ಯತ್ನಾಳ್ ಹೇಳಿಕಗಳನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ: ಈಶ್ವರಪ್ಪ
Team Udayavani, Dec 26, 2020, 1:18 PM IST
ಶಿವಮೊಗ್ಗ: ಶಾಸಕ ಬಸನಗೌಡ ಯತ್ನಾಳ್ ಒಳ್ಳೆಯ ನಾಯಕ. ಕಠೋರ ಹಿಂದುತ್ವವಾದಿ. ಅದರೆ ಹೇಳಿಕೆ ಕೊಟ್ಟು ಮುಜುಗರಕ್ಕೆ ಸಿಲುಕುತ್ತಾರೆ. ಅವರ ಹೇಳಿಕೆಯನ್ನು ಬಿಜೆಪಿ ಜೊತೆಗೆ ಜನರೂ ಸಹ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಯತ್ನಾಳ್ ಹೇಳಿಕೆಗಳನ್ನು ರಾಜ್ಯದ ನಾಯಕರು ಇದನ್ನು ಗಮನಿಸುತ್ತಿದ್ದಾರೆ. ಅದನ್ನು ಸರಿಪಡಿಸುತ್ತಾರೆ. ನಾನು ಸಹ ಅವರ ಜೊತೆ ಮಾತನಾಡಿದ್ದೇನೆ. ಅದರೂ ಮತ್ತೆ ಹೀಗೆ ಮಾತನಾಡಿದ್ದಾರೆ ಎಂದರು.
ಇದನ್ನೂ ಓದಿ:ಯತ್ನಾಳ್ ಹೇಳಿಕೆ ವಿರುದ್ದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಗರಂ
ಯತ್ನಾಳ್ ಅವರು ಸಹ ನಮ್ಮ ಪ್ರಮುಖ ನಾಯಕರು. ಪಕ್ಷ ಹಾಗೂ ಸರ್ಕಾರಕ್ಕೆ ಡ್ಯಾಮೇಜ್ ಅಗುವ ಬಗ್ಗೆ ಅವರಿಗೆ ಗೊತ್ತಿದೆ. ಆದರೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಕರೆದು ಮಾತನಾಡುತ್ತೇವೆ ಎಂದು ಈಶ್ವರಪ್ಪ ಹೇಳಿದರು.
ರಾಜಕೀಯ ಷಡ್ಯಂತ್ರ
ರೈತರ ಹೋರಾಟ ಒಂದು ರಾಜಕೀಯ ಷಡ್ಯಂತ್ರ. ದೇಶದ ರೈತರು ತಾವು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ಅದಕ್ಕೆ ಕಾಯ್ದೆ ಮೂಲಕ ಅವಕಾಶ ಮಾಡಿಕೊಡಲಾಗಿದ್ದು, ರೈತರು ಒಪ್ಪಿಕೊಂಡಿದ್ದಾರೆ. ಆದರೆ ಕುತಂತ್ರದ ರಾಜಕಾರಣಿಗಳು ರೈತರನ್ನು ಎತ್ತಿಕಟ್ಟುವ ಕೆಲಸ ಮಾಡ್ತಿದ್ದಾರೆ. ಅದರೆ ಇದು ಬಹಳ ದಿನ ನಡೆಯುವುದಿಲ್ಲ. ಇದು ಕಾಂಗ್ರೆಸ್ ಪ್ರೇರಿತ ರೈತರ ಹೋರಾಟ ಎಂದ ಈಶ್ವರಪ್ಪ ಆರೋಪಿಸಿದರು.
ಭದ್ರಾವತಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರುವ ಸಾಧ್ಯತೆಯಿದೆ. ಮುಂದಿನ ಜನವರಿಯಲ್ಲಿ ಶಾ ಬರಲಿದ್ದು, ದಿನಾಂಕ ಇನ್ನೂ ನಿಗದಿಯಾಗಿಲ್ಲ. ಆರ್ ಎಎಫ್ ಘಟಕ ಸ್ಥಾಪನೆ ಸಂಬಂಧ ಬರುವ ನಿರೀಕ್ಷೆಯಿದೆ ಎಂದ ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.