ಸತ್ಯವನ್ನು ಮುಚ್ಚಿಟ್ಟು ಸುಳ್ಳನ್ನು ವೈಭವೀಕರಿಸುವುದೇ ಕಾಂಗ್ರೆಸ್ ಕೆಲಸ: ಈಶ್ವರಪ್ಪ
ಯಡಿಯೂರಪ್ಪ ಹಸಿರು ಶಾಲು ಹೊದ್ದಿದ್ದಾರೆ. ಸಿದ್ದರಾಮಯ್ಯ ಅವರಿಗೆ ಹಸಿರು ಶಾಲು ಇಲ್ಲ ನೀಲಿ ಶಾಲು ಇಲ್ಲ
Team Udayavani, Oct 3, 2020, 12:11 PM IST
ಶಿವಮೊಗ್ಗ: ಕೇಂದ್ರ ಸರ್ಕಾರ ಕೃಷಿ ಬಗ್ಗೆ ನೂತನ ಮಸೂದೆ ಜಾರಿಗೆ ತಂದಾಗ ರೈತರು ಖುಷಿಪಟ್ಟರು. ಆದರೆ ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ರೈತರ ಹೆಸರಿನಲ್ಲಿ ವಿರೋಧ ವ್ಯಕ್ತಪಡಿಸಿವೆ. ರೈತರು ಹೀಗೆ ಸುಳ್ಳು ಹೇಳುವವರ ಬಗ್ಗೆ ಎಚ್ಚರದಿಂದಿರಬೇಕು. ಸತ್ಯವನ್ನು ಮುಚ್ಚಿಟ್ಟು ಸುಳ್ಳನ್ನು ವೈಭವೀಕರಿಸುವುದೇ ಕಾಂಗ್ರೆಸ್ ಕೆಲಸ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಭಾರತದ ರಕ್ಷಣಾ ವ್ಯವಸ್ಥೆ ಬಲಪಡಿಸಲು ರಫೆಲ್ ಒಪ್ಪಂದ ಮಾಡಿಕೊಂಡಾಗ ಕಾಂಗ್ರೆಸ್ ಇದೊಂದು ದೊಡ್ಡ ಹಗರಣ ಎಂದು ಆಪಾದಿಸಿತ್ತು. ಹಗರಣ ಸುಳ್ಳು ಎಂದು ಸುಪ್ರೀಂ ಕೋರ್ಟ್ ಹೇಳಿದ ನಂತರ ಕಾಂಗ್ರೆಸ್ ಬಾಯಿ ಮುಚ್ಚಿಕೊಂಡಿತು. ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಾಗ ಅಲ್ಪ ಸಂಖ್ಯಾತರಿಗೆ ಬಿಜೆಪಿ ಅನ್ಯಾಯ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಬಿಂಬಿಸಿತು. ಆದರೆ ಬಿಜೆಪಿ ಹಿಂದು ಮುಸ್ಲಿಂ ಕ್ರೈಸ್ತರು ಒಂದೇ ಪೌರತ್ವದಲ್ಲಿ ಬದುಕಲಿ ಎಂಬ ಕಾರಣದಿಂದ ಮಸೂದೆ ಜಾರಿಗೆ ತರಲಾಗಿದೆ ಎಂದು ಗೊತ್ತಾದ ಬಳಿಕ ಕಾಂಗ್ರೆಸ್ ಬಾಯಿ ಮುಚ್ಚಿಕೊಂಡಿತು. ಇದೇ ರೀತಿ ಬರೀ ಸುಳ್ಳು ಹೇಳುವುದೇ ಕಾಂಗ್ರೆಸ್ ಎಂದು ಟೀಕಿಸಿದರು.
ಇದನ್ನೂ ಓದಿ:ಮಿನಿಫೈಟ್: ಶಿರಾ ಬಿಜೆಪಿ ಅಭ್ಯರ್ಥಿ ಬಹುತೇಕ ಅಂತಿಮ, ರಾಜೇಶ್ ಗೌಡ ಇಂದು ಬಿಜೆಪಿ ಸೇರ್ಪಡೆ
ಕೃಷಿ ಮಸೂದೆಯ ಬಗ್ಗೆ ಕಾಂಗ್ರೆಸ್ ಪಕ್ಷ ಹೇಳುತ್ತಿರುವ ಸುಳ್ಳನ್ನು ರೈತರು ನಂಬಬಾರದು. ರಾಜ್ಯದಲ್ಲೂ ಕೃಷಿ ಮಸೂದೆ ತಂದಾಗ ಇಲ್ಲಿಯೂ ಯಡಿಯೂರಪ್ಪ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಯಡಿಯೂರಪ್ಪ ಹಸಿರು ಶಾಲು ಹೊದ್ದಿದ್ದಾರೆ. ಸಿದ್ದರಾಮಯ್ಯ ಅವರಿಗೆ ಹಸಿರು ಶಾಲು ಇಲ್ಲ ನೀಲಿ ಶಾಲು ಇಲ್ಲ. ಬರೀ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಟೀಕೆ ಮಾಡುವುದೇ ಕಾಂಗ್ರೆಸ್ ಕೆಲಸ. ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಅವರಿಗೆ ನಾಚಿಕೆಯಾಗಬೇಕು ಎಂದು ಈಶ್ವರಪ್ಪ ಕಿಡಿಕಾರಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.