![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Nov 8, 2023, 2:08 PM IST
ಶಿವಮೊಗ್ಗ: ರೈತರಿಗೆ ನೋಟೀಸ್ ಕೊಟ್ಟಿದ್ದಾರೆ. ಈ ಬಗ್ಗೆ ಲೀಡ್ ಬ್ಯಾಂಕ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ.ರೈತರು ತೆಗೆದುಕೊಂಡಿದ್ದು 10 ಲಕ್ಷದಷ್ಟು ಸಾಲ, ಬಡ್ಡಿ ಸೇರಿ 1 ಕೋಟಿಯಷ್ಟು ಕಟ್ಟಬೇಕು ಅಂತಾ ನೋಟೀಸ್ ಕೊಟ್ಟಿದ್ದಾರೆ. ಒಂದೊಂದು ಬ್ಯಾಂಕಿನ ಸಾಲ ವ್ಯವಸ್ಥೆ ಒಂದೊಂದು ರೀತಿ ಇದೆ. ಯಾವುದು ಕಡಿಮೆ ಆಗುತ್ತದೋ ಆ ರೀತಿ ಮರುಪಾವತಿ ಮಾಡಲು ತಿಳಿಸಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದಲ್ಲಿ ಮಾತನಾಡಿದರ ಅವರು,ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವರ್ಗಾವಣೆ ಸರಕಾರದ ತೀರ್ಮಾನ.ಸರಕಾರದಲ್ಲಿ ವರ್ಗಾವಣೆ ಮಾಡಿದ್ದಾರೆ ನಾನು ಸರಕಾರದಲ್ಲಿ ಇದ್ದೇನೆ ಇಲ್ಲ ಅಂತಾ ಹೇಳಕ್ಕೆ ಆಗುತ್ತಾದ? ಅದೇನು ದೊಡ್ಡ ವಿಷಯ ಏನಲ್ಲ. ಅವರ ಮೇಲೆ ಹಗರಣಗಳ ಆರೋಪ ಬಂದಿತ್ತು.ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಕಿಯೋನಿಕ್ಸ್ ಹಗರಣ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ನನಗೆ ಮಾಹಿತಿ ಗೊತ್ತಿಲ್ಲ ಎಂದರು.
ಎಫ್ ಡಿಎ ಹಗರಣ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಕಾನೂನು ಗೆಲ್ಲಬೇಕು, ನ್ಯಾಯಾಲಯ ಗೆಲ್ಲಬೇಕು ಅಷ್ಟೇ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಅದೇ ನನ್ನ ಅಭಿಪ್ರಾಯವೆಂದರು.
ಶಾಸಕ ಬೇಳೂರು ಗೋಪಾಲಕೃಷ್ಣ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲ್ಲ, ಉಸ್ತುವಾರಿ ಸಚಿವರು ಯಾರು ಗೊತ್ತಿಲ್ಲ ಆರೋಪ ವಿಚಾರದ ಕುರಿತು ಮಾತನಾಡಿದ ಅವರು, ಅದಕ್ಕೆಲ್ಲಾ ನಾನು ಉತ್ತರ ಕೊಡಲ್ಲ ಎಂದರು.
ಶರಾವತಿ ಸಂತ್ರಸ್ಥರ ಸಮಸ್ಯೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಶರಾವತಿ ಸಂತ್ರಸ್ತರ ಸಮಸ್ಯೆ ಬಗ್ಗೆ ಪರಿಹರಿಸಲು ಪ್ರಯತ್ನ ನಡೆಸಿದ್ದೇನೆ ಎಂದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.