Lok Sabha Polls; ಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ..!
ರಸ್ತೆ ಸಮಸ್ಯೆಯಿಂದ ಇಲ್ಲಿನ ಯುವಕರಿಗೆ ಹೆಣ್ಣು ಕೂಡ ಸಿಗುತ್ತಿಲ್ಲ
Team Udayavani, Apr 17, 2024, 4:47 PM IST
ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಹೋಬಳಿಯ ಬಾಳೆಹಳ್ಳಿ ಗ್ರಾಮ, ಉಳುಮಡಿ ,ಸುರುಳಿಗದ್ದೆ, ಕಣಗುಲ್ ,ಈ ಗ್ರಾಮಗಳಿಗೆ ರಸ್ತೆ ಮಾರ್ಗ ಆಗುವರೆಗೂ ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಸುಮಾರು 40 ರಿಂದ 45 ಕುಟುಂಬಗಳು ವಾಸವಾಗಿರುವ ಈ ಗ್ರಾಮಗಳಲ್ಲಿ ಮನೆಗಳಿಗೆ ಹೋಗಲು ಸರಿಯಾದ ರಸ್ತೆ ಸಂಪರ್ಕವಿಲ್ಲ, ರಸ್ತೆ ಸರಿ ಇಲ್ಲದ ಕಾರಣ 20 ರಿಂದ 30 ಜನ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಕೂಡ ತೊಂದರೆಯಾಗುತ್ತಿದೆ ಇದೇ ರಸ್ತೆ ಸಮಸ್ಯೆಯಿಂದ ಇಲ್ಲಿನ ಯುವಕರಿಗೆ ಹೆಣ್ಣು ಕೂಡ ಸಿಗುತ್ತಿಲ್ಲ ಎನ್ನುವುದು ನೊಂದ ಯುವಕರ ದೂರು.
ಹಾಗೆ ಗ್ರಾಮಕ್ಕೆ ಕರೆಂಟಿನ ವ್ಯವಸ್ಥೆ ಇದ್ದರೂ ಕೂಡ ಸರಿಯಾದ ಟಿಸಿ ಇರದೆ ನೀರಿನ ಸಮಸ್ಯೆ ಕೂಡ ಎದುರಾಗಿದೆ. ಹಾಗೆ ಗ್ರಾಮದ ಹಳ್ಳಗಳಿಗೆ ಹೋಗಲು ಇರುವ ಕಲ್ಲು ಸಂಕಗಳಿಗೆ ಸರಿಯಾದ ಮಾರ್ಗಗಳು ಇಲ್ಲದೆ ಅವ್ಯವಸ್ಥೆಯ ಆಗರವಾಗಿದೆ ಕೂಡಲೇ ಇವೆಲ್ಲವನ್ನೂ ಸರಿಪಡಿಸಬೇಕು ಇಲ್ಲವಾದರೆ ನಾವು ಯಾವುದೇ ರೀತಿಯಿಂದಲೂ ಮತಗಳನ್ನು ಚಲಾಯಿಸುವುದಿಲ್ಲ ಈ ಇಡೀ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಮುಖೇನ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.