ನುಡಿ ತೇರಿನ ಪ್ರಚಾರ ರಥಕ್ಕೆ ಚಾಲನೆ
Team Udayavani, Jan 31, 2020, 2:35 PM IST
ಕಲಬುರಗಿ: ಫೆ.5 ರಿಂದ 7ರ ವರೆಗೆ ನಡೆಯಲಿರುವ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯಲ್ಲಿ ಅಕ್ಷರ ಜಾತ್ರೆ ಕುರಿತು ಜನಜಾಗೃತಿ ಮೂಡಿಸಲು ಮತ್ತು ನುಡಿ ಸಮ್ಮೇಳನಕ್ಕೆ ಆಹ್ವಾನಿಸುವ ವಿಶೇಷ ವಿನ್ಯಾಸದ ಪ್ರಚಾರ ರಥಕ್ಕೆ ಶಾಸಕರಾದ ಖನೀಜ್ ಫಾತಿಮಾ, ಎಂ.ವೈ.ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರಚಾರ ಸಮಿತಿಯಿಂದ ಸಿದ್ಧಪಡಿಸಲಾದ ತಾಯಿ
ಭುವನೇಶ್ವರಿ ಭಾವಚಿತ್ರ ಒಳಗೊಂಡ ಅನುಭವ ಮಂಟಪದ ಮಾದರಿಯ ಈ ಭವ್ಯ ಪ್ರಚಾರ ರಥಕ್ಕೆ ಚಾಲನೆ ನೀಡಿದ ಶಾಸಕದ್ವಯರು ಮತ್ತು ಜಿಲ್ಲಾಧಿಕಾರಿಗಳು ರಥವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಭವ್ಯ ಪ್ರಚಾರ ರಥವು ಜಿಲ್ಲೆಯ ಎಲ್ಲ ತಾಲೂಕಾ ಕೇಂದ್ರಸ್ಥಾನ, ಪ್ರಮುಖ ಹೋಬಳಿ, ಹೆದ್ದಾರಿಗಳಲ್ಲಿ ಸಂಚರಿಸಿ ನುಡಿ ಜಾತ್ರೆಗೆ ಆಹ್ವಾನ ನೀಡಲಿದೆ. ರಥದಲ್ಲಿ ಸಮ್ಮೇಳನದ ಪ್ರಚಾರ ಸಾಮಗ್ರಿಗಳಾದ ಪೋಸ್ಟರ್ ಮತ್ತು ಕರಪತ್ರಗಳಿದ್ದು, ಸಿಬ್ಬಂದಿಗಳು ಇದನ್ನು ಪ್ರತಿ ಊರಿನಲ್ಲಿ ಸಾರ್ವಜನಿಕರಿಗೆ ಹಂಚಲಿದ್ದಾರೆ.
ಅಲ್ಲದೇ ನುಡಿ ಜಾತ್ರೆಯ ಪ್ರಚಾರದ ಜಿಂಗಲ್ಸ್ ಹಾಡುಗಳು, ಬಾರಿಸು ಕನ್ನಡ ಡಿಂಡಿಮವಾ ಓ ಕರ್ನಾಟಕ ಹೃದಯ ಶಿವ, ನುಡಿ ತೇರ.. ಹೀಗೆ ಕನ್ನಡಾಭಿಮಾನ ಹೆಚ್ಚಿಸುವ ಗೀತೆಗಳನ್ನು ರಥವು ಪ್ರಸಾರ ಮಾಡುತ್ತಾ ಕನ್ನಡಿಗರಲ್ಲಿ ನಾಡಿನ ನೆಲ-ಜಲ ಭಾಷೆ ಬಗ್ಗೆ ಅಭಿಮಾನ ಮೂಡಿಸಲಿದೆ.
ಎಲ್‌ಇಡಿ ವಾಹನಕ್ಕೂ ಚಾಲನೆ: ಇದೇ ವೇಳೆ ನುಡಿ ಜಾತ್ರೆಗೆ ಸ್ವಯಂ ಪ್ರೇರಿತರಾಗಿ ಸೇವೆ ಸಲ್ಲಿಸಲು ತಮ್ಮ ಎಲ್‌ಇಡಿ ವಾಹನದಲ್ಲಿ ಸಮ್ಮೇಳನಕ್ಕೆ ಆಹ್ವಾನಿಸುವ ದೃಶ್ಯ ಜಾಹೀರಾತುಗಳು, ಕನ್ನಡ ಹಾಡುಗಳನ್ನು ಪ್ರಸಾರ ಮಾಡಲು ಮುಂದೆ ಬಂದಿರುವ ಕಲಬುರಗಿ ನಗರದ ಧ್ರುವಾ ಜಾಹೀರಾತು ಸಂಸ್ಥೆಯ ಎಲ್‌ಇಡಿ ಪ್ರಚಾರ ವಾಹನಕ್ಕೂ ಚಾಲನೆ ನೀಡಿದ ಗಣ್ಯರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನಿರ್ಮಿಸಿದ “ಬಾರಿಸು
ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವಾ” ದೃಶ್ಯ ಗೀತೆಯನ್ನು ನೋಡಿ ಸಂತಸಪಟ್ಟರು.
ನಾಡು ನುಡಿಗೆ ಉಚಿತ ಸೇವೆ ನೀಡಲು ಬಂದ ಸಂಸ್ಥೆಯ ಪ್ರತಿನಿಧಿ ಸಂಜಯ ಸುತ್ರಾವೆ ಅವರಿಗೆ ಜಿಲ್ಲಾಧಿಕಾರಿ ಶರತ್ ಬಿ. ಅಭಿನಂದನೆ ಸಲ್ಲಿಸಿದರು. ಜಿಲ್ಲಾ ಪಂಚಾಯತ್ ಸದಸ್ಯ ಶಿವರಾಜ ರದ್ದೆವಾಡಗಿ, ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೀರಭದ್ರ ಸಿಂಪಿ, ಪ್ರಚಾರ ಸಮಿತಿ ಕಾರ್ಯಧ್ಯಕ್ಷರಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರವಿರಾಜ ಹೆಚ್ .ಜಿ., ಡಿಡಿಎಲ್‌ಆರ್ ಉಪನಿರ್ದೇಶಕ ಶಂಕರ ಖಾದಿ, ಜಿಲ್ಲಾ ಬಿಸಿಎಂ ಅಧಿಕಾರಿ ರಮೇಶ ಸಂಗಾ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.