ಲಕ್ಷ್ಮೀನಾರಾಯಣ ದೇಗುಲ ಪುನರ್ ಪ್ರತಿಷ್ಠಾಪನೆ
Team Udayavani, Feb 8, 2019, 10:25 AM IST
ಹೊಸನಗರ: ತಾಲೂಕಿನ ನಿಟ್ಟೂರು ಗ್ರಾಪಂ ವ್ಯಾಪ್ತಿಯ ಮಂಜಗಳಲೆ ಗ್ರಾಮದ ಪುರಾಣ ಪ್ರಸಿದ್ಧ ಲಕ್ಷ್ಮೀನಾರಾಯಣ ದೇವಸ್ಥಾನದ ಪುನರ್ ಪ್ರತಿಷ್ಠಾನೆ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಗುರುವಾರ ಅದ್ಧೂರಿಯಿಂದ ನಡೆಯಿತು.
ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಕೃಪಾಶೀರ್ವಾದದೊಂದಿಗೆ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಭಟ್ ನೇತೃತ್ವದಲ್ಲಿ ಪುನರ್ ಪ್ರತಿಷ್ಠಾಪನೆ, ಲಕ್ಷ್ಮೀನಾರಾಯಣ ಹವನ, ಬ್ರಹ್ಮಕಲಶೋತ್ಸವ, ಪೂರ್ಣಾಹುತಿ, ಮಹಾಪೂಜೆಗಳು ನಡೆದವು.
ಮಾಜಿ ಸಚಿವ ಕಿಮ್ಮನೆ ಭೇಟಿ: ಹೊಸಮನೆ ದೇವಸ್ಥಾನಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಭೇಟಿ ನೀಡಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಸಹಕರಿಸಿದ ಮಾಜಿ ಸಚಿವರನ್ನು ಸನ್ಮಾನಿಸಲಾಯಿತು. ದೇಗುಲ ಸಮಿತಿಯ ಗೌರವ ಅಧ್ಯಕ್ಷ ಎಂ.ಎಸ್. ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು.
ಸಮಿತಿ ಅಧ್ಯಕ್ಷ ಎಸ್.ಎನ್. ರವೀಶ, ಕಾರ್ಯದರ್ಶಿ ಗಿರಿರಾಜ ಕಾಶಿ, ಪ್ರಮುಖರಾದ ರಾಮಚಂದ್ರ ಶಂಭು, ಚಂದ್ರಶೇಖರ, ರಾಘವೇಂದ್ರ ಆಚಾರ್, ಗೋಪಾಲ ಶೆಟ್ಟಿ, ಮೂಕಾಂಬಿಕಾ, ಕೊಲ್ಲೂರಪ್ಪ, ಶಿವರಾಮ ಶೆಟ್ಟಿ, ದೊಡ್ಮನೆ ಲಕ್ಷ್ಮೀನಾರಾಯಣ್, ಎ.ಒ.ರಾಮಚಂದ್ರ, ಮೋಹನ ಶೆಟ್ಟಿ, ಶಿವರಾಮ ಶೆಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.