ಪ್ಲಾಸ್ಲಿಕ್ ಮುಕ್ತ ಪರಿಸರದ ಜಾಗೃತಿಗಾಗಿ ಕೆರೆ ಹಬ್ಬ ನೆಪ: ಶಾಸಕ ಹಾಲಪ್ಪ
Team Udayavani, Mar 12, 2022, 4:01 PM IST
ಸಾಗರ: ಕೆರೆಹಬ್ಬ ಸಾಂಕೇತಿಕ ಮಾತ್ರ. ಕೆರೆಹಬ್ಬದ ಸಂದರ್ಭದಲ್ಲಿ ಜನರಲ್ಲಿ ಪರಿಸರ ಸ್ವಚ್ಛತೆ, ಪ್ಲಾಸ್ಲಿಕ್ ಮುಕ್ತ ಪರಿಸರ ಹಾಗೂ ಜಲಮೂಲ ಉಳಿಸುವ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು.
ಇಲ್ಲಿನ ಗಣಪತಿ ಕೆರೆ ಅಂಗಳದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೆರೆ ಸ್ವಚ್ಛತೆ ಕುರಿತ ಕಾರ್ಯಕ್ರಮದಲ್ಲಿ ತಾವೇ ಸ್ವತಃ ಪಾಲ್ಗೊಂಡು ಮಾತನಾಡಿದ ಅವರು, ಗಣಪತಿ ಕೆರೆ ನಗರದ ಜಲನಾಡಿಯಾಗಿದ್ದು, ಜಲಮೂಲ ಸಂರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು. ಒಂದು ಕಾಲದಲ್ಲಿ ಕೊಳಚೆ ನೀರು, ಪಾತಾಳಗಂಗೆ, ಹೂಳಿನಿಂದ ಮುಚ್ಚಿ ಹೋಗಿದ್ದ ಗಣಪತಿ ಕೆರೆ ಈಗ ಶುಭ್ರವಾಗಿ ನಳನಳಿಸುತ್ತಾ ಇದೆ. ಕಳೆದ ಎರಡು ವರ್ಷಗಳಿಂದ ಕೆರೆಹಬ್ಬ ಹೆಸರಿನಲ್ಲಿ ಗಣಪತಿ ಕೆರೆ ಸ್ವಚ್ಛತಾ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದ್ದು, ಕೆರೆಯಲ್ಲಿ ಈಗ ನೀರುನಾಯಿಗಳು ಸಹ ಕಾಣಿಸಿಕೊಂಡಿದೆ. ಇದರಿಂದಾಗಿ ಗಣಪತಿ ಕೆರೆ ಶುದ್ಧವಾಗಿದೆ ಎಂದು ಗೊತ್ತಾಗುತ್ತಿದೆ ಎಂದರು.
ಗಣಪತಿ ಕೆರೆ ಸುತ್ತಲೂ ವಾಕಿಂಗ್ ಟ್ರ್ಯಾಕ್ ನಿರ್ಮಿಸುವ ನಿಟ್ಟಿನಲ್ಲಿ ಕಾಮಗಾರಿ ನಡೆಯುತ್ತಿದೆ. ಕೆರೆಗೆ ಕೊಳಚೆ ನೀರು ಸೇರದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೆರೆಯೊಳಗಿನ ಹೂಳು ತೆಗೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಒಟ್ಟಾರೆ ಇತಿಹಾಸ ಪ್ರಸಿದ್ಧವಾದ ಗಣಪತಿ ಕೆರೆಯನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಕೆರೆ ಸ್ವಚ್ಛತಾ ಕಾರ್ಯದಲ್ಲಿ ಸಾರ್ವಜನಿಕರು, ಸಂಘಸಂಸ್ಥೆಗಳು, ವಿದ್ಯಾರ್ಥಿಗಳು ಸ್ವಯಂಪ್ರೇರಿತವಾಗಿ ಪಾಲ್ಗೊಳ್ಳುತ್ತಿರುವುದು ಕೆರೆ ಮಹತ್ವ ಎಲ್ಲರಿಗೂ ಅರ್ಥವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ.ಮಹೇಶ್, ಸದಸ್ಯರಾದ ಟಿ.ಡಿ.ಮೇಘರಾಜ್, ಬಿ.ಎಚ್.ಲಿಂಗರಾಜ್, ಸವಿತಾ ವಾಸು, ಗಣೇಶಪ್ರಸಾದ್, ಅರವಿಂದ ರಾಯ್ಕರ್, ಪೌರಾಯುಕ್ತ ರಾಜು ಡಿ. ಬಣಕಾರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಎಚ್.ಕೆ.ನಾಗಪ್ಪ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
ತೀರ್ಥಹಳ್ಳಿಯಲ್ಲಿ ವೈಭವದ ಜಾತ್ರೆ; ಬುರ್ಖಾ ಧರಿಸಿದ್ದ ಅನಾಮಧೇಯ ವ್ಯಕ್ತಿ ಪತ್ತೆ !
Anandapur: ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.