ಮಠ- ಮಂದಿರಗಳಿಗೆ ಕೆ.ಎಸ್. ಈಶ್ವರಪ್ಪ ಭೇಟಿ
Team Udayavani, Apr 15, 2018, 6:40 AM IST
ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಶನಿವಾರ ನಗರದ ವಿವಿಧ ಮಠಗಳಿಗೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು.
ಮೊದಲಿಗೆ ವೆಂಕಟೇಶ ನಗರದ ಬಸವಕೇಂದ್ರಕ್ಕೆ ಭೇಟಿ ನೀಡಿ, ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಬಳಿಕ, ಕಲ್ಲುಗಂಗೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ಸ್ವಾಮಿ ವಿನಯಾನಂದ ಸರಸ್ವತಿಯವರ ಆಶೀರ್ವಾದ ಪಡೆದರು. ಅಲ್ಲಿಂದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಶ್ರೀ ಪ್ರಸನ್ನನಾಥ ಸ್ವಾಮೀಜಿ ಆಶೀರ್ವಾದ ಪಡೆದರು. ನಂತರ, ಬೆಕ್ಕಿನಕಲ್ಮಠಕ್ಕೆ ಭೇಟಿ ನೀಡಿ, ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದು ಮಾತುಕತೆ ನಡೆಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ ಮತ್ತಿತರರು ಜತೆಗಿದ್ದರು.
ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿಯಲ್ಲಿನ ಸಣ್ಣಪುಟ್ಟ ಗೊಂದಲವನ್ನು ಪಕ್ಷದ ಚೌಕಟ್ಟಿನಲ್ಲಿ ಸರಿಪಡಿಸಿಕೊಳ್ಳಲಾಗುವುದು. ಆದರೆ, ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದರೆ ಬಾಂಬ್ ಸ್ಫೋಟಗೊಳ್ಳಲಿದೆ.
– ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.