ಮಗನ ಆರತಕ್ಷತೆ: ಕಾರ್ಯಕಾರಿಣಿ ಸಭೆಗೆ ಗೈರಾದ ಬಗ್ಗೆ ಕೇಳಲಾದ ಪ್ರಶ್ಮೆಗೆ ಉತ್ತರಿಸಿದ ಅವರು, ಇದೇ 20 ಹಾಗು 21 ರಂದು ನನ್ನ ಮೊಮ್ಮಗನ ಮದುವೆ ಸಮಾರಂಭ ಇರುವ ಕಾರಣ ಕಾರ್ಯಕಾರಿಣಿಗೆ ಹೋಗಲ್ಲ. ಈ ಬಗ್ಗೆ ರಾಜ್ಯಾಧ್ಯಕ್ಷರಿಗೆ, ಮುಖ್ಯಮಂತ್ರಿಯವರಿಗೆ ತಿಳಿಸಿದ್ದೇನೆ. ಇದೇ 19 ರಂದು ಬಳ್ಳಾರಿಯಲ್ಲಿ ಕಾರ್ಯಕ್ರಮ ಇದೆ. ಆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ನಮ್ಮ ಮನೆ ದೇವರು ಸಹ ಬಳ್ಳಾರಿಯಲ್ಲಿ ಇದೆ. ಮನೆ ದೇವರು ಪೂಜೆ ಮಾಡಿಕೊಂಡು ಬರುವವನಿದ್ದೇನೆ. 20 ರಂದು ನನ್ನ ಮೊಮ್ಮಗನ ಆರತಕ್ಷತೆ ಇದೆ. ಆ ಸಮಾರಂಭದಲ್ಲಿ ಸಿಎಂ ಕೂಡಾ ಭಾಗವಹಿಸುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ
Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
MUST WATCH
ಹೊಸ ಸೇರ್ಪಡೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Abhimanyu Kashinath; ಸೂರಿ ಲವ್ ಗೆ ಉಪ್ಪಿ ಮೆಚ್ಚುಗೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.