ಮುಳುಗಡೆ ಸಂತ್ರಸ್ತರಿಗೆ ಜಮೀನು ನೀಡಿ

ಸುಗ್ರೀವಾಜ್ಞೆ ತರಲು ಕೆಪಿಸಿಸಿ ವಕ್ತಾರ-ನ್ಯಾಯವಾದಿ ಕೆ. ದಿವಾಕರ್‌ ಸಲಹೆ

Team Udayavani, Apr 27, 2022, 2:51 PM IST

press

ಸಾಗರ: ಜಿಲ್ಲೆಯಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರಿಗೆ 13,067 ಎಕರೆ ಜಮೀನು ನೀಡಿದ್ದು ಈ ತನಕ ಅವರ ಹೆಸರಿಗೆ ಅದನ್ನು ಮಂಜೂರು ಮಾಡಿ ಕೊಡದೆ, ಸಂತ್ರಸ್ತರನ್ನು ಸರ್ಕಾರ ಸತಾಯಿಸುತ್ತಿದೆ. ಈ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾವನಾತ್ಮಕ ಹೇಳಿಕೆ ನೀಡುವುದರ ಬದಲು ಕೇಂದ್ರ ಸರ್ಕಾರದ ಮೂಲಕ ಸುಗ್ರೀವಾಜ್ಞೆ ಮಾಡಿಸಲು ರಾಜ್ಯ ಸರ್ಕಾರ ಒತ್ತಡ ಹೇರಬೇಕು ಎಂದು ಕೆಪಿಸಿಸಿ ವಕ್ತಾರ ಹಾಗೂ ನ್ಯಾಯವಾದಿ ಕೆ. ದಿವಾಕರ್‌ ಸಲಹೆ ನೀಡಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡೆನೂರು, ಲಿಂಗನಮಕ್ಕಿ ಸೇರಿದಂತೆ 1959ರಿಂದ 1967ರವರೆಗೆ ನಾಡಿಗೆ ಬೆಳಕು ನೀಡುತ್ತೀರಿ ಎಂದು ಬಿಂಬಿಸಿದಂತಹ ಸಾವಿರಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಲಾಗಿದೆ. ಆದರೆ ಜಮೀನಿನ ಜೊತೆ ತಮ್ಮ ಸರ್ವಸ್ವವನ್ನೂ ಕಳೆದುಕೊಂಡು ಕಳೆದ ಏಳು ದಶಕಗಳಿಂದ ಬೇರೆಬೇರೆ ಪ್ರದೇಶದಲ್ಲಿ ವಾಸ ಮಾಡುತ್ತಿರುವ ಜನರ ಪರವಾಗಿ ಯಾವುದೇ ಸರ್ಕಾರಗಳು ಧ್ವನಿ ಎತ್ತದೆ ಇರುವುದು ದುರದೃಷ್ಟಕರ ಸಂಗತಿ ಎಂದು ಹೇಳಿದರು.

ಅರಣ್ಯ ಭೂಮಿಯನ್ನು ಕಂದಾಯ ಭೂಮಿ ವ್ಯಾಪ್ತಿಗೆ ತರುವ ಕೆಲಸವನ್ನು 1980ರಿಂದ 2017ರ ತನಕ ಯಾರೂ ಮಾಡಿಲ್ಲ. ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಸಣ್ಣ ತಿದ್ದುಪಡಿ ಮಾಡಿದರೆ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡಲು ಸಾಧ್ಯವಿದೆ. ಕಾಗೋಡು ತಿಮ್ಮಪ್ಪ ಅವರು ಕಂದಾಯ ಸಚಿವರಾಗಿದ್ದಾಗ ಮದನ್‌ ಗೋಪಾಲ್‌ ನೇತೃತ್ವದಲ್ಲಿ ಸಮಿತಿ ನಡೆಸಿ ಸರ್ವೇ ಕಾರ್ಯ ನಡೆದಿತ್ತು. ನಂತರ ಅದು ನನೆಗುದಿಗೆ ಬಿದ್ದಿದೆ. 2017ರ ಫೆ.23ರಲ್ಲಿ ಕಾಗೋಡು ತಿಮ್ಮಪ್ಪ ಅವರ ಸೂಚನೆ ಮೇರೆಗೆ 9,934 ಎಕರೆ ಪ್ರದೇಶವನ್ನು ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ ಡಿನೋಟಿಫೈ ಮಾಡಲಾಗಿದೆ. ಆದರೆ ಅದನ್ನು ಕೇಂದ್ರಕ್ಕೆ ಕಳಿಸಿ ಕಾನೂನು ತಿದ್ದುಪಡಿ ಮಾಡುವ ಕೆಲಸ ಮಾಡಲಿಲ್ಲ. ನಂತರ ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಶಿವಕುಮಾರ್‌ ಎಂಬ ಅಧಿಕಾರಿ ನೇತೃತ್ವದಲ್ಲಿ ಸರ್ವೇ ಪ್ರಯತ್ನ ನಡೆಸಲಾಗಿತ್ತು. ಅದು ಅಂತಿಮ ಹಂತ ಕಂಡಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಹಿಜಾಬ್‌ ನಂತರ ನಡೆದ ಬೇರೆ ಬೇರೆ ಘಟನೆಗಳು ಕೋಮು ಸಾಮರಸ್ಯಕ್ಕೆ ಧಕ್ಕೆ ತರುತ್ತಿದೆ. ಬೆಲೆ ಏರಿಕೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಹುನ್ನಾರವಾಗಿಯೇ ಈ ಕೃತ್ಯಗಳು ನಡೆಯುತ್ತಿವೆ. ಇಂತಹ ಸಲ್ಲದ ವಿಚಾರಗಳನ್ನು ಪ್ರಸ್ತಾಪಿಸುವ ಚಟುವಟಿಕೆಗಳನ್ನು ಬಿಜೆಪಿ ನೇರವಾಗಿ ಮಾಡದೆ ಪಕ್ಷದ ಪರವಿರುವ ಸಂಘಟನೆಗಳಿಂದ ವ್ಯವಸ್ಥಿತವಾಗಿ ಮಾಡಿಸುತ್ತಿದೆ. ರಾಜ್ಯ ಸರ್ಕಾರ ಈ ಬಗ್ಗೆ ಸ್ಪಷ್ಟ ನಿಲುವು ವ್ಯಕ್ತಪಡಿಸುವ ಅಗತ್ಯವಿದೆ ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್‌ ಮಾತನಾಡಿ, ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಸಣ್ಣಪುಟ್ಟ ಸಮಾಜಗಳನ್ನು ಗುರುತಿಸಿ ಟಿಕೆಟ್‌ ನೀಡುವತ್ತ ಗಮನ ಹರಿಸಬೇಕು. ಜೊತೆಗೆ ಒಂದೇ ಕುಟುಂಬದವರಿಗೆ ಟಿಕೆಟ್‌ ನೀಡುವುದು ಸರಿಯಲ್ಲ. ತಂದೆ ನಂತರ ಮಕ್ಕಳಿಗೆ, ಅಣ್ಣನ ನಂತರ ತಮ್ಮನಿಗೆ ಟಿಕೆಟ್‌ ಕೊಡುವ ಪ್ರವೃತ್ತಿ ದೂರವಾಗಬೇಕು ಎಂದು ಒತ್ತಾಯಿಸಿದರು.

ಸಾಮಾಜಿಕ ಕಾರ್ಯಕರ್ತ ರಾಜು ಎಂ. ತಲ್ಲೂರು ಮಾತನಾಡಿ, ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಒಂದು ವರ್ಷದಲ್ಲಿ ಮೂರು ಬಾರಿ ಬೇರೆ ಬೇರೆ ಚುನಾವಣೆಯಲ್ಲಿ ಸೋಲು ಕಂಡಿರುವವರಿಗೆ ಕಾಂಗ್ರೆಸ್‌ ಯಾವುದೇ ಕಾರಣಕ್ಕೂ ಟಿಕೆಟ್‌ ನೀಡಬಾರದು. ಕಳೆದ ಚುನಾವಣೆಯಲ್ಲಿ ನಾನು ಕಾಂಗ್ರೆಸ್‌ನಿಂದ ನಿಂತು ಸೋಲು ಅನುಭವಿಸಿದ್ದೇನೆ. ಈ ಬಾರಿ ಪಕ್ಷ ನನ್ನನ್ನು ಗುರುತಿಸಿ ಕಾಂಗ್ರೆಸ್‌ ಪಕ್ಷದಿಂದ ಟಿಕೆಟ್‌ ನೀಡಬೇಕು ಎಂದು ಹೇಳಿದರು.

ದೇವರಾಣೆಯಾಗಿಯೂ ನಾನು ಯಾರಲ್ಲೂ ಚುನಾವಣೆಗೆ ಟಿಕೆಟ್‌ ಕೇಳಲ್ಲ. ಆದರೆ ಶಿವಮೊಗ್ಗ ಜಿಲ್ಲೆಯ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು “ಸರ್ವ’ ಅರ್ಹತೆಗಳು ನನಗಿವೆ ಎಂದು ಭಾವಿಸುತ್ತೇನೆ. ಕೆ.ದಿವಾಕರ್, ರಾಜ್ಯ ಕಾಂಗ್ರೆಸ್‌ ವಕ್ತಾರ

ಸೊರಬದಲ್ಲಿ ಹಾಲಿ, ಮಾಜಿ ಶಾಸಕರು ಕೊರೊನಾ ಕಾಲದಲ್ಲಿಯೂ ಕ್ಷೇತ್ರದಲ್ಲಿ ಕಾಣಿಸಲಿಲ್ಲ. ಬಗರ್‌ ಹುಕುಂ ವಿಚಾರ ಬಿಟ್ಟರೆ ಬೇರೆ ಪ್ರಸ್ತಾಪಗಳೇ ಅವರಿಂದ ನಡೆಯುತ್ತಿಲ್ಲ. ಸೋತರೂ ಇವತ್ತಿಗೂ ಜನರ ಪರ ಕೆಲಸ ಮಾಡುತ್ತಿರುವುದು ನಾನು. -ರಾಜು ತಲ್ಲೂರು, ಸೊರಬ ಕಾಂಗ್ರೆಸ್‌ ಪ್ರಮುಖ

ಕೇಸರಿ ಶಾಲು ಧರಿಸಿ ಗೂಂಡಾಗಿರಿ ಮಾಡುವ ಮೂಲಕ ಬಿಜೆಪಿ ಸನ್ಯಾಸಿಗಳ ವಸ್ತ್ರಕ್ಕೆ ಅವಮಾನ ಮಾಡಿದೆ. -ಪ್ರಫುಲ್ಲಾ ಮಧುಕರ್‌, ವಿಧಾನ ಪರಿಷತ್‌ ಮಾಜಿ ಸದಸ್ಯೆ

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.