ಸಚಿವ ಮಹೇಶ್ ರಾಜೀನಾಮೆಗೂ ಬಿಜೆಪಿಗೂ ಸಂಬಂಧವಿಲ್ಲ: ಬಿಎಸ್ ವೈ
Team Udayavani, Oct 13, 2018, 9:49 AM IST
ಭದ್ರಾವತಿ/ಶಿವಮೊಗ್ಗ: ಸಚಿವ ಮಹೇಶ್ ರಾಜೀನಾಮೆ ನೀಡಿದ ವಿಚಾರಕ್ಕೂ, ಬಿಜೆಪಿಗೂ ಸಂಬಂಧವಿಲ್ಲ. ಆದರೆ, ಯಾವುದಾದರೂ ಒಂದು ಕಾರಣಕ್ಕೆ ಸರಕಾರ ಬಿದ್ದರೆ ಮುಂದೆ ನೋಡೋಣ ಎಂದು ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವ ಎನ್.ಮಹೇಶ್ ರಾಜೀನಾಮೆ ವೈಯಕ್ತಿಕವಾದದ್ದು. ಅವರ ರಾಜೀನಾಮೆಗೆ ಮುಖ್ಯ ಕಾರಣ ಏನು ಎಂಬುದು ತಮಗೆ ತಿಳಿದಿಲ್ಲ ಎಂದರು. ಇನ್ನು ಒಂದು ತಿಂಗಳಲ್ಲಿ ಸರಕಾರ ಬೀಳುತ್ತೆ ಎಂದು ಬಿಜೆಪಿಯ ಯಾವ ಮುಖಂಡರೂ ಹೇಳಬಾರದು. ನಾವು ಪ್ರತಿಪಕ್ಷ ಸ್ಥಾನದಲ್ಲಿದ್ದೇವೆ. ವಿರೋಧ ಪಕ್ಷದ ಕೆಲಸವೇನೋ ಅದನ್ನೇ ಮಾಡೋಣ. ಆದರೆ, ಯಾವುದಾದರೂ ಕಾರಣಕ್ಕೆ ಸರಕಾರ ಉರುಳಿದರೆ ಮುಂದೇನು ಮಾಡಬೇಕು ಎಂಬುದರ ಬಗ್ಗೆ ನೋಡಲಾಗುವುದು ಎಂದರು.
ಇದೇ ವೇಳೆ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ಸಮ್ಮಿಶ್ರ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಶಾಸಕರು ಉಸಿರುಗಟ್ಟಿದ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ. ವಿಧಾನಸೌಧ ಶಾಸಕರಿಲ್ಲದೆ ಭೂತ ಬಂಗಲೆಯಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು
ಕೆಪಿಎಸ್ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.