ಯಡಿಯೂರಪ್ಪ ಜನ್ಮ ದಿನದ ಪ್ರಯುಕ್ತ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ
Team Udayavani, Feb 20, 2020, 12:16 PM IST
ಶಿವಮೊಗ್ಗ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ 78ನೇ ಜನ್ಮ ದಿನದ ಪ್ರಯುಕ್ತ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಲಾಗಿದೆ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಫೆಬ್ರವರಿ 27 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಪ್ರೇರಣಾ ಎಜುಕೇಷನಲ್ ಮತ್ತು ಸೋಷಿಯಲ್ ಟ್ರಸ್ಟ್, ಸಹ್ಯಾದ್ರಿ ನಾರಾಯಣ ಹೃದಯಾಲಯದ ಆಶ್ರಯದಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಲಾಗಿದೆ ಎಂದರು.
ಕೇವಲ ಶಿವಮೊಗ್ಗ ಮಾತ್ರವಲ್ಲ ಬೇರೆ ಜಿಲ್ಲೆಯವರೂ ಈ ಆರೋಗ್ಯ ಶಿಬಿರದಲ್ಲಿ ಭಾಗಿಯಾಗಬಹುದು ಎಂದ ಅವರು 300ಕ್ಕೂ ಹೆಚ್ಚು ಬಾಪೂಜಿ ಸೇವಾಕೇಂದ್ರ ಹಾಗೂ ಶಿವಮೊಗ್ಗದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತವಾಗಿ ಒಂದು ಲಕ್ಷ ಜನರಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಿಸಲಾಗುವುದು. ಫೆಬ್ರವರಿ 27, 28, 29 ರಂದು ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಿಸಲಾಗುತ್ತದೆ ಎಂದರು.
ಸರ್ಕಾರಕ್ಕೆ ನೀಡಲಿರುವ ಶುಲ್ಕವನ್ನು ಪ್ರೇರಣಾ ಎಜುಕೇಷನ್ ಟ್ರಸ್ಟ್ ಭರಿಸಲಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನರಿಗೆ ಇದರಿಂದ ಅನುಕೂಲವಾಗಲಿದೆ. ಫೆಬ್ರವರಿ 24ರಂದು ಕಾರ್ಮಿಕ ಇಲಾಖೆಯಿಂದ ಉದ್ಯೋಗ ಮೇಳವನ್ನು ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ 9 ಗಂಟೆಗೆ ಉದ್ಯೋಗ ಮೇಳ ಆರಂಭಗೊಳ್ಳಲಿದೆ. ನೂರಾರು ಕಂಪನಿಗಳು ಇದರಲ್ಲಿ ಭಾಗಿಯಾಗಲಿದೆ ಎಂದ ಅವರು ಬಿ ಎಸ್ ಯಡಿಯೂರಪ್ಪ ಉದ್ಯೋಗ ಮೇಳ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಭಾಗಿಯಾಗಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.