ಎನ್‌ಆರ್‌ಇಜಿ ಯೋಜನೆಯ ಸಮರ್ಪಕ ಬಳಕೆಯಿಂದ ಸುಂದರ ಗ್ರಾಮ; ಕಾಗೋಡು ಅನಿಸಿಕೆ
Team Udayavani, Jan 16, 2022, 2:53 PM IST
ಸಾಗರ: ಇಡೀ ವಿಶ್ವದಲ್ಲಿ ದುಡಿಯುವ ಹಕ್ಕು ನೀಡುವುದು ನೀಡಿರುವುದು ನಮ್ಮ ದೇಶದ ಉದ್ಯೋಗ ಖಾತ್ರಿ ಯೋಜನೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಸದುಪಯೋಗ ಪಡಿಸಿಕೊಂಡರೆ ಗ್ರಾಮವನ್ನು ಸುಂದರವಾಗಿ ಮಾಡಬಹುದು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ನಾಡಕಲಸಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಶನಿವಾರ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡವ ಶ್ರೀಮಂತ ಜಾತಿ ವರ್ಗಭೇದವಿಲ್ಲದೆ ಪ್ರತಿಯೊಬ್ಬರಿಗೂ 100 ದಿನ ಕೆಲಸ ಮಾಡುವ ಹಕ್ಕು ಕೊಡಲಾಗಿದೆ. ಕೆಲಸ ಕೇಳಿದ 15 ದಿನದಲ್ಲಿ ಕೆಲಸ ನೀಡದಿದ್ದರೆ ಪುಕ್ಕಟೆಯಾಗಿ ಸಂಬಳ ನೀಡಬೇಕಾಗುತ್ತದೆ. ಮನೆಯಲ್ಲಿ ಉಳಿದ ವಿದ್ಯಾವಂತರು ಕೂಡ ಈ ಕೆಲಸ ಪಾಲ್ಗೊಂಡು ವ್ಯವಸ್ಥೆಯ ನೆಲೆಗಟ್ಟಿನಲ್ಲಿ ಸೈನಿಕರಂತೆ ದುಡಿದರೆ ಯೋಜನೆಯ ಸದ್ಬಳಕೆ ಆದಂತಾಗುತ್ತದೆ ಎಂದರು.
ಸಹಕಾರ ಸಂಘಗಳು ಗ್ರಾಮೀಣ ಜನರಿಗೆ ಅನುಕೂಲವಾಗುವಂತೆ ಬದಲಾವಣೆಯ ಕಾಲದಲ್ಲಿ ಯಾಂತ್ರಿಕ ವ್ಯವಸ್ಥೆಗೆ ಹೊಂದಿಕೊಳ್ಳಲು ಅವಶ್ಯಕ ಉಪಕರಣಗಳನ್ನು ಕಡಿಮೆ ದರದಲ್ಲಿ ಬಾಡಿಗೆ ರೂಪದಲ್ಲಿ ಒದಗಿಸಬೇಕು. ಕೃಷಿ ಮಾಡುವ ಪದ್ಧತಿಯಲ್ಲಿ ಕೂಡ ಸಾಕಷ್ಟು ಬದಲಾವಣೆಗಳು ಆಗಿದೆ. ಅದಕ್ಕೆ ಸಮನಾದ ಯೋಜನೆ ರೂಪಿಸಬೇಕು ಎಂದರು.
ಇಲ್ಲಿನ ಕಟ್ಟಡ ಸುಂದರವಾಗಿ ನಿರ್ಮಾಣ ಮಾಡಲು ಶ್ರಮಿಸಿದ ಆಡಳಿತ ಮಂಡಳಿಗೆ ಕಾಗೋಡು ಅಭಿನಂದನೆ ಸಲ್ಲಿಸಿದರು. ಸಂಘದ ಅಧ್ಯಕ್ಷ ಕೆ.ಆರ್. ಶ್ರೀಧರ್ ಭಟ್ ಮಾತನಾಡಿದರು. ಉಪಾಧ್ಯಕ್ಷ ಎಲೆ ಮಂಜಪ್ಪ, ನಿರ್ದೇಶಕರಾದ ಕಲ್ಸೆ ಚಂದ್ರಪ್ಪ, ವೆಂಕಟರಾವ್, ಕಾರ್ಯದರ್ಶಿ ವೆಂಕಟರಮಣ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.