ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಪರಿಹಾರ: ಹಾಲಪ್ಪ ವಿಶ್ವಾಸ
Team Udayavani, Nov 7, 2020, 8:07 PM IST
ಸಾಗರ: ಕಳೆದ ಐದು ದಶಕಗಳ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎನ್ನುವ ವಿಶ್ವಾಸ ಮೂಡಿದೆ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ತಿಳಿಸಿದರು.
ಬೆಂಗಳೂರಿನ ಕೃಷ್ಣಾದಲ್ಲಿ ಶುಕ್ರವಾರಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಸಂಸದರು ಮತ್ತು ಶಾಸಕರು, ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, ಹಿಂದೆ ಹಿರೇಭಾಸ್ಕರ ಮತ್ತು ಲಿಂಗನಮಕ್ಕಿ ಅಣೆಕಟ್ಟು ನಿರ್ಮಾಣ ಸಂದರ್ಭ ದಲ್ಲಿ ಸಾವಿರಾರು ಕುಟುಂಬ ಗಳು ನಿರಾಶ್ರಿತರಾಗಿ ಜಿಲ್ಲೆಯ ಬೇರೆ ಬೇರೆ ಕಡೆ ವಾಸ ಮಾಡುತ್ತಿದ್ದಾರೆ. ಕೆಲವರು ಅರಣ್ಯ, ಕಂದಾಯ ಭೂಮಿ, ಗೋಮಾಳ, ಗ್ರಾಮ ಠಾಣಾ ಹೀಗೆ ಬೇರೆಬೇರೆ ಕಡೆ ವಾಸವಾಗಿದ್ದಾರೆ. ಅವರಿಗೆ ಈ ತನಕ ಹಕ್ಕುಪತ್ರ ಸಹ ಸಿಕ್ಕಿಲ್ಲ ಎಂದರು.
ಈ ಸಮಸ್ಯೆಯನ್ನು ಬಗೆಹರಿಸಬೇಕು ಎನ್ನುವುದು ನನ್ನ ಜೀವನದ ಮಹತ್ವಾ ಕಾಂಕ್ಷೆಗಳಲ್ಲಿ ಒಂದಾಗಿದೆ. ಶಾಸನಸಭೆಯಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ಸಹ ಮಾಡಿದ್ದೇನೆ. ಇಂದಿಗೂ ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಕುಟುಂಬ ಹಕ್ಕುಪತ್ರಕ್ಕಾಗಿ ಸರ್ಕಾರದ ಕಡೆ ನೋಡುತ್ತಿದೆ. ಮುಖ್ಯಮಂತ್ರಿಗಳು ಈ ದಿನ ಸಭೆ ನಡೆಸಿ ಶರಾವತಿ ಮುಳುಗಡೆ ಸಂತ್ರಸ್ತರ ಬಗ್ಗೆ ಕಾಳಜಿ ವಹಿಸಿರುವುದು ಸ್ವಲ್ಪ ನೆಮ್ಮದಿ ತಂದಿದೆ ಎಂದು ತಿಳಿಸಿದರು.
ಸಮಸ್ಯೆಯ ಅರಿವಿರುವ ಸಂಸದ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ಸಿಎಂ ಅವರನ್ನು ಭೇಟಿ ಮಾಡಿ ಅವರಿಗೆ ಸಂತ್ರಸ್ತರ ಸಮಸ್ಯೆ ತಿಳಿಸಲಾಯಿತು. ಇದರ ಬಗ್ಗೆ ಮಾಹಿತಿ ಹೊಂದಿದ್ದ ಸಿಎಂ ಇದಕ್ಕಾಗಿ ಇಬ್ಬರು ಹಿರಿಯ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚನೆ ಮಾಡಿದ್ದಾರೆ. ಶೀಘ್ರದಲ್ಲಿ ಈ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಮಸ್ಯೆಗೆ ಶೀಘ್ರ ಪರಿಹಾರ ದೊರಕುವ ಎಲ್ಲ ಸಾಧ್ಯತೆ ಇದೆ ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.