ಕೆಎಫ್‌ಡಿ ವಿಶೇಷ ತನಿಖೆಗೆ ಒತ್ತಾಯ
Team Udayavani, Jan 28, 2019, 10:50 AM IST
ಸಾಗರ: ತಾಲೂಕಿನ ಅರಳಗೋಡು ಹಾಗೂ ಇನ್ನೂ ಹಲವು ಪ್ರದೇಶಗಳಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಈ ರೋಗ ವಿಪರೀತ ಪ್ರಮಾಣದಲ್ಲಿ ಹರಡಿರುವ ಬಗ್ಗೆ ವಿಶೇಷ ಕಾರಣ ಏನು ಎಂಬ ಬಗ್ಗೆ ವಿಶೇಷ ತನಿಖೆ ನಡೆಸಬೇಕು ಎಂದು ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಗ್ರಾಮಸ್ಥರು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ. ತಮ್ಮಣ್ಣ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ವಿಶ್ವ ಆರೋಗ್ಯ ಸಂಸ್ಥೆಯ ಡ್ರಗ್ಸ್ ಮತ್ತು ಕ್ರೈಂ ವಿಭಾಗ ಕೆಎಫ್‌ಡಿ ವೈರಾಣುವನ್ನು ಜೈವಿಕ ಅಸ್ತ್ರವಾಗಿ ಬಳಸುವ ಏಜೆಂಟ್ ಎಂದು ಅಲರ್ಟ್ ಎಂದು ಘೋಷಿಸಿದ್ದು 2009ರಲ್ಲಿ ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಕೈಪಿಡಿಯಲ್ಲೂ ಇದರ ಎಚ್ಚರಿಕೆಯನ್ನು ನೀಡಿದೆ. ಆದರೆ ನಮ್ಮ ಸರ್ಕಾರಗಳು ಇದಕ್ಕೆ ಗಮನ ನೀಡಿದಂತೆ ಕಂಡುಬರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಕೆಎಪ್‌ಡಿ ಹಿಂದೆಂದೂ ಕಾಣದ ರೀತಿಯಲ್ಲಿ ಹರಡುತ್ತಿದ್ದು ಇದು ಪ್ರಕೃತಿ ಸಹಜವೋ, ಕೃತಕವೋ ಎಂಬುದನ್ನು ಸರ್ಕಾರ ಖಚಿತಪಡಿಸಿಕೊಳ್ಳಲು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಕೆಎಫ್‌ಡಿ ಆರೋಗ್ಯದ ವಿಷಯವಲ್ಲದೆ ದೇಶದ ರಕ್ಷಣಾ ವಿಷಯವೂ ಆಗಿರುವುದರಿಂದ ಜೈವಿಕ ಅಸ್ತ್ರ ಆಗಿರುವ ಕುರಿತು ನಿರ್ಲಕ್ಷ್ಯ ಸಲ್ಲ. ತಾಲೂಕಿನ ಭಾರಂಗಿ ಹೋಬಳಿಯ ಅರಳಗೋಡು ಗ್ರಾಪಂ ವ್ಯಾಪ್ತಿಯಲ್ಲಿ ಹರಡಿರುವ ಮಂಗನ ಕಾಯಿಲೆಗೆ ಅಗತ್ಯ ಚಿಕಿತ್ಸೆ ಮತ್ತು ರೋಗ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಂಗನ ಕಾಯಿಲೆಯಿಂದ ಮೃತಪಟ್ಟವರ ಅವಲಂಬಿತರಿಗೆ ಕೂಡಲೇ 10 ಲಕ್ಷ ರೂ. ಪರಿಹಾರ ನೀಡಬೇಕು. ಅರಣ್ಯದಲ್ಲಿ ಸತ್ತ ಮಂಗಗಳನ್ನು ಕೂಡಲೇ ಪತ್ತೆ ಹಚ್ಚಿ ರೋಗ ಹರಡದಂತೆ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ ಕ್ಷಿಪ್ರ ಕಾರ್ಯಾಚರಣೆಯ ಮಾದರಿ ಕೂಂಬಿಂಗ್ ಪಡೆ ರಚಿಸಬೇಕು. ಮಂಗನ ಕಾಯಿಲೆ ಸಂಪೂರ್ಣ ಗುಣಮುಖವಾಗುವವರೆಗೂ ಅರಲಗೋಡು ಆರೋಗ್ಯ ಕೇಂದ್ರದಲ್ಲಿ ವಿಶೇಷ ಸೇವಾ ವ್ಯವಸ್ಥೆಯನ್ನು ವಿಸ್ತರಣೆ ಮಾಡಬೇಕು ಎಂದು ಅರಳಗೋಡು ಭಾಗದ ತಾಪಂ ಮಾಜಿ ಅಧ್ಯಕ್ಷ ಬಿ.ಸಿ. ಲಕ್ಷ್ಮೀನಾರಾಯಣ ಭಟ್ ಬಣ್ಣೂಮನೆ, ಗ್ರಾಪಂ ಸದಸ್ಯ ಚಂದ್ರರಾಜು ಕೆ.ಎಸ್., ರವಿಕುಮಾರ್ ಜೈನ್ ಇತರರು ಮನವಿ ಸಲ್ಲಿಸಿದರು. ಶಾಸಕ ಹಾಲಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ತಾಪಂ ಅಧ್ಯಕ್ಷ ಬಿ.ಎಚ್. ಮಲ್ಲಿಕಾರ್ಜುನ ಹಕ್ರೆ, ಸದಸ್ಯೆ ಪ್ರಭಾವತಿ ಚಂದ್ರಕಾಂತ, ಗ್ರಾಪಂ ಉಪಾಧ್ಯಕ್ಷೆ ಶಿವಮ್ಮ ಮೇಘರಾಜ್, ಸದಸ್ಯ ಚಂದ್ರಕಾಂತ, ಚಂದ್ರರಾಜ್ ಕಸಗುಪ್ಪೆ, ಜಿಪಂ ಕಾರ್ಯ ನಿರ್ವಹಣಾಧಿಕಾರಿ ಶಿವರಾಮೇ ಗೌಡ, ಸಹಾಯಕ ಆಯುಕ್ತ ದರ್ಶನ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.