Sagara ಪತ್ರಕರ್ತರ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಅಸಮಾಧಾನ


Team Udayavani, Dec 1, 2023, 8:49 PM IST

Sagara ಪತ್ರಕರ್ತರ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಅಸಮಾಧಾನ

ಸಾಗರ: ಸ್ಥಳೀಯ ಶಾಸಕರು ತಾವು ನಡೆಸುತ್ತಿರುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾಣುತ್ತಿಲ್ಲ ಎಂಬ ಪತ್ರಕರ್ತರ ಕುತೂಹಲದ ಪ್ರಶ್ನೆಗೆ ಅಸಮಾಧಾನಗೊಂಡ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ “ನೀವು ತಿಪ್ಪರಲಾಗ ಹಾಕಿದರೂ ಈ ಪ್ರಶ್ನೆಗೆ ಉತ್ತರ ಕೊಡುವುದಿಲ್ಲ’ ಎಂದು ಪ್ರತಿಕ್ರಿಯಿಸಿದ ಹಾಗೂ ಪತ್ರಕರ್ತರನ್ನು ಉದ್ದೇಶಿಸಿ ತುತ್ಛವಾಗಿ ಮಾತನಾಡಿದ ವಾರ್ತಾ ಧಿಕಾರಿಯ ವರ್ತನೆಯನ್ನು ಸಮರ್ಥಿಸಿಕೊಂಡ ಘಟನೆ ಸಾಗರದಲ್ಲಿ ಶುಕ್ರವಾರ ನಡೆದಿದೆ.

ಶುಕ್ರವಾರ ತಾಲೂಕಿನ ಪ್ರವಾಸಿ ಮಂದಿರದಲ್ಲಿ ನಡೆದ ಬರ ನಿರ್ವಹಣೆ ಮತ್ತು ಕುಡಿಯುವ ನೀರು ಸಮಸ್ಯೆ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಸ್ಥಳೀಯ ಶಾಸಕರ ಗೈರುಹಾಜರಿಯನ್ನು ಗಮನಿಸಿದ ವರದಿಗಾರರು, ಮಧು ಅವರಲ್ಲಿ ಈ ಬಗ್ಗೆ ಪ್ರಶ್ನಿಸಿದ್ದಾರೆ. ಆಗ ಮಧು, ಇದಕ್ಕೆಲ್ಲಾ ನಾನು ಉತ್ತರ ಕೊಡುವುದಿಲ್ಲ. ನಿಮ್ಮ ಬಳಿ ಬೇರೆ ಪ್ರಶ್ನೆ ಇಲ್ಲವೇ ಎಂದು ಏರಿದ ಧ್ವನಿಯಲ್ಲಿ ಪ್ರಶ್ನಿಸಿ, ನೀವು ತಿಪ್ಪರಲಾಗ ಹಾಕಿದರೂ ಈ ಪ್ರಶ್ನೆಗೆ ಉತ್ತರ ಕೊಡುವುದಿಲ್ಲ ಎಂದು ಕೋಪ ವ್ಯಕ್ತಪಡಿಸಿದ್ದಾರೆ.

ಈ ನಡುವೆ ತಾಲೂಕಿನ ಪತ್ರಕರ್ತರಿಗೆ ಸಭೆಯ ಮಾಹಿತಿ ಕೊಡದ ವಿಚಾರದಲ್ಲಿ ಸ್ಥಳದಲ್ಲಿದ್ದ ವಾರ್ತಾ ಇಲಾಖೆಯ ವಾರ್ತಾ ಧಿಕಾರಿಯನ್ನು ಪ್ರಶ್ನಿಸಿದಾಗ ಅವರು ಪತ್ರಕರ್ತರ ಅ ಧಿಕೃತತೆಯನ್ನೇ ಪ್ರಶ್ನಿಸಿದ್ದಾರೆ. ಆಗ ಪತ್ರಕರ್ತರೊಬ್ಬರು ರಾಜ್ಯ ಸರ್ಕಾರದ ಮಾನ್ಯತೆ ಪಡೆದಿರುವ ಕೆಯುಡಬ್ಲ್ಯೂ ಜೆ ಸಂಸ್ಥೆಯ ಮೀಡಿಯಾ ಕಾರ್ಡ್‌ ತೋರಿಸಿದಾಗಲೂ ವಾರ್ತಾಧಿಕಾರಿ ಮಾರುತಿ ಅದನ್ನು  ಧಿಕ್ಕರಿಸಿ ಮಾತನಾಡಿದ್ದಾರೆ. ವಿಷಯವನ್ನು ಸಚಿವ ಮಧು ಅವರ ಗಮನಕ್ಕೆ ತಂದಾಗ ಅವರೂ ವಾರ್ತಾ ಧಿಕಾರಿಯನ್ನು ಸಮರ್ಥಿಸಿಕೊಂಡಂತಹ ಘಟನೆ ನಡೆದಿದೆ. ಈ ಘಟನೆಯನ್ನು ಸಾಗರದ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸಿದ್ದು, ಈ ಕುರಿತು ರಾಜ್ಯ ಮಟ್ಟದಲ್ಲಿ ಗಮನ ಸೆಳೆಯಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಲು ಶನಿವಾರ ತುರ್ತು ಸಭೆ ಕರೆದಿದೆ.

ಈ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ನಡುವಿನ ವೈಮನಸ್ಸು ದಿನದಿನಕ್ಕೆ ಏರುಮುಖವಾಗಿ ಸಾಗುತ್ತಿರುವಂತಿದೆ. ಶಾಸಕ ಗೋಪಾಲಕೃಷ್ಣ ಇತ್ತೀಚೆಗೆ ಹಲವಾರು ಬಾರಿ ಸಾರ್ವಜನಿಕವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯವೈಖರಿ ಖಂಡಿಸಿ ಮಾತನಾಡಿದ್ದಲ್ಲದೆ, ತಮಗಿರುವ ಅಸಮಾಧಾನವನ್ನು ಜನರೆದುರೇ ಬಹಿರಂಗಪಡಿಸಿದ್ದರು. ಹೀಗಾಗಿಯೇ ಸಾಗರ ತಾಲೂಕು ಕೇಂದ್ರದಲ್ಲಿ ನಡೆದ ಬರ ನಿರ್ವಹಣೆ ಮತ್ತು ಕುಡಿಯುವ ನೀರು ಸಮಸ್ಯೆ ಬಗ್ಗೆ ಕರೆಯಲಾಗಿದ್ದ ಅಧಿ ಕಾರಿಗಳ ಮಟ್ಟದ ಸಭೆಯಲ್ಲಿ ಶಾಸಕರ ಅನುಪಸ್ಥಿತಿ ಎದ್ದುಕಾಣುತ್ತಿತ್ತು.

ಟಾಪ್ ನ್ಯೂಸ್

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಡಿ. 4ರಂದು ಉಡುಪಿಯಲ್ಲಿ ಪ್ರತಿಭಟನೆ

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

Thiruvannamali

Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Nithin-gadkari

Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cyclone Fengal: Alert in Shimoga; Holiday declared for schools

Fengal Cyclone: ಶಿವಮೊಗ್ಗದಲ್ಲೂ ಎಲ್ಲೊ ಅಲರ್ಟ್;‌ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

araga

Yatnal ಪಕ್ಷದ ಬೇರು ಕಡಿಯುವ ಕೆಲಸ ಮಾಡುತ್ತಿದ್ದಾರೆ: ಆರಗ ಜ್ಞಾನೇಂದ್ರ ಕಿಡಿ

KDP ಸಭೆಯಲ್ಲಿ ದಿಢೀರ್ ಅಸ್ವಸ್ಥರಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ

KDP ಸಭೆಯಲ್ಲಿ ದಿಢೀರ್ ಅಸ್ವಸ್ಥರಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ

Shivamogga: ದುಷ್ಕರ್ಮಿಗಳಿಂದ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

Shivamogga: ದುಷ್ಕರ್ಮಿಗಳಿಂದ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

MUST WATCH

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

ಹೊಸ ಸೇರ್ಪಡೆ

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಡಿ. 4ರಂದು ಉಡುಪಿಯಲ್ಲಿ ಪ್ರತಿಭಟನೆ

accident

Shirva: ಬೈಕ್‌ಗೆ ಜೀಪು ಢಿಕ್ಕಿ; ಸವಾರನಿಗೆ ಗಾಯ

14

Punjalkatte: ಮಳೆಗೆ ಮನೆಯ ಗೋಡೆ ಕುಸಿತ

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

courts

Puttur: ರಸ್ತೆ ಬದಿಯಲ್ಲಿ ಶವ ಇರಿಸಿದ ಪ್ರಕರಣ; ಮೂವರಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.