Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
Team Udayavani, Nov 19, 2024, 4:25 PM IST
ಶಿವಮೊಗ್ಗ: ಮಲ್ಲಿಕಾರ್ಜುನ ಖರ್ಗೆಯವರಂತಹ ಹಿರಿಯ ರಾಜಕಾರಣಿ ಈ ರೀತಿ ಮಾತನಾಡಿರುವುದು ನೋವುಂಟಾಗಿದೆ. ಆರ್ ಎಸ್ಎಸ್ ನ ಸ್ವಯಂ ಸೇವಕರನ್ನು ಕೊಲ್ಲಿ ಎಂದಿರುವುದು ಸರಿಯಲ್ಲ. ಈ ಹೇಳಿಕೆ ನನಗೆ ಆಶ್ಚರ್ಯ ತಂದಿದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದರು.
ಆರ್.ಎಸ್.ಎಸ್. ಹಾಗೂ ಬಿಜೆಪಿ ವಿಷಕಾರಿ ಹಾವು ಇದ್ದಂತೆ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದರು.
ವ್ಯಕ್ತಿತ್ವ ನಿರ್ಮಾಣ ಮಾಡುವ ಸಂಸ್ಥೆ ಆರ್ ಎಸ್ಎಸ್ ದೇಶದ ಜನರು ಆರ್ ಎಸ್ಎಸ್ ಒಪ್ಪಿದ್ದಾರೆ. ರಾಷ್ಟ್ರೀಯತೆ ಬಗ್ಗೆ ಜಾಗೃತಿ ಉಂಟು ಮಾಡುವ ಆರ್ ಎಸ್ಎಸ್ ಬಗ್ಗೆ ಮಾತನಾಡಬಾರದಿತ್ತು. ಆರ್ ಎಸ್ಎಸ್ ನ ಸ್ವಯಂ ಸೇವಕನೇ ಈಗ ದೇಶದ ಪ್ರಧಾನಮಂತ್ರಿ ಆಗಿದ್ದಾರೆ. ದೇಶದ ಜನರು ಆರ್ ಎಸ್ಎಸ್ ನ ಮೋದಿಯನ್ನು ಒಪ್ಪಿದ್ದಾರೆ. ಹಿಂದೆ ನೆಹರೂ ಹಾಗೂ ಕಾಂಗ್ರೆಸ್ ನ ನಾಯಕರು ಆರ್ ಎಸ್ಎಸ್ ಬ್ಯಾನ್ ಮಾಡಲು ಹೊರಟಿದ್ದರು. ಅವರನ್ನೇ ನಾವು ಲೆಕ್ಕಕ್ಕಿಟ್ಟುಕೊಂಡಿಲ್ಲ. ಇನ್ನು ಮಲ್ಲಿಕಾರ್ಜುನ ಖರ್ಗೆಯಂತಹ ಹಿರಿಯ ರಾಜಕಾರಣಿ ಈ ರೀತಿ ಮಾತನಾಡಬಾರದಿತ್ತು. ಮುಸಲ್ಮಾನರನ್ನು ಸಂತೃಪ್ತಿಗೊಳಿಸಲು ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದಿದ್ದಾರೆ.
ವಕ್ಫ್ ಆಸ್ತಿ ವಿಚಾರದಲ್ಲಿ ಇದೇ ರೀತಿ ಮುಂದುವರೆದರೆ, ಮುಸಲ್ಮಾನರನ್ನು ಕೊಲ್ಲುವ ಸ್ಥಿತಿ ಬರುತ್ತದೆ ಎಂದಿದ್ದೆ. ಆದರೆ ನಾನು ಅವರನ್ನು ಕೊಲ್ಲಿ ಎಂದು ನಾನು ಹೇಳಿಲ್ಲ. ಅದನ್ನೇ ಇಟ್ಟುಕೊಂಡ ಪೊಲೀಸರು ಸುಮೋಟೋ ಕೇಸು ದಾಖಲಿಸಿದ್ದಾರೆ. ನನ್ನ ಹೇಳಿಕೆಯನ್ನು ಸರಿಯಾಗಿ ಅರ್ಥೈಸದೆ ಕೇಸು ದಾಖಲಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ನವರು ಮೆರವಣಿಗೆ ಬೇರೆ ನಡೆಸುತ್ತಾರೆ ಎಂದು ಟೀಕಿಸಿದರು.
ಬಿಜೆಪಿ ಬಗ್ಗೆ 40 % ಆರೋಪದ ಬಗ್ಗೆ ಲೋಕಾಯುಕ್ತ ವರದಿ ವಿಚಾರಕ್ಕೆ ಮಾತನಾಡಿ, ನನ್ ಬಗ್ಗೆಯೂ ಈ ಬಗ್ಗೆ ಆರೋಪ ಬಂದಿತ್ತು. ಆಗಲೇ ನಾನು ರಾಜಿನಾಮೆ ಕೊಟ್ಟಿದ್ದೆ. ನಾನು ಶುಭ್ರ ಎಂಬುದು ಸಾಬೀತಾಗಿದೆ. ನನ್ನ ಮೇಲೆ ಯಾವುದೇ ಆರೋಪಗಳಿಲ್ಲ. ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ. ನನ್ನ ವಿರುದ್ಧ ಪೋಕ್ಸೋ ಕೇಸು ಇಲ್ಲ. ಆಗ ಈ ಬಗ್ಗೆ ಕೆಂಪಣ್ಣ ಆರೋಪ ಮಾಡಿದ್ದರು. ಈಗ ಅವರಿಲ್ಲದಾಗ ಅವರ ಬಗ್ಗೆ ಮಾತನಾಡಲ್ಲ. ಆದರೆ ನನ್ನ ಬಗ್ಗೆ ಆರೋಪ ಮಾಡಿದವರು ಕ್ಷಮೆ ಕೋರಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.