Shimoga ಡಿಸಿಸಿ ಬ್ಯಾಂಕಿನ ‌ಹಗರಣದಲ್ಲಿ ಸಂಸದ‌ ರಾಘವೇಂದ್ರ ಪಾತ್ರ ಇದೆ; ಶಾಸಕ ಗೋಪಾಲಕೃಷ್ಣ

ಲೋಕಸಭಾ ಚುನಾವಣೆಗೆ ನಾನು ಪ್ರಬಲ ಆಕಾಂಕ್ಷಿ

Team Udayavani, Nov 8, 2023, 11:34 AM IST

Shimoga ಡಿಸಿಸಿ ಬ್ಯಾಂಕಿನ ‌ಹಗರಣದಲ್ಲಿ ಸಂಸದ‌ ರಾಘವೇಂದ್ರ ಪಾತ್ರ ಇದೆ; ಶಾಸಕ ಗೋಪಾಲಕೃಷ್ಣ

ಶಿವಮೊಗ್ಗ: ಬಿಜೆಪಿಯ ನಾಯಕರು ಬರ ಅಧ್ಯಯನ ಮಾಡುತ್ತಿದ್ದಾರೆ. ರಾಜ್ಯದ ವಿಪಕ್ಷ ಮುಖಂಡರು ಬರ ವೀಕ್ಷಣೆಗೆ ಹೊರಟ್ಟಿದ್ದಾರೆ. ಆದರೆ ರಾಜಕೀಯ ಮಾಡುವುದು ಖಂಡನೆ. ಬರಕ್ಕೆ ಹಣ ಮುಖ್ಯಮಂತ್ರಿಗಳು ಪರಿಹಾರ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ ವಿಪಕ್ಷ ನಾಯಕನೇ ಇಲ್ಲ. ನಿಮ್ಮ ಕಾಲದಲ್ಲಿ ನೆರೆ ಬಂತು ಏನಾದರೂ ಪರಿಹಾರ ಕೊಟ್ರಾ? ಕೇವಲ ಸಮೀಕ್ಷೆ ಮಾಡಿಕೊಂಡು ಹೋದ್ರಿ ನಿಮ್ಮ ಪ್ರಧಾನಿ, ನಿಮ್ಮ ಸರಕಾರ ಏನಾದರೂ ಪರಿಹಾರ ಕೊಟ್ರಾ ವಿರೋಧ ಪಕ್ಷದ ನಾಯಕನನ್ನೇ ಆಯ್ಕೆ ಮಾಡಲು ಆಗಿಲ್ಲ ಬರ ಅಧ್ಯಯನ ಮಾಡ್ತೀವಿ ಅಂತೀರಲ್ಲ ನಿಮಗೆ ಮಾನ ಮರ್ಯಾದೆ ಇದೆಯಾ ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಮಾತನಾಡಿದ ಅವರು, ನಮ್ಮ ಸರಕಾರವನ್ನು ನಾನು‌ ಒತ್ತಾಯ ಮಾಡುತ್ತೇನೆ. ಜಿಲ್ಲಾ ಮಂತ್ರಿಗಳು ಜಿಲ್ಲೆಯಲ್ಲಿ ಪ್ರವಾಸ ಮಾಡಬೇಕು. ಬರದ ಬಗ್ಗೆ ಸಮೀಕ್ಷೆ ನಡೆಸಬೇಕು. ಬರ ಪರಿಹಾರ ಸಮರ್ಪಕವಾಗಿ ಕೊಡಲು ಶ್ರಮಿಸಬೇಕು. ಕುಮಾರಸ್ವಾಮಿ ಇವತ್ತು ರೆಸಾರ್ಟ್ ನಲ್ಲಿ ಶಾಸಕರನ್ನು ಕೂಡಿ ಹಾಕಿಕೊಂಡಿದ್ದಾರೆ. ನೀವು ಕೂಡಿ ಹಾಕಿಕೊಂಡರೂ‌ ಅವರು ಯಾರು ಇರಲ್ಲ. ಬಿಜೆಪಿ ಜೆಡಿಎಸ್ ಶಾಸಕರು ಕಾಂಗ್ರೆಸ್ ಗೆ ಬರುತ್ತಾರೆ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಜೆಡಿಎಸ್ ಜಂಟಿಯಾಗಿ ಕಾರ್ಯಾಚರಣೆ ಮಾಡುತ್ತಿದ್ದಾರೆ ಎಂದರು.

ಈಶ್ವರಪ್ಪ ಅವರಿಗೆ ನೆಲೆ ಇಲ್ಲ, ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಇವರಿಗೆ ಯಾವ ಯೋಗ್ಯತೆ ಇದೆ. ಈಶ್ವರಪ್ಪ, ನಳೀನ್ ಕುಮಾರ್ ಕಟೀಲ್ ಕಟ್ಟಿಕೊಂಡು ಹೋದ್ರೆ ರಾಜ್ಯದಲ್ಲಿ ಬಿಜೆಪಿ 65 ಸೀಟ್ ಬಂದಿದೆ. ಮುಂದೆ 42 ಬರುತ್ತದೆ. ಯಡಿಯೂರಪ್ಪ ಅವರಿಗೆ ಬದ್ದತೆ ಇದ್ದರೆ ಕೇಂದ್ರದಿಂದ ಪರಿಹಾರ ಕೊಡಿಸಿ. ಕೇಂದ್ರ ಸರಕಾರದ ಜೊತೆ ಮಾತನಾಡಿ ಪರಿಹಾರ ಕೊಡಿಸಿ ಎಂದರು.

ಪಿಎಸ್ ಐ ಹಗರಣದ ಕಿಂಗ್ ಪಿನ್ ವಿಜಯೇಂದ್ರ. ಆ ಸಮಯದಲ್ಲಿ ಅವರ ವಿರುದ್ದ ಏನು ಕ್ರಮ ಕೈಗೊಳ್ಳಲಿಲ್ಲ. ಈಗ ಎಫ್ ಡಿಎ, ಎಸ್ ಡಿಎ ಹಗರಣ ಮಾತನಾಡ್ತೀರಾ. ಮುಖ್ಯಮಂತ್ರಿ ಅವರನ್ನು ಪಿಎಸ್ ಐ ಹಗರಣ ತನಿಖೆ ಚುರುಕುಗೊಳಿಸುವಂತೆ ಒತ್ತಾಯ ಮಾಡಿದರು.

ಸಂಸದ ರಾಘವೇಂದ್ರ ಚುನಾವಣೆ ಸಮಯದಲ್ಲಿ ‌ಮಾತ್ರ ಓಡಾಡ್ತಾರೆ. ನಾನು ಅದು ತಂದೆ, ಇದು ತಂದೆ ಅಂತಾರೆ ಏರ್‌ಪೋರ್ಟ್ ತಂದೆ ಅಂತಾರೆ. ಏರ್ ಪೋರ್ಟ್ ತಂದಿದ್ದು ಯಡಿಯೂರಪ್ಪ ಅವರು. ಚುನಾವಣೆ ಬಂದಾಗ ಹಳ್ಳಿಗಳು ಕಾಣುತ್ತದೆ. ನಾನು ಬಸ್ ಸ್ಟ್ಯಾಂಡ್ ರಾಘು ಅಂತಿದೆ. ಈಗ ಅವನೇ ಏರ್ ಪೋರ್ಟ್ ರಾಘು ಅಂತಾ ಕರೀರಿ ಅಂತಾನಂತೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: FDA Exam: ಆರೋಪಿ ಆರ್. ಡಿ. ಪಾಟೀಲ್ ಜತೆ ಶಾಮೀಲು‌ ನಿಜವಾದರೆ ಕಠಿಣ ಕ್ರಮ: ಪ್ರಿಯಾಂಕ್ ಖರ್ಗೆ

ಶಿವಮೊಗ್ಗ ಡಿಸಿಸಿ ಬ್ಯಾಂಕಿನಲ್ಲಿ ‌ಹಗರಣ ನಡೆದಿದೆ. ಒಂದೊಂದು‌ ಹುದ್ದೆ ಕೊಡಲು 40 ಲಕ್ಷ ಲಂಚ ಪಡೆದಿದ್ದಾರೆ. ಲಂಚ ಹಣ ಪಡೆಯಲು ಉದ್ಯೋಗಿಗಳಿಗೆ ಬ್ಯಾಂಕ್ ನಲ್ಲೇ ಸಾಲ ಕೊಡಿಸಿದ್ದಾರೆ. ಈ ಹಗರಣದಲ್ಲಿ ಸಂಸದ‌ ರಾಘವೇಂದ್ರ ಪಾತ್ರ ಇದೆ. ಈಗ ನಮ್ಮದೇ ಸರಕಾರ ಇದೆ. ಈ ಬಗ್ಗೆ ತನಿಖೆ ಆಗಬೇಕೆಂದರು.

ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ವರ್ಗಾವಣೆ ಹಾಗೂ ಕಿಯೋನಿಕ್ಸ್ ಹಗರಣ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಷಡಾಕ್ಷರಿ ವರ್ಗಾವಣೆ ವಿಚಾರ ಏನು ದೊಡ್ಡ ವಿಚಾರವಲ್ಲ. ಆತ ಸಾಕಷ್ಟು ಅಕ್ರಮ ಆಸ್ತಿ ಸಂಪಾದಿಸಿದ್ದಾನೆ ಆತನ ವಿರುದ್ದ ತನಿಖೆಯಾಗಬೇಕು ಯಾರು ಯಾರದ್ದೋ ತನಿಖೆ ಮಾಡುತ್ತಾರೆ ಈತನ ವಿರುದ್ದವು ತನಿಖೆ ನಡೆಸಲಿ. ಕಿಯೋನಿಕ್ಸ್ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆ ತಪ್ಪು ಮಾಡಿದ್ರೆ ತನಿಖೆ ಮಾಡಲಿ ಎಂದರು.

ಲೋಕಸಭೆ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,ಲೋಕಸಭಾ ಚುನಾವಣೆಗೆ ನಾನು ಪ್ರಬಲ ಆಕಾಂಕ್ಷಿ. ನಾನು ಈ ಬಾರಿ ಲೋಕಸಭೆಗೆ ಸ್ಪರ್ಧಿಸುವ ಆಸೆ ಹೊಂದಿದ್ದೇನೆ. ನಾನು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಹೇಳಿದ್ದೇನೆ. ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಎದುರಿಸಲು ನಾನೇ ಪ್ರಬಲ ಸ್ಪರ್ಧಿ ಎಂದರು.

ಡಿಕೆಶಿ ಮುಖ್ಯಮಂತ್ರಿ ಆಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,ಈ ಬಗ್ಗೆ ನನಗೆ ಗೊತ್ತಿಲ್ಲ. ನಾನು ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಬಗ್ಗೆ ಮಾತನಾಡಲ್ಲ. ನಾನು ಹೇಳೋದು ಎಲ್ಲಾ ಶಾಸಕರಿಗು 20:20 ತಿಂಗಳು ಸಚಿವರನ್ನು ‌ಮಾಡಿ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡ 20:20 ತಿಂಗಳು ಎಲ್ಲರನ್ನು ಸಚಿವರನ್ನಾಗಿ ಮಾಡಿ ಅಭಿವೃದ್ಧಿ ಆಗಬೇಕು ಅಂದ್ರೆ‌ ಹೇಗೆ ಬೇಕಾದರೂ ಆಗುತ್ತದೆ ಎಂದರು.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಯಾರು ಅನ್ನೋದೆ ನನಗೆ ಗೊತ್ತಿಲ್ಲ. ನಾನು‌ ಕೇವಲ ಶಾಸಕ ಅಷ್ಟೇ. ಮೊದಲು ಮಧು ಬಂಗಾರಪ್ಪ ಉಸ್ತುವಾರಿ ಸಚಿವರಾಗಿದ್ದರಂತೆ.ಈಗ ಉಸ್ತುವಾರಿ ಸಚಿವರು ಯಾರು ಅಂತಾ ನನಗೆ ಗೊತ್ತಿಲ್ಲ ಇವತ್ತು ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕೆಡಿಪಿ ಸಭೆ ಇದೆಯಂತೆ ಕೆಡಿಪಿ ಸಭೆಗೆ ನನಗೆ ಆಹ್ವಾನವಿಲ್ಲ ಎಂದರು.

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.