ಕುಮಾರಸ್ವಾಮಿ ರೈತರ ಕ್ಷಮೆ ಕೇಳಲಿ: ಈಶ್ವರಪ್ಪ
Team Udayavani, May 28, 2018, 6:50 AM IST
ಶಿವಮೊಗ್ಗ: ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿ, ಇದೀಗ ಸಾಲಮನ್ನಾಕ್ಕೆ ಮೀನಮೇಷ ಎಣಿಸುತ್ತ ಸಮಯಾವಕಾಶ ಕೊಡಿ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ರೈತರ ಕ್ಷಮೆ ಕೇಳಬೇಕೆಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡುತ್ತವೆ. ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆಂದು ಪ್ರಣಾಳಿಕೆ ಮೂಲಕ ಹೇಳಲಾಗುತ್ತದೆ. ಆದರೆ, ಕುಮಾರಸ್ವಾಮಿಯವರು ಚುನಾವಣಾ ಪ್ರಣಾಳಿಕೆಗೆ ಬೆಲೆ ಇಲ್ಲದಂತೆ ಮಾಡಿ, ಅಪಮಾನ ಮಾಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರೈತರ ಸಂಪೂರ್ಣ ಸಾಲಮನ್ನಾ ಮಾಡುತ್ತೇನೆಂದು ಹೇಳುತ್ತಿದ್ದ ಕುಮಾರಸ್ವಾಮಿ, ಇದೀಗ ನಮ್ಮ ಪಕ್ಷಕ್ಕೆ ಬಹುಮತ ಬಂದಿಲ್ಲ. ಮೈತ್ರಿ ಸರ್ಕಾರವಾದ್ದರಿಂದ ಸಾಲಮನ್ನಾ ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಹೇಳಿಕೆಯನ್ನು ರಾಜ್ಯದ ರೈತರು ಕ್ಷಮಿಸುವುದಿಲ್ಲ. ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.