ಕಡಿಮೆ ಬಡ್ಡಿಗೆ ಸಾಲ ಸೌಲಭ್ಯ ಸ್ತುತ್ಯರ್ಹ


Team Udayavani, Jun 27, 2020, 10:02 AM IST

ಕಡಿಮೆ ಬಡ್ಡಿಗೆ ಸಾಲ ಸೌಲಭ್ಯ ಸ್ತುತ್ಯರ್ಹ

ಶಿವಮೊಗ್ಗ: ಆರ್ಯವೈಶ್ಯ ಸಮುದಾಯದ ಸರ್ವತೋಮುಖ ಅಭಿವೃದ್ಧಿ, ಸಮುದಾಯದವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸಲು ಹಾಗೂ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ನೆರವಾಗುವ ನಿಟ್ಟಿನಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಕಲ್ಪಿಸುತ್ತಿರುವ ನಿಗಮದ ಉದ್ದೇಶ ಸಕಾಲಿಕ ಹಾಗೂ ಅರ್ಥಪೂರ್ಣವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಶುಕ್ರವಾರ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಆರ್ಯವೈಶ್ಯ ಸಮುದಾಯದ ಅರ್ಹ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಶೈಕ್ಷಣಿಕವಾಗಿ ಮುಂದುವರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಾಲ ಮಂಜೂರಾತಿ ಪತ್ರ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಆರ್ಯವೈಶ್ಯ ಸಮುದಾಯದವರು ಇಂದು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅಗತ್ಯವಿರುವವರು ನಿಗಮದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದು ಸುಂದರ ಜೀವನ ರೂಪಿಸಿಕೊಳ್ಳಬೇಕು. ಶೈಕ್ಷಣಿಕವಾಗಿ ಮುಂದುವರೆಯುವ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ ಎಂದರು.

ಸರ್ಕಾರ ಹಲವು ಜನಪರ ಯೋಜನೆಗಳೊಂದಿಗೆ ಜಿಲ್ಲೆಯ ಸರ್ವಾಂಗೀಣ ವಿಕಾಸದ ಕಡೆಗೂ ದಾಪುಗಾಲಿಡುತ್ತಿದೆ. ಪ್ರಸ್ತುತ ಕೋಟ್ಯಂತರ ರೂ.ಗಳ ಹಲವು ಯೋಜನೆಗಳು ಕಾರ್ಯಾರಂಭಗೊಂಡಿವೆ. ವಿಶೇಷವಾಗಿ ವಿಮಾನ ನಿಲ್ದಾಣ, ಹೊಸ ರೈಲ್ವೆ ಸಂಪರ್ಕ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಸೇತುವೆಗಳು, ನೀರಾವರಿ ಯೋಜನೆಗಳು ಸೇರಿದಂತೆ ಅನೇಕ ಜನಪರ ಯೋಜನೆಗಳು ಪ್ರಗತಿಯಲ್ಲಿವೆ. ಕೆಲವೇ ವರ್ಷಗಳ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ ಎಂದು ಹೇಳಿದರು. ವಿಧಾನ ಪರಿಷತ್‌ ಸದಸ್ಯ ಆರ್‌.ಪ್ರಸನ್ನಕುಮಾರ್‌ ಮಾತನಾಡಿ, ಸಮುದಾಯದ ಉನ್ನತಿಗೆ ಸರ್ಕಾರ ಬಿಡುಗಡೆ ಮಾಡಿರುವ ಅನುದಾನದ ಮೊತ್ತವನ್ನು 50 ಕೋಟಿ ರೂ.ಗೆ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಬೇಕೆಂದು ಕೋರಿದರು.

ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಮಾತನಾಡಿ, ಈ ಸಮುದಾಯದಲ್ಲಿ ಎಲ್ಲರೂ ಧನಿಕರಿಲ್ಲ. ಸಾಮಾನ್ಯ ಜೀವನ ನಡೆಸುತ್ತಿರುವ ಆರ್ಯವೈಶ್ಯ ಸಮುದಾಯದ ಅಭ್ಯರ್ಥಿಗಳಿಗೆ ನಿಗಮದ ಯೋಜನೆಗಳು ಭರವಸೆಯ ಬೆಳಕಾಗಲಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್‌.ಅರುಣ್‌ ಮಾತನಾಡಿ, ಒಂದು ಕಾಲದಲ್ಲಿ ಸಮೃದ್ಧವಾಗಿದ್ದ ಸಮುದಾಯ ಇಂದು ನಿರೀಕ್ಷೆಯಂತಿಲ್ಲ. ಅನೇಕ ಕುಟುಂಬಗಳಲ್ಲಿ ಬಡತನ, ನಿರುದ್ಯೋಗವಿದೆ. ಸಮುದಾಯದಲ್ಲಿ ಇರುವ ಸಮಸ್ಯೆಗಳಿಗೆ ಪರಿಹಾರವಾಗಿ ರಚನಾತ್ಮಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದರು.ಈಗಾಗಲೇ ರಾಜ್ಯದ 20ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಅಗತ್ಯತೆಗಳು, ಅವರ ಬದುಕು, ವ್ಯವಹಾರ ಮುಂತಾದವುಗಳನ್ನು ಅರಿಯುವ ಪ್ರಯತ್ನ ಮಾಡಲಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದಿಂದ ಇನ್ನಷ್ಟು ಸಹಕಾರ ಪಡೆದು, ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್‌ ಸುವರ್ಣ ಶಂಕರ್‌, ಉಪಮೇಯರ್‌ ಸುರೇಖಾ ಮುರಳೀಧರ್‌, ಎಸ್ಪಿ ಎಂ.ಕೆ.ಶಾಂತರಾಜು, ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ, ತಾಪಂ ಅಧ್ಯಕ್ಷೆ ಗೀತಾ ಜಯಶೇಖರ್‌, ಚನ್ನಬಸಪ್ಪ, ದತ್ತಾತ್ರಿ, ವೆಂಕಟಸುಬ್ಬಯ್ಯ ಮುಂತಾದವರು ಉಪಸ್ಥಿತರಿದ್ದರು.

ಕೋವಿಡ್ ದಿಂದ ಬದುಕು ಆತಂಕಕ್ಕೆ ಒಳಗಾಗುತ್ತಿರುವ ಇಂದಿನ ಸಂದಿಗ್ಧ ಸಂದರ್ಭದಲ್ಲಿ ನಿಗಮದ ಯೋಜನೆಗಳು  ಜನರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿವೆ. ಮಾತ್ರವಲ್ಲ ಅವರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿವೆ. ನಿಗಮದ ವಿವಿಧ ಯೋಜನೆಗಳಡಿ ಫಲಾನುಭವಿಗಳು ಪಡೆದ ಸಾಲವನ್ನು ಮರುಪಾವತಿಸಿ ನಿಗಮದ ಉಳಿವಿಗೆ ಸಹಕರಿಸಬೇಕು. – ಬಿ.ವೈ.ರಾಘವೇಂದ್ರ, ಸಂಸದರ

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.