ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿ: ಡಿಸಿ ಸೂಚನೆ
Team Udayavani, Aug 17, 2017, 3:12 PM IST
ಶಿವಮೊಗ್ಗ: ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ವಿದ್ಯಾರ್ಥಿ ಹಾಸ್ಟೆಲ್ ನಿರ್ಮಾಣ ಹಾಗೂ ದುರಸ್ತಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಎಂ. ಲೋಕೇಶ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವಿವಿಧ ಕಾಮಗಾರಿಗಳ ಅನುಷ್ಠಾನ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಹಲವು ಹಾಸ್ಟೆಲ್‌ಗಳು ನಿರ್ಮಾಣಗೊಂಡ ಒಂದೆರಡು ವರ್ಷಗಳಲ್ಲಿ ಸೋರುತ್ತಿವೆ. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳದಿರುವುದು ಇದಕ್ಕೆ ಕಾರಣ. ಇದೇ ರೀತಿ ದುರಸ್ತಿಯಲ್ಲಿ ಸಹ ಗುಣಮಟ್ಟ ಕಾಪಾಡಬೇಕು ಎಂದು ಸೂಚನೆ ನೀಡಿದರು. ನಿರ್ಮಾಣ ಇಲಾಖೆ ಹಾಗೂ ಸಂಸ್ಥೆಗಳಾದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ನಿರ್ಮಿತಿ ಕೇಂದ್ರ, ಕೆಆರ್‌ಐಡಿಎಲ್ ಮತ್ತು ನಿರ್ಮಿತಿ ಕೇಂದ್ರಗಳು ಕೈಗೊಂಡಿರುವ ರಸ್ತೆ ನಿರ್ಮಾಣ, ಕಟ್ಟಡ ನಿರ್ಮಾಣ ಕಾಮಗಾರಿಗಳ ಸಮಗ್ರ ವಿವರಗಳನ್ನು ಸಲ್ಲಿಸಬೇಕು. ಮುಂದಿನ ವಾರ ಪ್ರಗತಿಯೊಂದು ಕಾಮಗಾರಿಗಳ ಪ್ರಗತಿ ಪರಿಶೀಲಿಸಲಾಗುವುದು ಎಂದು ಹೇಳಿದರು.
ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ವತಿಯಿಂದ ಕೈಗೊಂಡಿರುವ ರಸ್ತೆ ಕಾಮಗಾರಿಗಳ ಥರ್ಡ್ ಪಾರ್ಟಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಈ ಸಂದರ್ಭದಲ್ಲಿ ಸೂಚನೆ ನೀಡಿದರು.
ಎಸ್‌ಸಿಪಿ, ಟಿಎಸ್‌ಪಿ ಪ್ರಗತಿ ಪರಿಶೀಲನೆ: ಇದಕ್ಕೂ ಮೊದಲು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ಕುಮಾರ್, ಎಲ್ಲಾ ಇಲಾಖೆಗಳ ಎಸ್‌ಸಿಪಿ ಮತ್ತು ಟಿಎಸ್‌ಪಿ ಪ್ರಗತಿ ಪರಿಶೀಲನೆ ನಡೆಸಿದರು. ಪ್ರತಿಯೊಂದು ಇಲಾಖೆಯ ಯೋಜನೆಗಳಲ್ಲಿ ಶೇ.24ರಷ್ಟು ಅನುದಾನವನ್ನು ಪರಿಶಿಷ್ಟ
ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿರಿಸಲಾಗುತ್ತದೆ. ಈ ಅನುದಾನವನ್ನು ಎಲ್ಲಾ ಇಲಾಖೆಗಳು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಬೇಕು. ಕೆಲವು ಇಲಾಖೆಗಳು ಅನುದಾನವನ್ನು ನಿರ್ಮಾಣ ಏಜೆನ್ಸಿಗಳಾದ ಕೆಆರ್‌ಐಡಿಎಲ್, ನಿರ್ಮಿತಿ ಕೇಂದ್ರ, ಪಿಆರ್‌ಇಡಿ
ಗಳಿಗೆ ಬಿಡುಗಡೆ ಮಾಡಿದ್ದಾರೆ. ಈ ಇಲಾಖೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಫಲಾನುಭವಿಗಳ ಆಧಾರಿತ ಯೋಜನೆಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಡಿಸೆಂಬರ್ ಅಂತ್ಯದ ಒಳಗಾಗಿ ವಿವಿಧ ಯೋಜನೆಗಳ ಅಡಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಸೌಲಭ್ಯಗಳನ್ನು ವಿತರಣೆ ಮಾಡಬೇಕು. ನಿರ್ಮಾಣ ಕಾಮಗಾರಿಗಳನ್ನು ನವೆಂಬರ್ ಅಂತ್ಯದ ಒಳಗಾಗಿ ಆರಂಭಿಸಲು ಸಿದ್ಧತೆ ಪೂರ್ಣಗೊಳಿಸಬೇಕು. ನಿಗದಿತ ಅವಧಿಯ ಒಳಗಾಗಿ ಅನುದಾನ ಬಳಸಲು ಸಾಧ್ಯವಾಗದಿದ್ದರೆ ಆಯಾ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.