ಸಚಿವ ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Team Udayavani, Sep 17, 2017, 11:58 AM IST
ಶಿವಮೊಗ್ಗ: ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಖಾತೆ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪಕ್ಷದ ಕಚೇರಿಯಿಂದ ಜಿಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಪಕ್ಷದ ಮುಖಂಡರು ಮಾತನಾಡಿ, ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಡಿವೈಎಸ್‌ಪಿ ಎಂ.ಕೆ. ಗಣಪತಿ ಅವರ ಆತ್ಮಹತ್ಯೆಯ ಹಿನ್ನೆಲೆಯಲ್ಲಿ ಆಗಿನ ಗೃಹ ಸಚಿವ ಕೆ.ಜೆ. ಜಾರ್ಜ್ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆಗ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಿದ ಪರಿಣಾಮ ಜಾರ್ಜ್ ಅವರು ರಾಜೀನಾಮೆ ನೀಡಿದ್ದರು ಎಂದು ಪ್ರತಿಭಟನಾಕಾರರು ಹೇಳಿದರು.
ಆದರೆ ಜಾರ್ಜ್ ರಾಜೀನಾಮೆ ನಂತರದ ನಾಟಕೀಯ ಬೆಳವಣಿಗೆಯಲ್ಲಿ ಸರ್ಕಾರ ತನಗೆ ಬೇಕಾದಂತೆ ಸಿಐಡಿ ತನಿಖೆ ನಡೆಸಿ ಜಾರ್ಜ್ ತಪ್ಪಿತಸ್ಥರಲ್ಲ ಎಂದು ವರದಿ ಪಡೆಯಿತು. ನಿರೀಕ್ಷೆಯಂತೆ ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡೆಯಿಂದ ರಾಜ್ಯದ ಜನತೆ ಮತ್ತು ಕುಟುಂಬ ವರ್ಗದವರು ಪ್ರಕರಣದಲ್ಲಿ ನ್ಯಾಯ ಸಿಗಲಿಲ್ಲ ಎಂದು ಬೇಸತ್ತಿದ್ದು, ಎಂ.ಕೆ. ಗಣಪತಿ ಕುಟುಂಬದವರು ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಆದೇಶ ನೀಡಿದೆ. ಆದ್ದರಿಂದ ಕೆ.ಜೆ. ಜಾರ್ಜ್ ಅವರು ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವುದರಿಂದ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು
ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ರುದ್ರೇಗೌಡ, ಆಯನೂರು ಮಂಜುನಾಥ್, ಡಿ.ಎಸ್. ಅರುಣ್, ದತ್ತಾತ್ರಿ, ಎಸ್. ಚನ್ನಬಸಪ್ಪ, ಜ್ಯೋತಿಪ್ರಕಾಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.