![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Apr 27, 2024, 11:14 AM IST
ಶಿವಮೊಗ್ಗ: ರಾಹುಲ್ ಗಾಂಧಿ ಅಮೇಥಿ ಜನರ ವಿಶ್ವಾಸ ಕಳೆದುಕೊಂಡು ವಯನಾಡಿನಲ್ಲಿ ಅಡಗಿ ಕುಳಿತಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿಗೆ ಯಾಕೆ ಇಂತಹ ಪರಿಸ್ಥಿತಿ ಬಂದಿದೆ. ಅಮೇಥಿ ಮತದಾರರು ಯಾಕೆ ರಾಹುಲ್ ಗಾಂಧಿ ಧಿಕ್ಕರಿಸಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ರಾಹುಲ್ ಗಾಂಧಿ ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಎರಡೂವರೆ ಮೂರು ಲಕ್ಷ ಅಂತರದಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ರಾಹುಲ್ ಗಾಂಧಿ ಭೇಟಿ ಬಳಿಕ ಮತ್ತೆ 50 ಸಾವಿರ ಲೀಡ್ ಹೆಚ್ಚಲಿದೆ. ಗ್ಯಾರಂಟಿ ಯೋಜನೆ ಮತದಾರರ ಮೇಲೆ ಪರಿಣಾಮ ಬೀರಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರದ ಅಮಲಿನಲ್ಲಿದೆ. ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಕಾಂಗ್ರೆಸ್ ಬೆಲೆ ತೆರಬೇಕಾಗುತ್ತದೆ. ಕಾಂಗ್ರೆಸ್ ಗೆ ಜನ ಬುದ್ದಿ ಕಲಿಸುತ್ತಾರೆ. ಮೊದಲ ಹಂತದ ವಾತಾವರಣ ಎರಡನೇ ಹಂತದಲ್ಲೂ ಕಾಣುತ್ತಿದೆ. ರಾಜ್ಯದಲ್ಲಿ ಹೊಸ ದಾಖಲೆ ನಿರ್ಮಾಣ ಮಾಡುತ್ತೇವೆ ಎಂದರು.
ನಿನ್ನೆ ನಡೆದ 14 ಕ್ಷೇತ್ರಗಳ ಚುನಾವಣೆ ನಿರೀಕ್ಷೆಗೆ ಮೀರಿ ಚೆನ್ನಾಗಿ ಆಗಿದೆ. ಮತದಾನಕ್ಕೆ ಉತ್ಸಾಹ ಇನ್ನು ಹೆಚ್ಚಾಗಬೇಕಿತ್ತು. ಬಿಸಿಲಿನಲ್ಲೂ ಮತದಾನ ಚೆನ್ನಾಗಿ ಆಗಿದೆ ಎಂದರು.
ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಓಲೈಕೆ, ಅವರ ಚಿಂತನೆ ಒಬಿಸಿ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ. ಮೋದಿ ಜನಪ್ರಿಯತೆ ದಿನೇ ದಿನೇ ಹೆಚ್ಚಾಗುತ್ತಿದೆ. ನಾಳೆ ದಾವಣಗೆರೆ ಹೊಸಪೇಟೆಯಲ್ಲಿ ಮೋದಿ ಪ್ರಚಾರ ನಡೆಸುತ್ತಾರೆ. ಕಾಂಗ್ರೆಸ್ ಪಕ್ಷದವರಿಗೆ ವಿಜಯೇಂದ್ರ ಅವರಿಗೆ ತಲೆಕೆಟ್ಟಿದೆ ಅನಿಸಬಹುದು ಆದರೆ ನಿನ್ನೆ ನಡೆದ ಮತದಾನದಲ್ಲಿ 14 ಸ್ಥಾನವನ್ನೂ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.