![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 21, 2020, 11:49 AM IST
ಶಿವಮೊಗ್ಗ: ಕೃಷಿ ಸಚಿವ ಬಿ.ಸಿ.ಪಾಟೀಲ್ ಮತ್ತು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸ್ವಗ್ರಾಮ ಯಲವಾಳ ಗ್ರಾಮದ ಬಿ.ಸಿ.ಪಾಟೀಲ್ ತೋಟದಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಯೋಗ ಮಾಡುವ ಮೂಲಕ ಅಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್, ಯೋಗ ಎನ್ನುವುದು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿಯನ್ನೂ ನೀಡಬಲ್ಲದು. ಋಷಿಮುನಿಗಳು ಈ ಹಿಂದೆ ಆಚರಿಸಿ ಅನುಸರಿಸುತ್ತಿದ್ದ ಯೋಗವನ್ನು ಇಂದಿಗೂ ನಮ್ಮ ದೇಶದಲ್ಲಿ ಪಾರಂಪರಿಕವಾಗಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಯೋಗ ದಿನಾಚರಣೆಯಂದು ಮಾತ್ರ ಯೋಗ ಮಾಡದೇ ಪ್ರತಿನಿತ್ಯ ವ್ಯಾಯಾಮ ಯೋಗ ಮಾಡುವುದು ಒಳ್ಳೆಯದು. ಯೋಗ ಎಲ್ಲರ ದೈನಂದಿನ ಭಾಗವಾಗಬೇಕು ಎಂದು ಕರೆ ನೀಡಿದರು.
ಯೋಗಕ್ಕೆ ತನ್ನದೇ ಆದ ಇತಿಹಾಸದ ಜೊತೆಗೂ ವೈಜ್ಞಾನಿಕವಾಗಿಯೂ ಯೋಗ ಸಾಬೀತಾಗಿದೆ. ಯೋಗವನ್ನು ಗುರುಗಳಿಂದ ಯೋಗಶಾಲೆಯಲ್ಲಿ ಕಲಿಯಬಹುದು. ಅಲ್ಲದೇ ಕೈಬೆರಳಲ್ಲಿರುವ ಮೊಬೈಲ್‌ನಲ್ಲಿ ಯೋಗ ಕಲಿಸುವ ಅದೆಷ್ಟೋ ಯೋಗದ ವಿಡಿಯೋ ಚಾನೆಲ್‌ಗಳು ಆ್ಯಪ್‌ಗಳು ಸಹ ಲಭ್ಯ.ನಮ್ಮನಮ್ಮ ದೇಹಕ್ಕೆ ಅನುಕೂಲಕರವಾಗುವಂತೆ ಆದಷ್ಟು ಮಾರ್ಗದರ್ಶನ ಪಡೆದೇ ಯೋಗವನ್ನು ಅನುಸರಿಸುವುದು ಉತ್ತಮ ಎಂದು ಬಿ.ಸಿ.ಪಾಟೀಲ್ ಹೇಳಿದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
You seem to have an Ad Blocker on.
To continue reading, please turn it off or whitelist Udayavani.