ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಕೃಷಿಗೆ ಕಂಟಕ
Team Udayavani, Jul 17, 2020, 11:21 AM IST
ಸೊರಬ: ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಕಂಟಕವನ್ನುಂಟು ಮಾಡುತ್ತಿದೆ ಎಂದು ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ ಆರೋಪಿಸಿದರು.
ತಾಲೂಕಿನ ಕುಬಟೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಹಿತಕ್ಕೆ ಧಕ್ಕೆ ತರುವ ಕರಾಳ ಕಾಯ್ದೆಯಾಗಿದ್ದು, ಈಗಾಗಲೇ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಜ್ಯಪಾಲರಿಂದ ಅಂಕಿತ ಪಡೆಯಲಾಗಿದೆ. ಭೂ ಸುಧಾರಣೆ ಕಾಯ್ದೆ ಜಾರಿಯಾದ ದಿನ ರೈತರಿಗೆ ದುರಂತ ದಿನವಾಗಿದ್ದು, ಈ ನಿಟ್ಟಿನಲ್ಲಿ ಬಲವಾಗಿ ವಿರೋಧಿ ಸುತ್ತೇನೆ ಎಂದರು.
ಮೂಡಿ ಮತ್ತು ಮೂಗೂರು ಏತ ನೀರಾವರಿ ಯೋಜನೆಗಳಿಗೆ ಎಸ್. ಬಂಗಾರಪ್ಪ ಅವರ ಅವ ಧಿಯಲ್ಲಿಯೇ ರೂಪುರೇಷೆಗಳನ್ನು ತಯಾರಿಸಿ, ಅಂದೇ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ತಾವು ಶಾಸಕರಾದ ಅವ ಧಿಯಲ್ಲಿ ಮತ್ತು ಶಾಸಕರಾಗಿರದ ಸಂದರ್ಭದಲ್ಲಿಯೂ ತಂದೆಯವರ ಕನಸಿನ ಕೂಸಾದ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಪ್ರಯತ್ನ ಪಟ್ಟಿದ್ದೇನೆ. ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ ಬಜೆಟ್‌ನಲ್ಲಿ ಅನುದಾನ ಮೀಲಿಟಿತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಿಂದಿನ ಸರ್ಕಾರದಲ್ಲಿ ಮೀಸಲಿಟ್ಟ ಅನುದಾನವನ್ನು ಬಜೆಟ್‌ನಲ್ಲಿ ಮಂಡಿಸಿದ್ದಾರೆ. ಇದರಲ್ಲಿ ಕ್ಷೇತ್ರದ ಶಾಸಕರ ಕೊಡುಗೆ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕೋವಿಡ್ ಸಂಕಷ್ಟದಿಂದ ಜನತೆ ನಗರ ಪ್ರದೇಶಗಳನ್ನು ತೊರೆದು ಗ್ರಾಮೀಣ ಪ್ರದೇಶಗಳತ್ತ ಮುಖ ಮಾಡುತ್ತಿದ್ದಾರೆ. ಅವರನ್ನು ಗೌರವದಿಂದ ಕಾಣಬೇಕು. ಸರ್ಕಾರ ನಗರ ಪ್ರದೇಶದಲ್ಲಿ ಕೈಗೊಳ್ಳುವ ಕ್ರಮಗಳನ್ನು ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸಬೇಕು. ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗುತ್ತಿರುವ ಮಾಹಿತಿ ಇದ್ದು, ಕೋವಿಡ್ ಸೋಂಕು ಪರೀಕ್ಷಾ ಕೇಂದ್ರಗಳನ್ನು ಹೆಚ್ಚು ಪ್ರಾರಂಭಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ರಾಜಕಾರಣದ ಭವಿಷ್ಯವನ್ನು ಬದಲಾವಣೆ ಮಾಡಿದವರು ಎಸ್. ಬಂಗಾರಪ್ಪನವರು. ಡಿಕೆಶಿ ಅವರು ಸದಾ ಈ ಗೌರವವನ್ನಿಟ್ಟುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಅವರು ನಮ್ಮ ಕುಟುಂಬದ ಆಪ್ತರಲ್ಲೊಬ್ಬರು. ಡಿ.ಕೆ. ಶಿವಕುಮಾರ್ ಅವರು ಗೀತಾ ಶಿವರಾಜ್‌ಕುಮಾರ್ ಅವರ ಮನೆಗೆ ಭೇಟಿ ನೀಡಿದ್ದನ್ನು ಮಧು ಬಂಗಾರಪ್ಪ ಅವರನ್ನು ಕಾಂಗ್ರೆಸ್‌ಗೆ ಸೆಳೆಯಲು ಯತ್ನಿಸುತ್ತಿದ್ದಾರೆ ಎನ್ನುವ ವದಂತಿ ಹಬ್ಬಿದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಾನು ಈಗಲೂ ಜೆಡಿಎಸ್‌ನಲ್ಲಿಯೇ ಇದ್ದು, ಇನ್ ಆ್ಯಕ್ಟಿವ್ ಕಾರ್ಯಾಧ್ಯಕ್ಷನಾಗಿದ್ದೇನೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಪುನರುಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Viksit Bharat ‘ಯಂಗ್ ಲೀಡರ್ ಡೈಲಾಗ್’:ಉಡುಪಿಯ ಮನು ಶೆಟ್ಟಿ ಆಯ್ಕೆ
Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್ ಚೌಟ
ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಮಾಲೋಚನಾ ಸಭೆ
Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.