ಅಡಿಕೆ ಆರೋಗ್ಯಕ್ಕೆ ಪೂರಕ ಎಂಬ ಸಂಶೋಧನೆ ಪ್ರಗತಿಯಲ್ಲಿದೆ: ಆರಗ ಜ್ಞಾನೇಂದ್ರ
Team Udayavani, Feb 9, 2021, 3:11 PM IST
ಶಿವಮೊಗ್ಗ: ಸುಪ್ರೀಂ ಕೋರ್ಟ್‍ನಲ್ಲಿ ಅಡಿಕೆ ಹಾನಿಕಾರಕ ಎಂಬ ಪ್ರಕರಣವಿದ್ದು, ಅಡಿಕೆಯು ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂಬುದನ್ನು ಸಂಶೋಧನೆಗಳಿಂದ ನಿರೂಪಿಸಲು ಕಾಲಾವಕಾಶದ ಅವಶ್ಯಕತೆ ಇದೆ. ಕೇಂದ್ರ ಸರ್ಕಾರದ ಮೂಲಕ ಸುಪ್ರೀಂ ಕೋರ್ಟ್‍ಗೆ ಸಂಶೋಧನೆ ನಡೆಯುತ್ತಿರುವ ಬಗ್ಗೆ ಅಫಿಡವೀಟ್ ಸಲ್ಲಿಸಲು ಒತ್ತಡ ಹೇರುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಜ್ಯ ಅಡಿಕೆ ಕಾರ್ಯಪಡೆ ಅಧ್ಯಕ್ಷ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಿಕೆ ಆರೋಗ್ಯಕ್ಕೆ ಪೂರಕ ಹಾಗೂ ಔಷಧೀಯ ಗುಣಗಳು ಸಹ ಇದೆ ಎಂಬುದನ್ನು ಸಮರ್ಥವಾಗಿ ವಿಷಯ ಮಂಡಿಸಲು ವಕೀಲರಿಗೆ ಕೋರಲಾಗುವುದು. ಪ್ರಸ್ತುತ ರಾಮಯ್ಯ ಮೆಡಿಕಲ್ ಸೈನ್ಸ್ ನಲ್ಲಿ ಅಡಿಕೆ ಆರೋಗ್ಯಕ್ಕೆ ಪೂರಕ ಎನ್ನುವ ಸಂಶೋಧನೆ ಪ್ರಗತಿಯಲ್ಲಿದೆ. ಆದ್ದರಿಂದ ಸುಪ್ರೀಂ ಕೋರ್ಟ್‍ನಲ್ಲಿರುವ ಕೇಸ್ ಮುಂದಕ್ಕೆ ಹಾಕಲು ಕ್ರಮ ಕೈಗೊಳ್ಳುವಂತೆ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಸುವರ್ಣಾವತಿ ಡ್ಯಾಂನಿಂದ ಬೇಸಿಗೆ ಬೆಳೆಗೆ ನೀರು ಹರಿಸಲು ನಿರ್ಧಾರ
ದೇಶದಲ್ಲಿ ರೈತರ ಬೆಳೆಗೆ ತಗುಲುವ ಖರ್ಚಿಗಿಂತ ಕಡಿಮೆ ದರಕ್ಕೆ ಮಾರಾಟ ಮಾಡಬಾರದು ಎನ್ನುವ ಕಾರಣಕ್ಕೆ ಅಡಿಕೆ ಆಮದು ಸುಂಕ ಪರಿಷ್ಕೃತ ಮಾಡಿ 350 ರೂ.ಕ್ಕಿಂತ ಹೆಚ್ಚು ನಿಗದಿ ಮಾಡಬೇಕು ಎಂಬುದನ್ನು ಸಭೆಯಲ್ಲಿ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರದ ಗಮನಕ್ಕೂ ತರಲಾಗುವುದು ಎಂದರು.
ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಡಿ ಅನಾನಸ್ ನಿಗದಿಪಡಿಸಲಾಗಿದೆ. ಇದೇ ಯೋಜನೆಯಡಿ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿ ಅಡಿಕೆ ಬೆಳೆ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಮಿತಿ ನಿರ್ಧರಿಸಿದೆ. ಅಡಿಕೆ ಸಂಶೋಧನೆಗೆ ಸಂಬಂಧಿಸಿ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದೆ ಎಂದು ಹೇಳಿದರು.
ಅಡಿಕೆ ಬೆಳೆಗಾರರ ಹಿತದೃಷ್ಠಿಯಿಂದ ರಾಜ್ಯ ಸರ್ಕಾರವು ರಾಜ್ಯ ಅಡಿಕೆ ಕಾರ್ಯಪಡೆ ರಚನೆ ಮಾಡಿದೆ. ಅಡಿಕೆ ಸಹಕಾರ ಸಂಸ್ಥೆಯ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಕೊವಿಡ್ ಕಾರಣದಿಂದ ಕಾರ್ಯಪಡೆಯ ಕಾರ್ಯ ನಿಧಾನಗತಿಯಲ್ಲಿ ಸಾಗಿತ್ತು. ಬೆಂಗಳೂರಿನಲ್ಲಿಯೂ ಎರಡು ಸಭೆ ನಡೆಸಲಾಗಿದೆ. 3.59 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಅಡಿಕೆ ಬೆಳೆಗೆ ಸಂಬಂಧಿಸಿ ತರಬೇತಿ ಕಾರ್ಯಕ್ರಮಗಳಿಗೆ ಸಹಕಾರ ನೀಡಲು ಕಾರ್ಯಪಡೆಯು ಉದ್ದೇಶಿಸಿದೆ. ಅಡಿಕೆ ಬೆಳೆ ಮೇಲೆ ಅನೇಕ ಪ್ರಯೋಗಗಳು ನಡೆಯುತ್ತಿವೆ. ಗುರುಮೂರ್ತಿ ಹೆಗಡೆ ಸೇರಿದಂತೆ ಅನೇಕರು ಅಡಿಕೆ ಮೇಲೆ ಪ್ರಯೋಗ ಮಾಡುವ ಜತೆಯಲ್ಲಿ ಆರೋಗ್ಯಕ್ಕೆ ಪೂರಕ ಮತ್ತು ಅಡಿಕೆ ಬೆಳೆ ಹಾಗೂ ಉಪಉತ್ಪನ್ನಗಳಿಂದ ಅನೇಕ ಉದ್ಯಮ ನಡೆಸಬಹುದು ಎಂಬುದನ್ನು ನಿರೂಪಿಸಿದ್ದಾರೆ ಎಂದರು.
ಇದಕ್ಕೂ ಮುನ್ನ ರಾಜ್ಯ ಅಡಿಕೆ ಕಾರ್ಯಪಡೆ ಸಭೆ ನಡೆಯಿತು. ಶಾಸಕ ಹರತಾಳು ಹಾಲಪ್ಪ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.