ಅಧಿಕಾರಿಗಳಿಗೆ ಅಭಿವೃದ್ಧಿ ಪಾಠ ಮಾಡಿದ ಸಚಿವ ಆರಗ ಜ್ಞಾನೇಂದ್ರ

Team Udayavani, Aug 24, 2021, 7:59 PM IST

ergfg

ತೀರ್ಥಹಳ್ಳಿ: ತಾಲೂಕಿನಲ್ಲಿ ಕೋವಿಡ್ ಸೋಂಕು  ಹೆಚ್ಚಾಗಿದ್ದು ಈ ಬಗ್ಗೆ ಎಲ್ಲರೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ತಾಲೂಕಿನ ಅಭಿವೃದ್ಧಿಗೆ ಎಲ್ಲಾ ಅಧಿಕಾರಿಗಳ ಸೇವೆ ಅಪಾರ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿದಿದ್ದಾರೆ .

ಪಟ್ಟಣದ  ಶಾಂತವೇರಿ ಗೋಪಾಲ ಗೌಡ ರಂಗ ಮಂದಿರದಲ್ಲಿಂದು ನಡೆದ ಎಲ್ಲಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಎಲ್ಲಾ ಇಲಾಖೆಯ ಅಭಿವೃದ್ಧಿ ಕಡೆ ಗಮನಿಸಬೇಕೆಂದರು.

ತೀರ್ಥಹಳ್ಳಿಯನ್ನ ಸಮಸ್ಯೆ ಮುಕ್ತವನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ತಾಲ್ಲೂಕಿನಲ್ಲಿ  ಅಧಿಕಾರಿಗಳು,ಬೇರೆಡೆ ಹೋಲಿಸಿದರೆ ಒಳ್ಳೆಯ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನೂ ಹೆಚ್ಚಿನ ಕೆಲಸ ಮಾಡುವ ಹೊಣೆಗಾರಿಕೆ ನಿಮ್ಮ ಮೇಲಿದೆ. ನನ್ನ ಹೆಸರು ಉಳಿಸಬೇಕಿದೆ ಎಂದರು.

ಮಳೆಯಿಂದ ಬಿದ್ದ ಮನೆ, ಹಳ್ಳದ ದಂಡೆ, ಮಳೆ ಹಾನಿ ಬಗ್ಗೆ ತಕ್ಷಣ ಸ್ಥಳೀಯ ಆಡಳಿತ ಗಮನಿಸಿ ವರದಿ ನೀಡಬೇಕು.ತಡೆಗೋಡೆ, ಕಾಲುವೆ ರಿಪೇರಿ ಆಗಬೇಕು. ರೈತರು ಮೊದಲು ಹಳ್ಳ ದಂಡೆ ಸರಿ ಮಾಡಿಕೊಳ್ಳುತ್ತಿದ್ದರು. ಆದರೆ ಈಗ ಒತ್ತುವರಿ ಆಗಿದೆ. ಕೂಡಲೇ ಹಳ್ಳದ ಹೂಳು ಎತ್ತಬೇಕು ಎಂದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಹಳ್ಳಗಳಲ್ಲಿ ಮರಳು ತೆಗೆಯುವ ಮೂಲಕ ಹಳ್ಳ ಸರಿ ಆಗಬೇಕು. ಆಗ ಪ್ರವಾಹ ಆಗುವುದಿಲ್ಲ. ಸರಕಾರದಿಂದ ಒಳ್ಳೆಯ ಕಾನೂನು ಮಾಡಲಾಗಿದೆ. ಮಳೆ ಮುಗಿತಿದ್ದ ಹಾಗೆ ಅವಕಾಶ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಶಾಲೆಗಳು ಶುರುವಾಗಿವೆ. ಈಗ ಪ್ರತಿ ಶಾಲಾವಾರು ವರದಿ ರಿಪೋರ್ಟ್ ತರಬೇಕು. ಬಿದ್ದು ಹೋಗುವ ಶಾಲೆಗಳ ಬಳಿ ಹೋಗಿ ನೈಜ ವರದಿಯನ್ನು ನೀಡಬೇಕು ಎಂದು ಗೃಹ ಸಚಿವರು ಹೇಳಿದರು.

ಕೋವಿಡ್ ಸಂಖ್ಯೆಯಲ್ಲಿ ತೀರ್ಥಹಳ್ಳಿ ಜಿಲ್ಲೆಗೆ ಮೊದಲ ಸ್ಥಾನದಲ್ಲಿದೆ.   ಹೀಗಾಗಿ ತಕ್ಷಣ ಎಲ್ಲಾ ಕಾರ್ಯಪ್ರವೃತ್ತರಾಗಬೇಕು.ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ ತ್ವರಿತಗತಿಯಲ್ಲಿ ಕೆಲಸ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಚುರುಕಾಗಬೇಕು. ಮೊದಲು ಎಲ್ಲರನ್ನು ಟೆಸ್ಟ್ ಮಾಡಿಸಬೇಕು ಎಂದರು.

ಜನ ಮಾಸ್ಕ್ ಹಾಕುತ್ತಿಲ್ಲ, ಸಾಮಾಜಿಕ ಜಾಗೃತಿ ಮೂಡಿಸಬೇಕು. ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರದಂತೆ ನೋಡಬೇಕು ಎಂದರು.

ಈ ವೇಳೆ ಗ್ರಾಮ ಪಂಚಾಯತ್ ಪಿಡಿಒಗಳು ಮಾತನಾಡಿ, ಎಲ್ಲಾ ಕಡೆ ಲಸಿಕೆ ಕೊರತೆ ಇದೆ. ಜನರಿಗೆ ಸಮಾಧಾನ ಮಾಡುವುದೇ ದೊಡ್ಡ ಸಮಸ್ಯೆ ಆಗಿದೆ. ತಕ್ಷಣ ಲಸಿಕೆ ವ್ಯವಸ್ಥೆ ಆಗಬೇಕು ಎಂದರು. ಸಚಿವರು  ತಕ್ಷಣ ಮಾತನಾಡಿ ಸರಕಾರದ ಗಮನ ಸೆಳೆದು ಹೆಚ್ಚಿನ ಲಸಿಕೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.

94 ಸಿ ಅರ್ಜಿ ಹಾಕಲು ಇನ್ನು ಸಮಯ ಇದೆ. ಅಧಿಕಾರಿಗಳು ಜನತೆಗೆ ಮಾಹಿತಿ ನೀಡಬೇಕು. ಜನರಿಗೆ ಯಾವ ಸೌಲಭ್ಯ ಬಂದರೂ ತಲುಪಿಸಿ. ಈ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಎಚ್ಚರ ಎಂದರು.

ಜವಾಬ್ದಾರಿ ನೀಡಿರುವ ಗೃಹ ಇಲಾಖೆಯಲ್ಲಿ ಬದಲಾವಣೆಯ ಛಾಪು ಮೂಡಿಸಿ ಪೊಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿ ಮಾಡುವ ವಿಶ್ವಾಸ ಇದೆ. ಒಂದು ವ್ಯವಸ್ಥೆ ಸಕ್ರಿಯವಾಗಿ ಸಶಕ್ತವಾಗಿ ಕಾರ್ಯನಿರ್ವಹಿಸಲು ಅಧಿಕಾರಿಗಳ ಮಹತ್ತರ ಜವಾಬ್ದಾರಿ ಇರುತ್ತದೆ. ಸಾರ್ವಜನಿಕರ ಸಮಸ್ಯೆಗಳಿಗೆ ಇಲಾಖೆಯ ಮಟ್ಟದಲ್ಲಿ ಪರಿಹರಿಸಿ ಬಗೆಹರಿಯದಿದ್ದರೆ ಅವರಿಗೆ ಅಗತ್ಯ ತಿಳುವಳಿಕೆ ಕಾನೂನಿನ ಅರಿವು  ಮಾಹಿತಿ ನೀಡಿ ಎಂದರು.

ತಾಲೂಕಿನಲ್ಲಿ  ಪ್ರಕೃತಿ ವಿಕೋಪದಿಂದ ಉಂಟಾದ ಕೃಷಿ ಭೂಮಿ ಜಮೀನುಗಳು, ,ಮನೆಗಳ ಹಾನಿ,ಸಂಪರ್ಕ ರಸ್ತೆ ಸೇತುವೆ ಕುರಿತಾಗ ಪ್ರತಿ ಗ್ರಾಮಪಂಚಾಯಿತಿ ಮಟ್ಟದಲ್ಲಿನ ಅಂಕಿ ಅಂಶ ಪಡೆದ ಸಚಿವರು, ತಕ್ಷಣ ಅಗತ್ಯ ಪರಿಹಾರ ಕ್ರಮಗಳನ್ನು  ಕೈಗೊಳ್ಳುವ  ನಿಟ್ಟಿನಲ್ಲಿ ಎಲ್ಲಾ ಸಂಬಂಧಪಟ್ಟ  ಆಯಾ ಅಧಿಕಾರಿಗಳಿಗೆ ಸೂಚಿಸಿದರು.,

ಅಲ್ಲದೆ ತಾಲ್ಲೂಕಿನಲ್ಲಿ ಕಟ್ಟಡ ಕಟ್ಟುವ ಬಡವರಿಗೆ ಸರ್ಕಾರದ ನೂತನ  ಯೋಜನೆಯ ಮರಳು ವಿತರಣೆ

ಬಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.  ನಾನು ಗೃಹ ಇಲಾಖೆಯಲ್ಲಿ ಹೊಸ ಬದಲಾವಣೆಯ ಛಾಪನ್ನು ಮೂಡಿಸಿ, ಪೊಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿ ರೂಪಿಸುವ ಹೊಣೆಯನ್ನು ಹೊತ್ತಿದ್ದೇನೆ. ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವ ಕೆಲಸ  ಮಾಡುತ್ತೇನೆ ನಾನು ಸರಳವಾಗಿ ಸದಾ ಕಾಲಕ್ಕೂ ಸಾರ್ವಜನಿಕರ ಜೊತೆ ಹೊಂದಿಕೊಂಡು ಇರುವವನು. ಜನ ನನ್ನ ಮೇಲೆ ನಂಬಿಕೆಯಿಟ್ಟು ನನ್ನ ಬಳಿ ಸಮಸ್ಯೆಗಳನ್ನು ಹೇಳಿಕೊಳ್ಳುವುದಕ್ಕೆ  ಬರುತ್ತಾರೆ.

ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತೇನೆ,ಈ ನಿಟ್ಟಿನಲ್ಲಿ ನಿಮ್ಮೆಲ್ಲರ ಸಹಕಾರ ಅಗತ್ಯ ಎಂದರು.

ಸಭೆಯಲ್ಲಿ ತಹಶೀಲ್ದಾರ್ ಶ್ರೀಪಾದ್,ತಾಲ್ಲೂಕು ಪಂಚಾಯಿತಿ ಸಿಇಒ ಆಶಾಲತಾ,ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು,ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.