ಕೋವಿಡ್ ಪ್ರಕರಣ ವೃದ್ಧಿಸುವ ಸಾಧ್ಯತೆ ಕಡಿಮೆ: ಹಾಲಪ್ಪ
Team Udayavani, Jul 26, 2020, 2:28 PM IST
ಸಾಗರ: ಕೋವಿಡ್ ಪ್ರಕರಣ ಹೆಚ್ಚುವ ಸಾಧ್ಯತೆ ಕಡಿಮೆ ಇದೆ. ಆದರೂ ನಮ್ಮ ಜಾಗ್ರತೆಯಲ್ಲಿ ನಾವಿರಬೇಕು. ಕೋವಿಡ್ ಸಂದರ್ಭದಲ್ಲಿ ವೈದ್ಯಕೀಯ ಸೇವೆ ಸಲ್ಲಿಸಲು ಹಣಕಾಸಿನ ಕೊರತೆ ಇಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳು ತಿಳಿಸಿರುವ ಹಿನ್ನೆಲೆಯಲ್ಲಿ ಗೊಂದಲದ ಅಗತ್ಯವಿಲ್ಲ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ತಿಳಿಸಿದರು.
ನಗರದ ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್-19 ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕಾಗಿ ರಚನೆಯಾಗಿರುವ ಟಾಸ್ಕ್ ಫೋರ್ಸ್‌ಗಳು ಸಾಗರದಲ್ಲಿಯೂ ಉತ್ತಮ ಕೆಲಸ ಮಾಡುತ್ತಿವೆ. ಹಾಗಾಗಿ ತಾಲೂಕಿನಲ್ಲಿ ಕೋವಿಡ್ ಪ್ರಕರಣ ಕಡಿಮೆ ಇದೆ ಎಂದರು.
ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕೋವಿಡ್ ತುರ್ತು ಚಿಕಿತ್ಸಾ ಘಟಕ ಸ್ಥಾಪನೆಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳಬೇಕು. ಆಸ್ಪತ್ರೆಯಲ್ಲಿ ಗೀಸರ್ ಸೇರಿದಂತೆ ರೋಗಿಗಳಿಗೆ ಬೇಕಾದ ಸೌಲಭ್ಯಗಳನ್ನು ತಕ್ಷಣದಿಂದ ಅಳವಡಿಸಲು ಕ್ರಮ ತೆಗೆದುಕೊಳ್ಳಬೇಕು. ಕಂಟೈನ್ಮೆಂಟ್ ಝೋನ್‌ಗಳಲ್ಲಿ ಇರುವವರ ಬೇಕು- ಬೇಡಗಳನ್ನು ಕಾಲ- ಕಾಲಕ್ಕೆ ಪರಿಶೀಲಿಸಿ ಅವರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಹಾಲಪ್ಪ ಸೂಚನೆ ನೀಡಿದರು.
ಸಾಗರ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ನಾಗರಾಜ್ ಎಲ್. ಮಾತನಾಡಿ, ಕಂಟೈನ್ಮೆಂಟ್ ಝೋನ್ ಗಳಲ್ಲಿರುವವರನ್ನು ಕಾಲ- ಕಾಲಕ್ಕೆ ಗಮನಿಸಲು ತಹಶೀಲ್ದಾರ್, ಪೌರಾಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲು ಸೂಚನೆ ನೀಡಲಾಗಿದೆ. ಇದರ ಜೊತೆಗೆ ಕೋವಿಡ್ ಹೆಲ್ತ್‌ಕೇರ್ ಸೆಂಟರ್ ಪ್ರಾರಂಭಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬಹುತೇಕ ಸೆಪ್ಟೆಂಬರ್, ಅಕ್ಟೋಬರ್ ತಿಂಗಳಿನಲ್ಲಿ ವೈರಸ್ ಪ್ರಮಾಣ ಕುಗ್ಗುವ ಸಾಧ್ಯತೆ ಇದ್ದು, ಅಲ್ಲಿಯವರೆಗೆ ಸೋಂಕು ಸಮೂಹಕ್ಕೆ ಹರಡದಂತೆ ಜಾಗ್ರತೆ ವಹಿಸಬೇಕು ಎಂದು ಹೇಳಿದರು.
ಜೂಜಾಟ ಅಡ್ಡೆಯಾಗಿದೆ: ಇದೇ ಸಂದರ್ಭದಲ್ಲಿ ಸಭೆಯಲ್ಲಿ ಹಾಜರಿದ್ದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಉಪವಿಭಾಗೀಯ ಆಸ್ಪತ್ರೆಯ ಒಂದು ಭಾಗದಲ್ಲಿ ಕೆಲವರು ಆಂಬ್ಯುಲೆನ್ಸ್‌ನಿಲ್ಲಿಸಿಕೊಂಡು ಮೊಬೈಲ್ ಜೂಜಾಟದಲ್ಲಿ ತೊಡಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಈ ಗುಂಪುಗಳ ನಡುವೆ ಮಾರಾಮಾರಿ ಸಹ ನಡೆದಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ, ಡಿವೈಎಸ್‌ಪಿ ವಿನಾಯಕ್ ಎಸ್. ಶೆಟ್ಟಿಗಾರ್, ಪೌರಾಯುಕ್ತ ಎಚ್.ಕೆ. ನಾಗಪ್ಪ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಪುಷ್ಪಾ ಎಂ. ಕಮ್ಮಾರ್, ಕ್ಷೇತ್ರ ಶಿಕ್ಷಣಾ ಧಿಕಾರಿ ಬಿಂಬ ಕೆ.ಆರ್., ಪ್ರಕಾಶ್ ಬೋಸ್ಲೆ, ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಸುನೀಲಕುಮಾರ್, ನಗರ ಠಾಣೆ ಸಬ್ ಇನ್ಸ್‌ಪೆಕ್ಟರ್ ತುಕಾರಾಮ್ ಸಾಗರಕರ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.