ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಕ್ರಮ
•ಕೊಡುಗೈ ದಾನಿಗಳಿಂದ ಬರುವ ಅನುದಾನದಿಂದ ಆದ್ಯತೆಯನುಸಾರ ಶಾಲೆಗಳ ವಿಕಾಸಕ್ಕೆ ಒತ್ತು
Team Udayavani, Jun 18, 2019, 11:35 AM IST
ಶಿವಮೊಗ್ಗ: ಎಸ್‌ಡಿಎಂಸಿ ಸಭೆಯಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ, ಪಾಲಿಕೆ ಸದಸ್ಯರು ಭಾಗವಹಿಸಿದ್ದರು.
ಶಿವಮೊಗ್ಗ: ಮಹಾನಗರಪಾಲಿಕೆ ವ್ಯಾಪ್ತಿಗೊಳಪಡುವ ಅಂಗನವಾಡಿಯಿಂದ ಪ್ರೌಢಶಾಲೆಯವರೆಗಿನ ಎಲ್ಲಾ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದ ಯೋಜನೆಗಳು, ಮಹಾನಗರಪಾಲಿಕೆ, ದಾನಿಗಳು ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಇಂದು ಜಿಲ್ಲಾಡಳಿತ ಭವನದಲ್ಲಿ ನಗರ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ಮೇಲುಸ್ತವಾರಿ ಸಮಿತಿ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸರ್ಕಾರಿ ಶಾಲೆಗಳ ಸರ್ವಾಂಗೀಣ ವಿಕಾಸಕ್ಕಾಗಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಏರ್ಪಡಿಸಿದ್ದ ಚಿಂತನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಳೆದ ದಶಕಗಳಿಂದೀಚೆಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ನಿರೀಕ್ಷಿತ ಅನುದಾನ ಲಭ್ಯವಾಗುತ್ತಿಲ್ಲ. ಶಾಲೆಗಳ ಮಕ್ಕಳ ಸಂಖ್ಯೆಗನುಗುಣವಾಗಿ ಕಟ್ಟಡಗಳು, ಪೀಠೊಪಕರಣಗಳು, ಕುಡಿಯುವ ನೀರಿನ ಪೂರೈಕೆ ಇತ್ಯಾದಿ ಸಮಸ್ಯೆಗಳ ಕುರಿತು ಗಂಭೀರ ಸ್ವರೂಪದ ದೂರುಗಳು ಬರುತ್ತಿವೆ. ಶಾಲಾ ಕಟ್ಟಡಗಳ ದುರಸ್ತಿ, ನವೀಕರಣ, ಕುಡಿಯುವ ನೀರು, ಶೌಚಾಲಯ ಮುಂತಾದವುಗಳನ್ನು ಕೊಡುಗೈ ದಾನಿಗಳಿಂದ ದಾನ ಪಡೆದು, ಅದರಿಂದ ಬರುವ ಅನುದಾನದಿಂದ ಆದ್ಯತೆಯನುಸಾರ ಶಾಲೆಗಳ ವಿಕಾಸಕ್ಕೆ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎದರು.
ಜೂನ್ 21 ಅಥವಾ 24ರಂದು ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ನಗರದ ದಾನಿಗಳನ್ನು ಭೇಟಿ ಮಾಡಿ, ಸರ್ಕಾರಿ ಶಾಲೆಗಳ ವಿಕಾಸಕ್ಕೆ ನಿಧಿ ಸಂಗ್ರಹಿಸಲಾಗುವುದು. ನಗರದ ಬಹುತೇಕ ಎಲ್ಲ ಶಾಲೆಗಳಲ್ಲಿ ಒಂದಿಲ್ಲೊಂದು ಸಮಸ್ಯೆಗಳು ಇದ್ದೇ ಇವೆ. ಅವುಗಳ ಸ್ವರೂಪ ಚಿಕ್ಕದು ಅಥವಾ ದೊಡ್ಡದಾಗಿರಬಹುದಾಗಿದೆ. ಒಟ್ಟಾರೆ ಸಮಸ್ಯೆಯ ಪರಿಹಾರಕ್ಕೆ ಕ್ರಮ ಕೈಗೊಂಡು ಶಾಲೆಗಳ ಉನ್ನತೀಕರಣಗೊಳಿಸಲೇ ಬೇಕಾಗಿದೆ. ಎಲ್ಲಾ ಶಾಲೆಗಳ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಮುಖ್ಯಸ್ಥರು ಚರ್ಚಿಸಿ ಕ್ರಿಯಾ ಯೋಜನೆಯೊಂದನ್ನು ರೂಪಿಸಿ 2-3ದಿನಗಳೊಳಗಾಗಿ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸುವಂತೆ ಅವರು ಸೂಚಿಸಿದರು.
ದಾನಿಗಳಿಂದ ಸಂಗ್ರಹಿಸಿದ ಅನುದಾನವನ್ನು ಸದ್ಬಳಕೆ ಮಾಡಬೇಕಾಗಿರುವುದರಿಂದ ಹಾಗೂ ಗುಣಮಟ್ಟದ ಕೆಲಸ ಕಾರ್ಯಗಳು ಆಗುವ ನಿಟ್ಟಿನಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಮೇಲುಸ್ತುವಾರಿ ಸಮಿತಿ ಪದಾಧಿಕಾರಿಗಳು ಗಮನಹರಿಸಬೇಕು ಎಂದು ತಿಳಿಸಿದರು.
ನಗರದ ಶಾಲೆಗಳಲ್ಲಿ ಶಾಲಾ ಅವಧಿಯ ನಂತರ ಶಾಲಾ ಆವರಣ, ಕಟ್ಟಡವನ್ನು ಅನೈತಿಕ ಚಟುವಟಿಕೆಗಳಿಗಾಗಿ ಬಳಕೆ ಮಾಡುತ್ತಿರುವ ಬಗ್ಗೆಯೂ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಅದರ ಸುಧಾರಣೆಗಾಗಿ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.
ಮಹಾನಗರ ಪಾಲಿಕೆ ಉಪಮೇಯರ್ ಚನ್ನಬಸಪ್ಪ ಮಾತನಾಡಿ, ಮಹಾನಗರಪಾಲಿಕೆ ವತಿಯಿಂದ ಅಭಿವೃದ್ಧಿ ಕುಂಠಿತ ಶಾಲೆಗಳ ಉನ್ನತೀಕರಣಕ್ಕಾಗಿ ಡಾ| ಶಿವಕುಮಾರ ಶ್ರೀಗಳ ಹೆಸರಿನಲ್ಲಿ ಯೋಜನೆಯೊಂದನ್ನು ರೂಪಿಸಲಾಗಿದೆ. ಈ ಯೋಜನೆಯಡಿ ನಗರಪಾಲಿಕೆ ವ್ಯಾಪ್ತಿಯ ಸರ್ಕಾರಿ ಶಾಲೆಗಳ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಲೆಗಳಿಂದ ಬರುವ ಕ್ರಿಯಾ ಯೋಜನೆ ಗಮನಿಸಿ ಹಾಗೂ ದಾನಿಗಳಿಂದ ಸಂಗ್ರಹವಾಗುವ ನಿಧಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯಕ್ಕೆ ತಕ್ಕಂತೆ ಪಾಲಿಕೆಯಿಂದ ಶಾಲೆಗಳ ಅಗತ್ಯತೆಗಳನ್ನು ಪೂರೈಸಲು ಅಗತ್ಯ ಅನುದಾನವನ್ನು ಪಾಲಿಕೆ ವತಿಯಿಂದ ಭರಿಸಲಾಗುವುದು ಎಂದವರು ತಿಳಿಸಿದರು.
ಮಹಾನಗರಪಾಲಿಕೆ ವಿಪಕ್ಷ ನಾಯಕ ರಮೇಶ್ ಮಾತನಾಡಿ, ನಗರಪಾಲಿಕೆ ವತಿಯಿಂದ ಸಂಗ್ರಹಿಸಲಾಗುವ ಶಿಕ್ಷಣ ನಿಧಿಯನ್ನು ನಗರ ಪ್ರದೇಶದ ಸರ್ಕಾರಿ ಶಾಲೆಗಳ ವಿಕಾಸಕ್ಕಾಗಿಯೇ ವ್ಯಯ ಮಾಡುವಂತೆ ತಿಳಿಸಿದ ಅವರು ಶಿಕ್ಷಣ ರಾಷ್ಟ್ರೀಕರಣಗೊಳಿಸಿದಲ್ಲಿ ಶಾಲೆಗಳ ವಿಕಾಸ ಸಾಧ್ಯವಾಗಲಿದೆ ಎಂದವರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ನಗರದ ಶಾಲೆಗಳ ಆಡಳಿತ ಮಂಡಳಿಗಳಿಂದ ಶಾಲೆಗಳಿಗೆ ಪಾಠೊಪಕರಣ, ಪೀಠೊಪಕರಣ, ಶಿಕ್ಷಕರು, ಶಾಲಾ ಕಾಂಪೌಂಡ್ ನಿರ್ಮಾಣ, ವಿದ್ಯುತ್, ಶೌಚಾಲಯ, ಕುಡಿಯುವ ನೀರು, ಕಟ್ಟಡ ದುರಸ್ತಿ ಮುಂತಾದವುಗಳ ಕುರಿತು ಅನೇಕ ಶಾಲೆಗಳಿಂದ ಬೇಡಿಕೆಗಳು ಬಂದವು.
ಮಹಾನಗರ ಪಾಲಿಕೆಯ ಮೇಯರ್ ಲತಾ ಗಣೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಸುಮಂಗಳಾ ಪಿ.ಕುಚಿನಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯ ಉಪನಿರ್ದೇಶಕ ಪಿ. ಶೇಷಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ವರಪ್ಪ, ಮಹಾನಗರಪಾಲಿಕೆ ಸದಸ್ಯರು, ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಶಾಲಾ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ
Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.