ಕುವೆಂಪು ವಿವಿ 33ನೇ ವಾರ್ಷಿಕ ಘಟಿಕೋತ್ಸವ: ಸದಾನಂದ ಶೆಟ್ಟಿ ಸೇರಿ ಮೂವರಿಗೆ ಗೌರವ ಡಾಕ್ಟರೇಟ್
Team Udayavani, Jul 20, 2023, 12:25 PM IST
ಶಿವಮೊಗ್ಗ: ಕುವೆಂಪು ವಿಶ್ವ ವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮವು ಶನಿವಾರ ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ
ಗೌರವ ಡಾಕ್ಟರೇಟ್ ಪುರಸ್ಕೃತರು
ಸದಾನಂದ ಶೆಟ್ಟಿ (ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರ)
ಮೂಲತಃ ಉಡುಪಿ ಮೂಲದ ಸದಾನಂದ ಶೆಟ್ಟಿ, ಶಿಕ್ಷಣ ತಜ್ಞರು ಮತ್ತು ಕ್ರೀಡಾ ಆಡಳಿತಗಾರರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಮಂಗಳೂರು ವಿದ್ಯಾಲಯಕ್ಕೆ ಸಂಯೋಜಿಯವಾಗಿರುವ ಶ್ರಿದೇವಿ ಶಿಕ್ಷಣ ಟ್ರಸ್ಟ್ ಸ್ಥಾಪಕರು. ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ.
ಪಂಡಿತ್ ರಾಜಗುರು ಗುರುಸ್ವಾಮಿ ಕಲಿಕೇರಿ (ಸಾಹಿತ್ಯ ಮತ್ತು ಸಂಗೀತ ಕ್ಷೇತ್ರ)
ಮೂಲತಃ ಬಿಜಾಪುರ ಜಿಲ್ಲೆಯ ಕಲಿಕೇರಿ ಗ್ರಾಮದವರು. ಗಾನಭಾರತಿ, ಭಾವ ಭಗವದ್ಗೀತೆ ಮತ್ತಿತರ ಕವನ ಸಂಕಲನಗಳು, ಚಿನ್ಮಯ, ಮೌನ ತಪಸ್ವಿ ಕಾದಂಬರಿ, 21 ಷಟ್ಪದಿ ಕಾವ್ಯಗಳನ್ನು ಪ್ರಕಟಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಇವರು ಸುಮಾರು ಆರು ಸಾವಿರಕ್ಕೂ ಅಧಿಕ ಗೀತಗಾಯನ ಕಛೇರಿ ನಡೆಸಿಕೊಟ್ಟಿದ್ದಾರೆ. ಇವರ ಸಾಹಿತ್ಯ, ಮತ್ತು ಸಂಗೀತ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ.
ಎಂ. ಚಂದ್ರಪ್ಪ (ಗ್ರಾಮೀಣಾಭಿವೃದ್ಧಿ ಕ್ಷೇತ್ರ)
ಮೂಲತಃ ದಾವಣಗೆರೆ ಜಿಲ್ಲೆಯ ಇವರು, ರಾಜಕಾರಣಿ ಮತ್ತು ಹಲವು ಶಿಕ್ಷಣ ಸಂಸ್ಥೆಗಳ ಸ್ಥಾಪಕರು. ಚಿತ್ರದುರ್ಗ ಜಿಲ್ಲೆಯ ದೇವರಾಜ್ ಅರಸ್ ಶಿಕ್ಷಣ ಸಮೂಹದ ಸ್ಥಾಪಕರು, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಶಾಸಕಾಂಗ ಸಮಿತಿ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜನಪ್ರತಿನಿಧಿಯಾಗಿ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿರುತ್ತಾರೆ. ಇವರ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಕೆಲಸಗಳನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP ದೂರು ಬೆನ್ನಲ್ಲೇ ಗೆಹ್ಲೋಟ್ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್?
Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ
Koteshwara: ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಖಾದರ್, ಸೊರಕೆ ಭೇಟಿ
ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ
ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.